ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

Date:

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು ಎಸ್‌ಐಟಿ ಬಂಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, “ದೂರು ಕೊಟ್ಟಿದ್ದವನ ಹಿನ್ನೆಲೆ ತಿಳಿದುಕೊಂಡಿದ್ದಿದ್ದರೆ ಸರ್ಕಾರದ ದುಡ್ಡಾದರೂ ಉಳಿಯುತ್ತಿತ್ತು. ಆದರೆ ಸರ್ಕಾರ ಇದಕ್ಕೆ ಆಸ್ಪದ ಕೊಡಲಿಲ್ಲ. ಇಂದು ಸತ್ಯ ಹೊರ ಬಂದಿದೆ. ತನಿಖೆ ನೆಪದಲ್ಲಿ ರಾಜ್ಯದ ಜನರ ತೆರಿಗೆ ಹಣ ಪೋಲು ಮಾಡಲಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಮುಖಂಡ, “ಧರ್ಮಸ್ಥಳ ಕುರಿತಾಗಿ ಎಸ್ಐಟಿ ತನಿಖೆಯನ್ನು ನಾವು ಸ್ವಾಗತಿಸಿದ್ದೆವು. ಆದರೆ ದೂರುದಾರನ ಹಿನ್ನೆಲೆ ಮತ್ತು ದೂರಿನ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಆಗ್ರಹಿಸಿದ್ದೆವು. ಆದರೆ ಸರ್ಕಾರ ಇದಕ್ಕೆ ಆಸ್ಪದ ಕೊಡಲಿಲ್ಲ. ಇಂದು ಸತ್ಯ ಹೊರ ಬಂದಿದೆ, ತನಿಖೆ ನೆಪದಲ್ಲಿ ರಾಜ್ಯದ ಜನರ ತೆರಿಗೆ ಹಣ ಪೋಲು ಮಾಡಲಾಗಿದೆ. ಧರ್ಮಸ್ಥಳ ಕ್ಷೇತ್ರಕ್ಕೆ ಅಪಚಾರ ಎಸಗಲಾಗಿದೆ. ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನತೆಯಲ್ಲಿ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಧರ್ಮಸ್ಥಳದ ವಿಚಾರ ಆರಂಭವಾದಾಗಿನಿಂದ ಇದರಲ್ಲಿ ಷಡ್ಯಂತ್ರ ಇದೆ ಎಂದು ಮೊದಲೇ ಹೇಳಿದ್ದೆವು. ಬರೀ ಬುರುಡೆಯನ್ನೇ ಬಿಟ್ಟಿದ್ದಾರೆ. ಆದರೆ ರಾಜ್ಯದ ಜನರು ನೋವನ್ನು ಅನುಭವಿಸಿದರು. ಧರ್ಮಸ್ಥಳದ ಬಗ್ಗೆ ಇದ್ದಂತಹ ಭಕ್ತಿ ಭಾವನೆ ಹಾಳು ಮಾಡಿದರು. ಎಸ್​ಐಟಿ ರಚನೆ ಮಾಡುವಂತೆ ಸಿಎಂಗೆ ನಿತ್ಯ ಸಾವಿರಾರು ಪತ್ರಗಳು ಬರುತ್ತಿದ್ದವು. ಆದರೆ ಇವರು ಮೊದಲು ಎಸ್​ಐಟಿ ಮಾಡಿದ್ದೇ ತಪ್ಪು. ದೂರು ಕೊಟ್ಟವನು ಏನು ಅಂತ ಮೊದಲೇ ತಿಳಿಯಬೇಕಿತ್ತು. ಮಾಸ್ಕ್​ಮ್ಯಾನ್​ನ ಹೆಂಡತಿಯೇ ಅವನ ಬಗ್ಗೆ ಆರೋಪ ಮಾಡಿದ್ದಾಳೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಷ್ಟೊಂದು ಪೊಲೀಸ್ ಅಧಿಕಾರಿಗಳು ತಮ್ಮ ದಿನನಿತ್ಯದ ಕೆಲಸ ಬಿಟ್ಟು ಇದರ ತನಿಖೆಗೆ ಹೋಗಿದ್ದಾರೆ. ಬೆಟ್ಟ ಅಗೆದು, ಇಲಿ ಹಿಡಿದಿದ್ದಾರೆ. ಇಂತ ತಪ್ಪನ್ನ ಯಾವ ಸರ್ಕಾರ ಕೂಡ ಮಾಡಿಲ್ಲ. ಯಾರೋ ದಾರಿಹೋಕ ಹೇಳಿದ ಅಂತೆ ಮಾಡಿದ್ದಾರೆ. ಕಾಂಗ್ರೆಸ್​ನವರು ರಾಜ್ಯದ ಜನರ ಕ್ಷಮೆ ಕೇಳಬೇಕು” ಎಂದು ಆರ್​ ಅಶೋಕ್ ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಸಾಕ್ಷಿ ದೂರುದಾರ

“ಮುಸುಕುಧಾರಿ ಮನುಷ್ಯನಿಗೆ ಮನೆ ಕೊಡುತ್ತೇವೆ, ಹಣ ಕೊಡುತ್ತೇವೆ ಎಂದು ಆಸೆ ತೋರಿಸಿದ್ದಾರೆ. ಅವನನ್ನ ಈಗ ಜೈಲಿಗೆ ಕಳಿಸಿದ್ದಾರೆ. ಮುಸುಕುಧಾರಿ ಮುಖ್ಯ ಅಲ್ಲ, ಆತನ ಹಿಂದೆ ಇರುವವರನ್ನು ಪತ್ತೆ ಮಾಡಬೇಕು. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಗೌರವ ಇದ್ದರೆ, ಮುಸುಕುಧಾರಿ ಹಿಂದೆ ಯಾರಿದ್ದಾರೆ ಅಂತ ಪತ್ತೆ ಹಚ್ಚಲು ಎಸ್​ಐಟಿ ರಚಿಸಬೇಕು. ಆಗುವುದಿಲ್ಲ ಎಂದರೆ ಎನ್​​ಐಎ ತನಿಖೆಗೆ ಕೊಡಿ” ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...