ಧರ್ಮಸ್ಥಳ ಪ್ರಕರಣ | ಅಂತಿಮ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಸೂಚನೆ: ಗೃಹ ಸಚಿವ ಪರಮೇಶ್ವರ್‌

Date:

ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಎಸ್ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಕ್ಟೋಬರ್ ತಿಂಗಳಲ್ಲಿ ವರದಿ ಕೊಡುವುದಾಗಿ ಎಸ್‌ಐಟಿಯವರು ಹೇಳಿದ್ದರು. ಅ.31ರೊಳಗೆ ಕೊಡಬಹುದು ಅಥವಾ ಒಂದೆರಡು ದಿನ ವಿಳಂಬವಾಗಬಹುದು. ಅಂತಿಮ ವರದಿಯನ್ನು ಕೊಡುವಂತೆ ಹೇಳಿದ್ದೇವೆ. ಪತ್ತೆಯಾಗಿರುವ ಮೂಳೆಗಳ ಎಫ್‌ಎಸ್‌ಎಲ್ ವರದಿ, ಕೆಮಿಕಲ್ ರಿಪೋರ್ಟ್ಸ್ ವಿಶ್ಲೇಷಣೆ ಮಾಡಿ ವರದಿ ಕೊಡುತ್ತೇವೆ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.

ಸಂಪುಟ ಪುನರ್ ರಚನೆ ಕುರಿತು ಮಾತನಾಡಿದ ಅವರು, “ಹೈಕಮಾಂಡ್ ತೀರ್ಮಾನ ನಾವು ಹೇಳಲು ಬರುವುದಿಲ್ಲ. ಅವರು ಏನು ತೀರ್ಮಾನ ಮಾಡುತ್ತಾರೆ ಕಾದು ನೋಡೋಣ. ದಿನನಿತ್ಯ ಮಾಧ್ಯಮದಲ್ಲಿ ಹೇಳಿಕೆ ಕೊಡಬಹುದು ಅಷ್ಟೇ. ಇಲ್ಲಿವರೆಗೆ ಹೈಕಮಾಂಡ್‌ನವರು ಏನಾದರು ಹೇಳಿದ್ದಾರೆಯೇ? ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಮಾಡುತ್ತೇವೆ ಎಂಬುದರ ಬಗ್ಗೆ ಹೈಕಮಾಂಡ್‌ನಿಂದ ಯಾವುದೇ ಮಾಹಿತಿ ಇಲ್ಲ. ಏನಾದರು ಹೈಕಮಾಂಡ್‌ನಿಂದ ಸೂಚನೆ ಬಂದಿದ್ದರೆ ನಾವು ಪ್ರತಿಕ್ರಿಯಿಸಬಹುದು. ಹೈಕಮಾಂಡ್ ತಿಳಿಸುವವರೆಗೂ ಯಾವುದಕ್ಕು ಮಹತ್ವ ಇರುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧಿಕಾರ ಹಂಚಿಕೆ, ಎರಡೂವರೆ ವರ್ಷ ಅಂತ ಚರ್ಚೆ ಆಯ್ತು. ಈಗ ಸಂಪುಟ ಪುನರ್ ರಚನೆ ಎನ್ನುತ್ತಿದ್ದಾರೆ. ಲೀಡರ್‌ಶಿಪ್ ಬದಲಾವಣೆ ಅಂತಾಯ್ತು. ದಿನನಿತ್ಯ ಈ ರೀತಿ ಗೊಂದಲಗಳಾಗುತ್ತಿದ್ದರೆ ಆಡಳಿತದ ಮೇಲೆ ಪರಿಣಾಮ ಬೀರುವುದಿಲ್ಲವೆ? ಆಡಳಿತ ಚೆನ್ನಾಗಿ ಆಗಬೇಕು ಅಂತಂದರೆ ಇದೆಲ್ಲ ನಿಲ್ಲಬೇಕು. ನೆರೆ ಹಾವಳಿ, ರಸ್ತೆ ಗುಂಡಿ ಬಿದ್ದಿದೆ ಈತರ ಮಾತುಗಳನ್ನು ನಿಲ್ಲಿಸಲು ಆಡಳಿತ ಚುರುಕುಗೊಳಿಸಬೇಕು. ಈ ಒಂದು ಗೊಂದಲದಲ್ಲಿ ನಾವು ಇರುವುದು ಸರಿಯಲ್ಲ” ಎಂದು ಹೇಳಿದರು.

ನವೆಂಬರ್ 1ರಂದು ಮುಖ್ಯಮಂತ್ರಿಗಳು ಸಂತೋಷಕೂಟ ಏರ್ಪಡಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ. ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಊಟ ಹಾಕಿಸಿದರೆ, ರಾಜಕೀಯ ದೊಡ್ಡ ಬೆಳವಣಿಗೆ ಎನ್ನಬೇಕಿಲ್ಲ. ಇದಕ್ಕೆ ರಾಜಕೀಯವಾಗಿ ವಿಶ್ಲೆಷಣೆ ಮಾಡುವುದು ಸರಿಯಲ್ಲ. ಸಂಪುಟ ಪುನಾರಚನೆ ಮಾಡುವ ಕುರಿತು ಹೈಕಮಾಂಡ್‌ನವರು ಈವರೆಗೆ ಯಾರು ಹೇಳಿಲ್ಲ. ಈ ಬಗ್ಗೆ ಮುನ್ಸೂಚನೆಯೂ ಇಲ್ಲ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ತಲೆ ಮೇಲೆ ಹೊತ್ತು ಮೆರೆಸಿದವರು ಈಗ ಪಲಾಯನ ಮಾಡುವುದು ತರವೇ?

ಸಚಿವ ಮುನಿಯಪ್ಪ ಅವರು ಸಿಎಂ ಆಗಲಿ ಎಂದು ಶಿವಮೊಗ್ಗದಲ್ಲಿ ಘೋಷಣೆ ಕೂಗಿರುವ ಬಗ್ಗೆ ಪ್ರತಿಕ್ರಿಯಿಸಿ, “ಕೆ.ಹೆಚ್.ಮುನಿಯಪ್ಪ ಅವರು ಏಳು ಬಾರಿ ಎಂಸಂಸದರಾಗಿದ್ದವರು.‌ ಇದು ಸಾಮಾನ್ಯವಲ್ಲ. ಪಕ್ಷದಲ್ಲಿ ಹಿರಿಯರು, ಕೇಂದ್ರದಲ್ಲಿ ಸಚಿವರಾಗಿದ್ದರು. ಈಗ ರಾಜ್ಯದಲ್ಲಿ ಸಚಿವರಾಗಿದ್ದಾರೆ. ಅವರು ಸಮರ್ಥರಿದ್ದು, ಅರ್ಹತೆಯೂ ಇದೆ. ಮುನಿಯಪ್ಪನವರು ಸಿಎಂ ಆದರೆ ನಾನು ಸಂತೋಷ ಪಡುವವನೆ” ಎಂದು ಹೇಳಿದರು.

“ನಾವೆಲ್ಲ ಒಂದು ವರ್ಗಕ್ಕೆ ಸೇರಿದ್ದೇವೆ. ಆ ವರ್ಗಕ್ಕೆ ಅವಕಾಶ ಸಿಕ್ಕಿತಲ್ಲ ಎಂಬುದು ಸಂತೋಷ ಆಗುತ್ತದೆ. ಯಾವ ವರ್ಗ ತುಳಿತಕ್ಕೆ ಒಳಗಾಗಿತ್ತು, ಆ ವರ್ಗಕ್ಕೆ ಆಡಳಿತ ವರ್ಗ ಆಗುತ್ತದೆ ಅಂದರೆ ಸಂತೋಷ‌ಪಡಲು ಆಗುವುದಿಲ್ಲವೇ” ಎಂದರು.

ದಲಿತ ಸಿಎಂ ಸ್ಥಾನ ಈ ಸಲ ಸಿಗಬೇಕು ಎಂಬ ವಿಶ್ವಾಸ ಏನಾದರು ಇದೇಯೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಪಕ್ಷದಲ್ಲಿ ತೀರ್ಮಾನ ಮಾಡುವವರು ಯಾರು? ನಾವು ಇಲ್ಲಿ ಕುಳಿತುಕೊಂಡು ನಾಲ್ಕು ಜನ ಹೇಳಿದರೆ ಆಗುವುದಿಲ್ಲ. ಹೈಕಮಾಂಡ್‌ನವರು ವಿಶ್ಲೇಷಣೆ ಮಾಡುತ್ತಾರೆ. ಬಿಹಾರದಲ್ಲಿ ಎಲೆಕ್ಷನ್ ನಡೆಯುತ್ತಿದೆ. ತದನಂತರ ಇದಕ್ಕೆ ಅವಶ್ಯಕತೆ ಇದ್ದರೆ ಅವರೇ ಮಾಡುತ್ತಾರೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...