ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ ಭೇಟಿ ಮಾಡಲಾಗಿದೆ. ಸಂಜೆ ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಗೊಂದಲವಿಲ್ಲ. ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದರು.

ಪಕ್ಷದ ಶಾಸಕರೇ ಈ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಈ ಕುರಿತು ತಿಳಿದಿರುವುದಿಲ್ಲ. ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಬೇಕು ಎಂದರು.

ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ

ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದರು. ಶಾಸಕರಿಗಿಂತ ಹೆಚ್ಚಾಗಿ ಮಾಧ್ಯಮಗಳೇ ಈ ಕುರಿತು ಹೆಚ್ಚು ಮಾತನಾಡುತ್ತಿವೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಯ್ದೆ-ಕಾನೂನುಗಳು ಬಡವರ ವಿರುದ್ಧವೇ ಅಥವಾ ಪ್ರಭಾವಿಗಳ ಪರವೇ?

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರ ಸಿದ್ಧ

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಬಿಜೆಪಿ ಜೆಡಿಎಸ್ ನಿಂದ ಪಾಲಿಕೆ ಚುನಾವಣೆಗಳಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

ಮಾರ್ಚ್ ಮೊದಲ ವಾರದಲ್ಲಿ ಬಜೆಟ್

ಬಹುತೇಕ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನಿಗೆ ಉತ್ತರಿಸಿದರು.

ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶ ನಡೆಸುವ ಬಗ್ಗೆ ಚಿಂತನೆ

ಮುಖ್ಯಮಂತ್ರಿಯಾಗಿ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಎಚ್. ಡಿ.ಕುಮಾರಸ್ವಾಮಿ ವರ್ತನೆಯನ್ನು ಗಮನಿಸುವುದಿಲ್ಲ

ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ರಾಜ ರಾಜಕಾರಣಕ್ಕೆ ಮರಳುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಈಗ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು , ಕ್ರಿಯಾಶೀಲರಾಗಿದ್ದಾರೆ. ಅವರ ವರ್ತನೆ, ಹಾವಭಾವ ಇವುಗಳನ್ನು ಮಾಧ್ಯಮಗಳೇ ಗಮನಿಸಬೇಕು ನಾವು ಗಮನಿಸುವುದಿಲ್ಲ ಎಂದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...