ಡಯಾಲಿಸಿಸ್ ಸಿಬ್ಬಂದಿ ವೇತನ ಬಾಕಿ; ಎರಡು ವಾರದೊಳಗೆ ಪಾವತಿಗೆ ಆರೋಗ್ಯ ಸಚಿವ ಸೂಚನೆ

Date:

  • ಏಜನ್ಸಿಯವರಿಂದ ಸಮಯಕ್ಕೆ ಸರಿಯಾಗಿ ವೇತನ ಸಿಗುತ್ತಿಲ್ಲ
  • ಹೆಚ್ವುವರಿ ಭತ್ಯೆಗಳು ವರ್ಷಗಳಿಂದ ಬಾಕಿ ಉಳಿದುಕೊಂಡಿದೆ

ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಬಾಕಿ ವೇತನವನ್ನು ಎರಡು ವಾರದೊಳಗೆ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಡಯಾಲಿಸಿಸ್ ಸಿಬ್ಬಂದಿ ಪ್ರತಿನಿಧಿಗಳ ಸಮಸ್ಯೆಗಳನ್ನು ಆಲಿಸಿದ ಸಚಿವರು, ಸಮಸ್ಯೆಗಳನ್ನು ಒಂದೊಂದಾಗಿ ಬಗೆಹರಿಸುವುದಾಗಿ ಭರವಸೆ ನೀಡಿದರು.

ರಾಜ್ಯಾದ್ಯಂತ ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಪ್ರತಿನಿಧಿಗಳು ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಏಜನ್ಸಿಯವರಿಂದ ಸಮಯಕ್ಕೆ ಸರಿಯಾಗಿ ವೇತನ ದೊರೆಯುತ್ತಿಲ್ಲ.‌ ಅಲ್ಲದೇ ಹೆಚ್ವುವರಿ ಭತ್ಯೆಗಳು ವರ್ಷಗಳಿಂದ ಬಾಕಿ ಇದೆ ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲ್ಲಿಯವರೆಗೂ ಏಜನ್ಸಿಯವರಿಂದ ಪಿ.ಎಫ್ ಪಾವತಿಯಾಗಿಲ್ಲ. ಸಮಸ್ಯೆ ಹೀಗೆ ಮುಂದುವರಿದರೆ ಕಾರ್ಯ ಸ್ಥಗಿತಗೊಳಿಸಿ, ಪ್ರತಿಭಟನೆ ನಡೆಸಲು ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ 800 ಸಿಬ್ಬಂದಿ ನಿರ್ಧರಿಸಿದ್ದೇವೆ ಎಂದು ಮನವರಿಕೆ ಮಾಡಿದರು.

ಸಿಬ್ಬಂದಿಗಳ ಮನವೊಲಿಸುವಲ್ಲಿ ಯಶಸ್ವಿಯಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯ ಸ್ಥಗಿತವಾಗಬಾರದು. ಏಜನ್ಸಿಯವರೊಂದಿಗೆ ಮಾತುಕತೆ ನಡೆಸಿ ಬಾಕಿ ವೇತನ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಎಂದರು.

ಏಜನ್ಸಿ ಗುತ್ತಿಗೆ ಅವಧಿ ಮುಗಿದಿರುವುದರಿಂದ ವೇತನ ಪಾವತಿಯಲ್ಲಿ ಸಮಸ್ಯೆಯಾಗಿದ್ದು, ಈಗಿರುವ ಸಂಜೀವಿನಿ ಏಜನ್ಸಿಯವರೊಂದಿಗೆ ಮಾತುಕತೆ ನಡೆಸಲಾಗಿದೆ. ಈ ಬಗ್ಗೆ ಸಿಎಂ ಜೊತೆ ಕೂಡ ಚರ್ಚೆ ನಡೆಸಿ, ಡಯಾಲಿಸಿಸ್ ಕೇಂದ್ರಗಳಲ್ಲಿ ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ನನ್ನ ಪುತ್ರ ಲೋಕಸಭೆ ಟಿಕೆಟ್‌ ಆಕಾಂಕ್ಷಿ: ಕೆ ಎಸ್‌ ಈಶ್ವರಪ್ಪ

ಎರಡು ವಾರದೊಳಗೆ ಬಾಕಿ ಇರುವ ಭತ್ಯೆ ಪಾವತಿಗೆ ಕ್ರಮ ಕೈಗೊಳ್ಳಲು ಹೇಳಿದ್ದೇನೆ. ತಲಾ 2 ಸಾವಿರ ರೂಪಾಯಿಯಂತೆ ಡಿಸೆಂಬರ್ ವರೆಗಿನ ಭತ್ಯೆ ಕೊಡಿಸುವುದಾಗಿ ಸಿಬ್ಬಂದಿಗೆ ಭರವಸೆ ನೀಡಿದರು. ಅಲ್ಲದೇ ಮೇ ಮತ್ತು ಜೂನ್ ವೇತನ 15 ದಿನದೊಳಗೆ ಸಿಬ್ಬಂದಿಗಳಿಗೆ ಪಾವತಿಸುವುದಾಗಿ ತಿಳಿಸಿದರು.‌

ಏಜನ್ಸಿಯಿಂದ ಪಿಎಫ್ ಮತ್ತು ಇಎಸ್ ಐಪಿ ದೊರಕಿಸಿಕೊಡುವ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗಿದೆ. 15 ದಿನಗಳ ಬಳಿಕ ಮತ್ತೊಮ್ಮೆ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳೋಣ ಎಂದು ಸಚಿವ ಗುಂಡೂರಾವ್ ಸಿಬ್ಬಂದಿಗೆ ತಿಳಿಸಿದರು.

ಸಚಿವರ ಸಕಾರಾತ್ಮಕ ಸ್ಪಂದನೆಗೆ ಸಮಾಧಾನಗೊಂಡ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಎಂದಿನಂತೆ ಕಾರ್ಯ ಮುಂದುವರಿಸಲು ನಿರ್ಧರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...