ಬಿಜೆಪಿಗೆ ದೆಹಲಿ ಗದ್ದುಗೆ | ‘ಈರುಳ್ಳಿ’ಯಿಂದ ಕೈ ತಪ್ಪಿದ ಅಧಿಕಾರ ‘ಗ್ಯಾರಂಟಿ’ಗಳಿಂದ ಲಭಿಸಿತೇ?

Date:

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ದೆಹಲಿ ಗದ್ದುಗೆ ಏರುವ ಸಾಧ್ಯತೆ ದಟ್ಟವಾಗಿದೆ. ಸದ್ಯದ ಟ್ರೆಂಡ್‌ ನೋಡಿದರೆ ಬರೋಬ್ಬರಿ 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯ ಸಿಎಂ ಪಟ್ಟ ಬಿಜೆಪಿ ಪಾಲಾಗುವುದು ಖಚಿತವಾಗಿದ್ದು, ‘ಈರುಳ್ಳಿ’ಯಿಂದ ಹೋದ ಅಧಿಕಾರ ‘ಗ್ಯಾರಂಟಿ’ಗಳಿಂದ ಬಂದಂತಾಗಿದೆ.

ದೆಹಲಿಯಲ್ಲಿ ಬಿಜೆಪಿ ಕೊನೆಯ ಬಾರಿಗೆ ಸರ್ಕಾರ ನಡೆಸಿದ್ದು 1998ರಲ್ಲಿ. ಆಗ ದೇಶದ ಪ್ರಧಾನಿ ವಾಜಪೇಯಿ. ದೇಶದಲ್ಲಿ ಈರುಳ್ಳಿ ಬೆಲೆ ಗಗನಕ್ಕೆ ಏರಿತ್ತು. ದೆಹಲಿ ರಾಜ್ಯ ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ ತಣಿಸಲು ಕೇಂದ್ರ ಮಂತ್ರಿಯಾಗಿದ್ದ, ಆಗಿನ ಸುಷ್ಮಾ ಸ್ವರಾಜ್​ ಅವರನ್ನು ಬಿಜೆಪಿ ದೆಹಲಿ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು.

ಸುಷ್ಮಾ ಸ್ವರಾಜ್ ದೆಹಲಿಯ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸಿದ್ದರು. ಆದರೆ, ಅವರು ಅಧಿಕಾರ ನಡೆಸಿದ್ದು ಕೇವಲ 52 ದಿನಗಳು ಮಾತ್ರ. ನಂತರ ಅವರು ಚುನಾವಣೆಯಲ್ಲಿ ಸೋತು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕಾಯಿತು.ಕಾರಣ ಸುಷ್ಮಾ ಸ್ವರಾಜ್ ಉಳ್ಳಾಗಡ್ಡಿ ಬೆಲೆಯನ್ನು ಬೆಲೆಯನ್ನು ಕಡಿಮೆ ಮಾಡಿ, ಸಾರ್ವಜನಿಕರಿಗೆ ಕೆಜಿಗೆ 5 ರೂಪಾಯಿಯಂತೆ ಈರುಳ್ಳಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ದಿಲ್ಲಿ ಜನ ಇವರ ಭರವಸೆಯನ್ನು ನಂಬಿರಲಿಲ್ಲ. ಬದಲಾಗಿ ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತರಕಾರಿ ಬೆಲೆ ಏರಿಕೆ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗೆ ಇಳಿಯುವಂತೆ ಮಾಡಿತ್ತು. ಸುಷ್ಮಾ ಸ್ವರಾಜ್​ ಅವರನ್ನು ಬಿಜೆಪಿ ಟ್ರಂಪ್ ಕಾರ್ಡ್​ ಆಗಿ ಬಳಕೆ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಲಿಲ್ಲ. ಕಾಂಗ್ರೆಸ್‌ ಬರೊಬ್ಬರಿ 52 ಸ್ಥಾನಗಳಲ್ಲಿ ಗೆಲುವು ಸಾಧಿಸಿ, ಶೀಲಾ ದೀಕ್ಷಿತ್ ಅವರು ಸತತ 15 ವರ್ಷಗಳ ಕಾಲ ಆಡಳಿತ ನಡೆಸಿದರು.

ಅರವಿಂದ್​ ಕೇಜ್ರಿವಾಲ್​ ಅವರ ಉಚಿತ ಕೊಡುಗೆಗಳಿಗೆ ಮುಂದೆ ಈಗ ಮೋದಿ ಗ್ಯಾರಂಟಿಗಳ ಅಸ್ತ್ರದ ಮೂಲಕವೇ ದೆಹಲಿ ಅಧಿಕಾರ ಹಿಡಿಯುವ ಸಾಧ್ಯತೆ ಕಾಣುತ್ತಿದೆ. ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಎಲ್​ಪಿಜಿ ಗ್ಯಾಸ್​ ಸಿಲಿಂಡರ್‌​ಗಳನ್ನು 500 ರೂ.ಗೆ ನೀಡಿವುದು, ವೃದ್ಧಾಪ್ಯ ಪಿಂಚಣಿ 2,500ಕ್ಕೆ ಹೆಚ್ಚಳ ಹಾಗೂ ಮಹಿಳೆಯರಿಗೆ ತಿಂಗಳಿಗೆ 2,500 ರೂ. ನೀಡುವುದಾಗಿ ಘೋಷಣೆ ಮಾಡಿತ್ತು.

ಬಿಜೆಪಿ 46 ಸ್ಥಾನಗಳಲ್ಲಿ ಮುನ್ನಡೆಯಲ್ಲಿರುವುದನ್ನು ನೋಡಿದರೆ ದೆಹಲಿ ಜನತೆ ಬಿಜೆಪಿಯ ಗ್ಯಾರಂಟಿಗಳಿಗೆ ಮನಸೋತು ಆಮ್‌ ಆದ್ಮಿ ಕೈ ಬಿಟ್ಟಂತೆ ಕಾಣುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...