ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ದಿಂಗಾಲೇಶ್ವರ ಶ್ರೀ ಮುಂದಾಗಬಾರದು: ಯಡಿಯೂರಪ್ಪ

Date:

ಧಾರವಾಡ-ಹುಬ್ಬಳ್ಳಿ ಕ್ಷೇತ್ರದ ಜನತೆ ಪ್ರಲ್ಹಾದ ಜೋಶಿ ಪರವಾಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕೈ ಹಾಕಬಾರದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “‘ಧಾರವಾಡ‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯದಂತೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಮತ್ತೊಮ್ಮೆ ಮನವಿ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಬಾರದೆಂದು ಅವರನ್ನು ಕೋರುವೆ. ಮುಂದೆ ಏನು ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ” ಎಂದರು.

“ರಾಜ್ಯದಲ್ಲಿ ಬಿಜೆಪಿ, ಪ್ರಧಾನಿ ಮೋದಿ ಪರವಾದ ಅಲೆ ಇದೆ. ಈ ಕ್ಷೇತ್ರದಲ್ಲಿ ಜೋಶಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಮನೆ ಮನೆಗೆ ಗೊತ್ತಿದೆ. ಅವರೊಬ್ಬ ಪ್ರಬುದ್ಧ ರಾಜಕಾರಣಿಯಾಗಿದ್ದಾರೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...