ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಲು ಕುಮಾರಸ್ವಾಮಿ ಅವರಿಗೆ ವಿಷಯಗಳಿಲ್ಲ: ದಿನೇಶ್ ಗುಂಡೂರಾವ್

Date:

ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಬಡವರಿಗೆ ನೆರವಾಗುತ್ತಿದೆ. ಕುಮಾರಸ್ವಾಮಿ ಅವರು ಇನ್ನೂ ಸ್ವಲ್ಪ ಕಾದು ನೋಡಬೇಕು. ಈಗಲೇ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ವೈಎಸ್‌ಟಿ ತೆರಿಗೆ ಆರಂಭವಾಗಿದೆ ಎಂಬ ಎಚ್‌ ಡಿ ಕುಮಾರಸ್ವಾಮಿ ಅವರ ಆರೋಪವನ್ನು ತಳ್ಳಿಹಾಕಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟ ಮುಕ್ತ ಆಡಳಿತವನ್ನು ನೀಡಲು ಹೆಚ್ಚು ಗಮನ ಹರಿಸಿದೆ. ಕುಮಾರಸ್ವಾಮಿ ಹೇಳಿದಂತೆ ಯಾವ ವೈಎಸ್‌ಟಿ ತೆರಿಗೆಯೂ ಇಲ್ಲ. ಸರ್ಕಾರದ ಕಾರ್ಯಗಳಿಂದ ಲಾಭ ಪಡೆಯುತ್ತಿರುವ ಜನಸಾಮಾನ್ಯರ ಮನಸಲ್ಲಿ ಕಾಂಗ್ರೆಸ್ ಆಡಳಿತದ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾರದರ್ಶಕವಾಗಿ ಗ್ಯಾರಂಟಿಗಳನ್ನ ಸರ್ಕಾರ ಅನುಷ್ಠಾನಕ್ಕೆ ತರುತ್ತಿದೆ. ನೇರವಾಗಿ ದೊಡ್ಡ ಪ್ರಮಾಣದಲ್ಲಿ ಜನರ ಖಾತೆಗೆ ಹಣ ಹಾಕುತ್ತಿದ್ದೇವೆ. ಅದರಲ್ಲಿ ಒಂದು ರೂಪಾಯಿ ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಹೀಗಿರುವಾಗ ಕುಮಾರಸ್ವಾಮಿ ಅವರಿಗೆ ಸರ್ಕರದ ಮೇಲೆ ಟೀಕೆ ಮಾಡಲು ಬೇರೆ ವಿಷಯಗಳಿಲ್ಲ. ಹೇಗಾದರು ಮಾಡಿ ಟೀಕೆ ಮಾಡಬೇಕು ಎಂದು ಟೀಕೆ ಮಾಡುತ್ತಿದ್ದಾರೆ. ಎಚ್‌ ಡಿ ಕುಮಾರಸ್ವಾಮಿ ಅವರದ್ದು, ಆಧಾರರಹಿತ ಆರೋಪ ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಬುಡಕಟ್ಟು ಜನರ ವಿಕಾಸಕ್ಕೆ ದಾರಿ ತೋರಿಸಿ, ಅವರೆ ಮುನ್ನಡೆಯುತ್ತಾರೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ನಾವು ಸ್ಪಷ್ಟವಾದ ಹೆಜ್ಜೆ ಇಡುತ್ತಿದ್ದೇವೆ.‌ ಒಳ್ಳೆಯ ಆಡಳಿತ ಕೊಡುತ್ತೇವೆ. ಜನರಿಗೆ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಸುಧಾರಣೆ ಆಗುತ್ತಿದೆ. ಉತ್ತಮ ವ್ಯವಸ್ಥೆ ನಿರ್ಮಾಣ ಆಗಿದೆ. ಜನಪರ ಆಡಳಿತ ಕೊಡಲು ಆದ್ಯತೆ ನೀಡುತ್ತಿದ್ದೇವೆ. ಕುಮಾರಸ್ವಾಮಿ ತಾಳ್ಮೆಯಿಂದ ಇದ್ದರೆ ಒಳ್ಳೆಯದು. ನಾವು ಯಾವ ರೀತಿ ಕೆಲಸ ಮಾಡಬೇಕು ಎಂದು ಸ್ವಲ್ಪ ದಿನ ಕಾದು ನೋಡಬೇಕು. ಇಷ್ಟು ಬೇಗನೆ ಅವರು ಎಲ್ಲೋ ಒಂದು ಕಡೆ ಮೈ ಪರಚುವ ಕೆಲಸ ಮಾಡಬಾರದು ಎಂದು ತಿರುಗೇಟು ನೀಡಿದರು.

ಕೊರೊನಾ ವೇಳೆ ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರದ ತನಿಖೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆ ಸಂಬಂಧ ಸಾಕಷ್ಟು ಮಾಹಿತಿ ಕಲೆ ಹಾಕಿದ್ದೇವೆ. ಯಾವ ರೀತಿ ತನಿಖೆ ಮಾಡಬೇಕು ಎಂಬ ಬಗ್ಗೆ ಪರಿಶೀಲಿಸುತ್ತಿದ್ದೇವೆ.‌ ಸಮಿತಿ ರಚನೆ ಮಾಡಿ ತನಿಖೆ ಮಾಡಬೇಕಾ ಎಂಬ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...