ಸರ್ವಾಧಿಕಾರಿ ಮೋದಿ ಸರ್ಕಾರ ರೈತರ ಧ್ವನಿ ಹತ್ತಿಕ್ಕಲು ಯತ್ನಿಸುತ್ತಿದೆ: ಖರ್ಗೆ

Date:

ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲು 10 ವರ್ಷಗಳಿಂದ ವಿಫಲವಾಗಿರುವ ಮೋದಿ ಸರ್ಕಾರ, ರೈತರ ಧ್ವನಿ ಹತ್ತಿಕ್ಕುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂಜಾಬ್, ಹರಿಯಾಣ ರೈತರು ದೆಹಲಿ ಚಲೋಗೆ ಕರೆಕೊಟ್ಟಿದ್ದು, ಫೆಬ್ರವರಿ 13ರ ಮಂಗಳವಾರ ದೆಹಲಿಯತ್ತ ಹೊರಟ್ಟಿದ್ದಾರೆ. ಪಂಜಾಬ್ ರೈತರನ್ನು ತಡೆಯಲು ಅಂಬಾಲಾ ಗಡಿಯಲ್ಲಿ ಹರಿಯಾಣ ಸರ್ಕಾರ ದೊಡ್ಡ ಸಿಮೆಂಟ್‌ ಬ್ಲಾಕ್‌ಗಳನ್ನು ಅಳವಡಿಸಿದೆ. ದೆಹಲಿ ಪೊಲೀಸರು ಗಡಿಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದು, ರಸ್ತೆಗಳಿಗೆ ದೊಡ್ಡ ದೊಡ್ಡ ಮೊಳೆಗಳನ್ನು ಹೊಡೆದಿದ್ದಾರೆ. ರೈತ ಪ್ರತಿಭಟನೆಯನ್ನು ಹತ್ತಿಕ್ಕಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯತ್ನಿಸುತ್ತಿದೆ.

ಸರ್ಕಾರದ ನಡೆಯನ್ನು ಖಂಡಿಸಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಖರ್ಗೆ, “ಮುಳ್ಳುತಂತಿ, ಡ್ರೋನ್‌ ಮೂಲಕ ಅಶ್ರುವಾಯು, ಮೊಳೆಗಳು ಮತ್ತು ಗನ್‌ಗಳು ಎಲ್ಲವನ್ನೂ ಹೊಂದಿಸಲಾಗಿದೆ. ಸರ್ವಾಧಿಕಾರಿ ಮೋದಿ ಸರ್ಕಾರವು ರೈತರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“‘ಆಂದೋಲನಜೀವಿ’ ಮತ್ತು ‘ಪರಾವಲಂಬಿ’ ಎಂದು ಕರೆಯುವ ಮೂಲಕ ರೈತರನ್ನು ಹೇಗೆ ಅವಮಾನಿಸಲಾಯಿತು. 750 ಮಂದಿ ರೈತರು ಹೇಗೆ ಪ್ರಾಣ ಕಳೆದುಕೊಂಡರು ಎಂಬುದನ್ನು ನೆನಪಿಡಿ,” ಎಂದು ಅವರು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“10 ವರ್ಷಗಳಲ್ಲಿ ಮೋದಿ ಸರ್ಕಾರ ದೇಶದ ಅನ್ನದಾತರಿಗೆ ನೀಡಿದ್ದ ಮೂರು ಭರವಸೆಗಳನ್ನು – 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವುದು, ಸ್ವಾಮಿನಾಥನ್ ವರದಿಗೆ ಅನುಗುಣವಾಗಿ ವೆಚ್ಚದ ಮೇಲೆ 50% ಆದಾಯ ಹಾಗೂ ಎಂಎಸ್‌ಪಿಗೆ ಕಾನೂನು ಸ್ಥಾನಮಾನ – ಈಡೇರಿಸುವಲ್ಲಿ ವಿಫಲವಾಗಿದೆ” ಎಂದು ಆರೋಪಿಸಿದ್ದಾರೆ.

“ನಾವು ಹೆದರುವುದಿಲ್ಲ, ತಲೆಬಾಗುವುದಿಲ್ಲ. ರೈತ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...