ಸಚಿವ ಎಂ ಬಿ ಪಾಟೀಲ್‌ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ ದಿನೇಶ್‌ ಕಲ್ಲಹಳ್ಳಿ

Date:

ಬೃಹತ್‌ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋತ್‌ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಎಂಬುವರು ದೂರು ಸಲ್ಲಿಸಿದ್ದಾರೆ.

ಶುಕ್ರವಾರ ರಾಜಭವನಕ್ಕೆ ತೆರಳಿ ಸಚಿವ ಎಂ ಬಿ ಪಾಟೀಲ್‌ ವಿರುದ್ಧ ದೂರು ಸಲ್ಲಿಸಿದ್ದು, “ಎಂ ಬಿ ಪಾಟೀಲ್‌ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಭೂಮಿಯನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ. ನಿಯಮದ ಪ್ರಕಾರ ಆನ್‌ಲೈನ್‌ನಲ್ಲಿ ಪ್ರಕ್ರಿಯೆ ನಡೆಸಬೇಕಿತ್ತು. ಆದರೆ ಇವರು ಕೈಗಾರಿಕೆ ನಡೆಸದ ಕಂಪನಿಗಳಿಗೆ ಹಂಚಿಕೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಬಿಡದಿ, ವಸಂತನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ‌ ಹಂಚಿಕೆಯಲ್ಲಿ ಅಕ್ರಮ‌ ಎಸಗಲಾಗಿದೆ. ಕಾನೂನು ಬಾಹಿರವಾಗಿ ನಿಯಮಗಳನ್ನು ಗಾಳಿಗೆ ತೂರಿ ನಿವೇಶನ ಹಂಚಿಕೆ ಮಾಡಲಾಗಿದೆ . ಇವರ ಕೆಲಸಗಳಿಗೆ ಕೆಲ ಅಧಿಕಾರಿಗಳು ಸಾಥ್‌ ನೀಡಿದ್ದಾರೆ. ಈ ಅಕ್ರಮ ಹಂಚಿಕೆಯಿಂದ ಕೆಐಎಡಿಬಿಗೆ ಕೋಟ್ಯಂತರ ರೂ. ನಷ್ಟವಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿನೇಶ್‌ ಕಲ್ಲಹಳ್ಳಿ ಯಾರು?

ಕನಕಪುರ ಸಮೀಪದ ಕಲ್ಲಹಳ್ಳಿಯ ದಿನೇಶ್ ಈ ಹಿಂದೆ ಹಲವು ವಾರಪತ್ರಿಕೆಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ನಂತರ ಮಾಹಿತಿ ಹಕ್ಕು ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಕ್ರಿಯಾಶೀಲರಾದ ದಿನೇಶ್ ಪ್ರಮುಖ ವಕೀಲರ ಸಂಪರ್ಕ ಸಾಧಿಸಿಕೊಂಡು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ದೂರುದಾರರಾಗಿದ್ದಾರೆ. ಕನಕಪುರ ತಾಲೂಕಿನಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಡೆಸಿದ್ದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಂಸದ ಡಿಕೆ ಸುರೇಶ್, ಕಾಂಗ್ರೆಸ್ ಮುಖಂಡ ಇಕ್ಬಾಲ್ ಹುಸೇನ್ ವಿರುದ್ಧ ದೂರು ನೀಡಿ ಪೊಲೀಸರ ರಕ್ಷಣೆಯನ್ನು ದಿನೇಶ್ ಕೋರಿದ್ದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ ವಿಡಿಯೋ ನನ್ನ ಬಳಿ ಇದೆ. ಜೊತೆಗೆ ಆಗಿನ ಮೂವರು ಸಚಿವರ ಸೆಕ್ಸ್ ಹಗರಣದ ವಿಡಿಯೋ ಇದೆ ಎಂದು ಕಲ್ಲಹಳ್ಳಿ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...