ಧಾರವಾಡ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಸ್ವತಂತ್ರ ಸ್ಪರ್ಧೆ ಘೋಷಿಸಿದ ದಿಂಗಾಲೇಶ್ವರ ಸ್ವಾಮೀಜಿ

Date:

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಗೆ ದೊಡ್ಡ ಸವಾಲು ಎದುರಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಅಧಿಕೃತವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ರಾಜಕೀಯ ರಂಗವನ್ನು ಪ್ರವೇಶಿಸುತ್ತೇನೆ” ಎಂದು ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧಿಕಾರದ ಮತ್ತು ಸಂಪತ್ತಿನ ಮದದಲ್ಲಿ ಪ್ರಲ್ಹಾದ್ ಜೋಶಿ ಬದುಕುತ್ತಿದ್ದಾರೆ. ಜೋಶಿಯವರ ಚೇಲಾಗಳು ಸಾಮಾಜಿಕ ಜಾಲತಾಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಜೋಷಿ ಅವರೇ, ನಿಮ್ಮ ಯಾವುದೇ ಕುತಂತ್ರ ನಮ್ಮ ಮುಂದೆ ನಡೆಯಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಪ್ರಲ್ಹಾದ್‌ ಜೋಶಿ ದುರಾಡಳಿತ ಬಗ್ಗೆ ಬಿಜೆಪಿ ಹೈಕಮಾಂಡ್ ನಾಯಕರು ಗಮನಹರಿಸುತ್ತಿಲ್ಲ. ಅವರಿಗೆ ಅದೇ ಬೇಕಾಗಿದೆ ಅನ್ನಿಸುತ್ತದೆ. ಹೀಗಾಗಿ, ಈ ದಿಂಗಾಲೇಶ್ವರ ರಾಜಕೀಯ ಪ್ರವೇಶ ಮಾಡಬೇಕಾಯಿತು. ಈ ಚುನಾವಣೆ ಎರಡು ರಾಷ್ಟ್ರೀಯ ಪಕ್ಷದ ವಿರುದ್ಧ ಸ್ವಾಭಿಮಾನದ ಯುದ್ಧ ಆಗಿದೆ. ಇದು ಮತದಾರರು ಮಾಡಿದ ತೀರ್ಮಾನ ಆಗಿದೆ. ಹೀಗಾಗಿ ನನಗೆ ಸ್ಪರ್ಧೆ ಮಾಡುವಂತೆ ಮತದಾರರು ಒತ್ತಾಯ ಮಾಡಿದ್ದಾರೆ” ಎಂದರು.

joshi a

“ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ಅವರ ಪುತ್ರ ಕಾಂತೇಶ್‌ ಕಳೆದ ಒಂದೂವರೆ ವರ್ಷದಿಂದ ಹಾವೇರಿಯಲ್ಲಿ ಸಕ್ರಿಯರಾಗಿದ್ದರು. ಅವರಿಗೆ ಟಿಕೆಟ್‌ ತಪ್ಪಿಸಿರುವುದು ಇದೇ ಪ್ರಲ್ಹಾದ್‌ ಜೋಶಿ. ನಾನು ಹಿಂದೆಯೇ ಕೆಎಸ್‌ ಈಶ್ವರಪ್ಪ ಹಾಗೂ ಅವರ ಪುತ್ರನಿಗೆ ಪ್ರಹ್ಲಾದ್‌ ಜೋಶಿಯನ್ನು ನಂಬಬೇಡಿ ಎಂದು ಹೇಳಿದ್ದೆ. ಆದರೆ, ಅವರು ನನ್ನ ಮಾತು ಕೇಳಲಿಲ್ಲ” ಎಂದು ದಿಂಗಾಲೇಶ್ವರ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ ಸಿಎಂ ಹುದ್ದೆಯಿಂದ ಕೇಜ್ರಿವಾಲ್ ವಜಾಗೊಳಿಸಲು ಮೂರನೇ ಅರ್ಜಿ: ಹೈಕೋರ್ಟ್‌ ಗರಂ

ದುರಾಡಳಿತದ ವಿರುದ್ಧ ನನ್ನ ಹೋರಾಟ ಎಂದ ದಿಂಗಾಲೇಶ್ವರ ಸ್ವಾಮೀಜಿ, “ಪ್ರಧಾನಿ ಮೋದಿ ಭೇಟಿಗೆ ಯಾವುದೇ ರಾಜ್ಯದ ಬಿಜೆಪಿ ಸಂಸದರು ಅವಕಾಶ ಕೊಡಲಿಲ್ಲ. ಪ್ರಲ್ಹಾದ್ ಜೋಷಿಯವರಿಗೆ ಮೋದಿಯವರು ದೂರ ಆಗುತ್ತಾರೆ ಅನ್ನುವ ಭಯವಿದೆ. ನನ್ನ ಗುರಿಯನ್ನು ಮುಟ್ಟುವವರೆಗೂ ಇನ್ಮುಂದೆ ಮಾಲೆಯನ್ನು ಧರಿಸಲ್ಲ. ಹೂಮಾಲೆಯನ್ನ ಸ್ವೀಕಾರ ಮಾಡುವುದಿಲ್ಲ” ಎಂದು ಇದೇ ವೇಳೆ ದಿಂಗಾಲೇಶ್ವರ ಸ್ವಾಮೀಜಿ ಶಪಥ ಮಾಡಿದರು.

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ, ಬ್ರಾಹ್ಮಣ ಸಮಾಜದ ಪ್ರಲ್ಹಾದ್ ಜೋಶಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಕುರುಬ ಸಮಾಜದ ವಿನೋದ್ ಅಸೂಟಿ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಸುಮಾರು 6ರಿಂದ 7 ಲಕ್ಷ ಮತದಾರರು ಲಿಂಗಾಯತ ಸಮುದಾಯಕ್ಕೆ ಸೇರಿದವರಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...