ಅದಾನಿಗೆ ಧಾರಾವಿ: ಜನರನ್ನು ಬೆದರಿಸಿ ಒಪ್ಪಿಗೆ ಪಡೆಯುತ್ತಿರುವ ಸಮೀಕ್ಷಕರು; ಗಂಭೀರ ಆರೋಪ

Date:

ಏಷ್ಯಾದ ಅತಿದೊಡ್ಡ ಕೊಳಗೇರಿ ಎಂದೇ ಹೆಸರಾಗಿರುವ ಮುಂಬೈನ ಧಾರಾವಿಯಲ್ಲಿ ಪುನರ್‌ ಅಭಿವೃದ್ಧಿ ಯೋಜನೆಗಾಗಿ ಸಮೀಕ್ಷೆಗಳು ನಡೆಯುತ್ತಿವೆ. ಈ ಸಮೀಕ್ಷೆ ನಡೆಸುತ್ತಿರುವ ಸಮೀಕ್ಷಕರು ಧಾರಾವಿಯ ಹಿರಿಯ ನಾಗರಿಕರು ಮತ್ತು ವಿಶೇಷಚೇತನರನ್ನು ಬೆದರಿಸಿ ಬಲವಂತವಾಗಿ ಒಪ್ಪಿಗೆ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದೆ ವರ್ಷಾ ಗಾಯಕ್ವಾಡ್ ಗಂಭೀರ ಆರೋಪ ಮಾಡಿದ್ದಾರೆ.

ಧಾರಾವಿ ಕೊಳಗೇರಿಯು ಮುಂಬೈನ ಹೃದಯ ಭಾಗದಲ್ಲಿ, ಬರೋಬ್ಬರಿ 600 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ. ಈ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಪುನರ್‌ವಸತಿ ಒದಗಿಸುತ್ತೇವೆಂದು ಹೇಳಿಕೊಂಡು ‘ಧಾರಾವಿ ಪುನರ್‌ ಅಭಿವೃದ್ಧಿ ಯೋಜನೆ’ಯನ್ನು ಸರ್ಕಾರ ರೂಪಿಸಿದೆ. ಯೋಜನೆಯ ಗುತ್ತಿಗೆಯನ್ನು ಪ್ರಧಾನಿ ಮೋದಿ ಅವರ ಅತ್ಯಾಪ್ತ ಎಂದೇ ಕರೆಯಲಾಗುವ ಗೌತಮ್ ಅದಾನಿ ಅವರ ‘ಅದಾನಿ ಗ್ರೂಪ್‌’ಗೆ ನೀಡಲಾಗಿದೆ. ಈ ಪ್ರದೇಶದಲ್ಲಿ ಸುಮಾರು 1 ಲಕ್ಷ ಮನೆಗಳನ್ನು ಬಹುಮಹಡಿ ಕಟ್ಟಡಗಳಲ್ಲಿ ನಿರ್ಮಿಸುವುದು ಪ್ರಮುಖ ಉದ್ದೇಶವಾಗಿದೆ. ಅಂದರೆ, 600 ಎಕರೆ ಜಾಗದ ಪೈಕಿ, ಒಂದು ಪುಟ್ಟ ಭಾಗದಲ್ಲಿ ಅಲ್ಲಿನ ನಿವಾಸಿಗಳಿಗೆ ಮನೆ ನಿರ್ಮಿಸಿಕೊಟ್ಟು, ಉಳಿದ ಬಹುಪಾಲು ಭೂಮಿಯನ್ನು ಕೈಗಾರಿಕೆಗೆ ಅರ್ಥಾತ್ ಅದಾನಿ ಗ್ರೂಪ್‌ನ ಕೈಗಾರಿಕೆಗಳಿಗೆ ನೀಡುವ ಒಳಸಂಚು ಇದೆ ಎಂದು ಆರೋಪಿಸಲಾಗಿದೆ.

ಅಭಿವೃದ್ಧಿ ಹೆಸರಿನಲ್ಲಿ ತಮ್ಮ ಭೂಮಿಯನ್ನು ಕಸಿದುಕೊಂಡು ಬಂಡವಾಳಿಗರಿಗೆ ನೀಡುವ ಸರ್ಕಾರದ ಹುನ್ನಾರವನ್ನು ಅರಿತಿರುವ ಧಾರಾವಿ ಜನರು ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಸಮೀಕ್ಷೆಯಲ್ಲಿ ಭಾಗಿಯಾಗಲು ನಿರಾಕರಿಸುತ್ತಿದ್ದಾರೆ. ಆದರೆ, ಸಮೀಕ್ಷಕರು ಅಲ್ಲಿನ ಜನರನ್ನು ಬೆದರಿಸಿ, ಯೋಜನೆಗೆ ಒಪ್ಪಿಗೆ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವರ್ಷಾ ಗಾಯಕ್ವಾಡ್, “ಇದು ಸಮೀಕ್ಷೆಯಲ್ಲ, ರಾಜ್ಯ ಸರ್ಕಾರ ಪ್ರಾಯೋಜಿತ ಶೋಷಣೆ. ಅದಾನಿ ಗ್ರೂಪ್‌ನ ಸಮೀಕ್ಷಕರು ಮನೆಯಲ್ಲಿ ಯುವಕರು ಇಲ್ಲದಿದ್ದಾಗ, ಮನೆಗಳಿಗ ನುಗ್ಗಿ ಹಿರಿಯ ನಾಗರಿಕರನ್ನು ಬೆದರಿಸಿ ಬಲವಂತವಾಗಿ ಒಪ್ಪಿಗೆ ಪಡೆಯುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಧಾರಾವಿಯ ಬಡವರನ್ನು ಹೆದರಿಸಿ, ಮೂಲೆಗೆ ದೂಡಿ, ಮುಂಬೈಯ ಹೃದಯ ಭಾಗವನ್ನು ಅದಾನಿಗೆ ಕೊಡಲು ಹುನ್ನಾರ ನಡೆದಿದೆ. ಈ ಸಮೀಕ್ಷೆಯನ್ನು ತಕ್ಷಣವೇ ನಿಲ್ಲಿಸಬೇಕು. ಧಾರಾವಿ ಎಂದಿಗೂ ತಲೆಬಾಗುವುದಿಲ್ಲ. ನಾವು ನಮ್ಮ ಹಿರಿಯರಿಗೆ ಬೆಂಬಲವಾಗಿ ನಿಲ್ಲುತ್ತೇವೆ” ಎಂದು ವರ್ಷಾ ಗಾಯಕ್ವಾಡ್ ಹೇಳಿದ್ದಾರೆ.

ಅವರು ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅಧಿಕಾರಿಯೊಬ್ಬ ವೃದ್ಧೆಯ ಕೈ ಹಿಡಿದು ಸಹಿ ಹಾಕುವಂತೆ ಒತ್ತಾಯಿಸುತ್ತಿರುವುದು ಮತ್ತು ಸಮೀಕ್ಷಕ ವೃದ್ಧೆಯ ಹೆಬ್ಬೆರಳನ್ನು ಹಿಡಿದು ಬಲವಂತವಾಗಿ ಒಪ್ಪಿಗೆ ಪತ್ರಕ್ಕೆ ಸಹಿ ಪಡೆಯುತ್ತಿರುವುದು ಕಂಡು ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...