ಅಂಗಿ ಕಳಚಿ ಎಂದರು, ನಾನು ದೇಗುಲದ ಒಳಗೆ ಕಾಲಿಡಲಿಲ್ಲ: ಕೇರಳ ಘಟನೆ ಮೆಲುಕು ಹಾಕಿದ ಸಿದ್ದರಾಮಯ್ಯ

Date:

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ “ಸನಾತನ ಧರ್ಮ ನಿರ್ಮೂಲನೆ” ಹೇಳಿಕೆಯ ಬಗ್ಗೆ ಬಿಜೆಪಿ ನಾಯಕರಿಂದ ಪ್ರತಿಭಟನೆ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ದೇಗುಲದ ಸಿಬ್ಬಂದಿ ಅಂಗಿ ಕಳಚಿ ಎಂದದ್ದಕ್ಕೆ ದೇಗುಲದ ಪ್ರವೇಶ ನಿರಾಕರಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನೆಯೊಂದನ್ನು ಮೆಲುಕು ಹಾಕಿದ್ದಾರೆ.

ಸಮಾಜ ಸುಧಾರಕ ನಾರಾಯಣ ಗುರುಗಳ 169ನೇ ಜನ್ಮದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಒಮ್ಮೆ, ನಾನು ಕೇರಳದ ದೇವಸ್ಥಾನಕ್ಕೆ ಹೋದಾಗ, ಅವರು ನನ್ನ ಅಂಗಿಯನ್ನು ತೆಗೆದು ಒಳಗೆ ಪ್ರವೇಶಿಸುವಂತೆ ಹೇಳಿದರು. ಆದರೆ ನಾನು ದೇವಸ್ಥಾನ ಪ್ರವೇಶಿಸಲು ನಿರಾಕರಿಸಿದೆ ಮತ್ತು ನಾನು ಹೊರಗಿನಿಂದ ಪ್ರಾರ್ಥನೆ ಮಾಡುತ್ತೇನೆ ಎಂದು ಸಿಬ್ಬಂದಿಗೆ ಹೇಳಿದೆ. ಅಲ್ಲದೆ ಸಿಬ್ಬಂದಿ ಕೆಲವರನ್ನು ಬಿಟ್ಟು ನನ್ನ ಜೊತೆಯಿದ್ದ ಹಲವರಿಗೆ ಅಂಗಿಯನ್ನು ಕಳಚಿ ಎಂದರು. ಆದರೆ ಇದು ಅಮಾನವೀಯ ಪದ್ಧತಿ. ದೇವರ ಮುಂದೆ ಎಲ್ಲರೂ ಸಮಾನರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಾಮಾಜಿಕ ನ್ಯಾಯ ಶಾಶ್ವತವಾಗಿ ಅರಳಲಿ: ಪತ್ರ ಮುಖೇನ ಬಿಜೆಪಿಗೆ ಉದಯನಿಧಿ ಸ್ಟಾಲಿನ್ ತಿರುಗೇಟು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲವಾರು ದಕ್ಷಿಣ ಭಾರತದ ದೇವಾಲಯಗಳಲ್ಲಿ, ದೇವಾಲಯವನ್ನು ಪ್ರವೇಶಿಸುವ ಮೊದಲು ಪುರುಷರು ತಮ್ಮ ಅಂಗಿಗಳನ್ನು ತೆಗೆಯುವುದು ಸಾಮಾನ್ಯ ಅಭ್ಯಾಸವಾಗಿದೆ. ಬದಲಿಗೆ ಭುಜದ ಮೇಲೆ ಸುತ್ತುವ ಶಾಲು ತರಹದ ‘ಅಂಗವಸ್ತ್ರ’ವನ್ನು ಧರಿಸುವಂತೆ ಹೇಳುತ್ತಾರೆ. ಹಲವು ದೇಗುಲಗಳಲ್ಲಿ ಊಟವನ್ನು ಕೂಡ ಬ್ರಾಹ್ಮಣೇತರ ಸಮುದಾಯಗಳಿಗೆ ಪ್ರತ್ಯೇಕವಾಗಿ ನೀಡಲಾಗುತ್ತದೆ. ಈ ಅಮಾನುಷ ಪದ್ಧತಿಯ ವಿರುದ್ಧ ಹಲವಾರು ಚಳವಳಿಗಳು ನಡೆದರೂ ಸುಧಾರಣೆ ಮಾತ್ರ ಕಂಡಿಲ್ಲ.

ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳ ಕುರಿತು ನಡೆಯುತ್ತಿರುವ ವಿವಾದದ ನಡುವೆ, ತಮಿಳುನಾಡು ಸಂಸದ ಎ ರಾಜಾ ಗುರುವಾರ ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಕಳಂಕ ಹೊಂದಿರುವ ರೋಗಗಳಿಗೆ ಹೋಲಿಸಬೇಕು. ಉದಯನಿಧಿಯವರು ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿರುವುದು ಸರಿಯಾಗಿದೆ ಎಂದು ತಿಳಿಸಿದ್ದಾರೆ.

ಉದಯನಿಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಇತರ ಸಚಿವರು ಪ್ರತಿಕ್ರಿಯಿಸಿದ ರೀತಿಯ ಕುರಿತು ಸಿಎಂ ಸ್ಟಾಲಿನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿಗೆ ಪತ್ರ ಬರೆದಿರುವ ಎಂ ಕೆ ಸ್ಟಾಲಿನ್, ನನ್ನ ಮಗ ಎಲ್ಲಿಯೂ ‘ಜನಾಂಗೀಯ ಹತ್ಯೆ’ ಎಂಬ ಪದವನ್ನು ತಮಿಳು ಅಥವಾ ಇಂಗ್ಲಿಷ್‌ನಲ್ಲಿ ಬಳಸಿಲ್ಲ ಎಂದು ಸಿಎಂ ಮತ್ತೊಮ್ಮೆ ಸ್ಪಷ್ಟಪಡಿಸಿದರು.

ದಬ್ಬಾಳಿಕೆಯ ತತ್ವಗಳ ವಿರುದ್ಧ ಉದಯನಿಧಿ ಅವರ ನಿಲುವನ್ನು ಸಹಿಸಲಾಗದ ಬಿಜೆಪಿ ಪರ ಶಕ್ತಿಗಳು ಸುಳ್ಳು ಸುದ್ದಿ ಹಬ್ಬಿಸಿ, ಸನಾತನ ಚಿಂತನೆಯುಳ್ಳ ಜನರ ಹತ್ಯೆಗೆ ಉದಯನಿಧಿ ಕರೆ ನೀಡಿದ್ದಾರೆ ಎಂದು ಸ್ಟಾಲಿನ್ ಪಿಎಂ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಅಲ್ಲದೆ, ಬಿಜೆಪಿ ಈ ಸುಳ್ಳನ್ನು ಉತ್ತರದ ರಾಜ್ಯಗಳಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಿದೆ ಎಂದು ದೂರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...