ಚುನಾವಣಾ ಕಣದಿಂದ ಹಿಂದೆ ಸರಿದ ದಿಂಗಾಲೇಶ್ವರ ಸ್ವಾಮೀಜಿ

Date:

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಹಾದ್‌ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ್‌ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್‌ ಪಡೆದಿದ್ದಾರೆ.

ಕೇಂದ್ರ ಸಚಿವ, ಹಾಲಿ ಸಂಸದ ಪ್ರಲ್ಹಾದ್‌ ಜೋಶಿ ಅವರನ್ನು ಗುರಿಯಾಗಿಸಿಕೊಂಡು, ಲಿಂಗಾಯತ ಸಮುದಾಯಕ್ಕೆ ಜೋಶಿ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿ, ನಾಮಪತ್ರ ಸಲ್ಲಿಸಿದ್ದರು.

ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ನುಡಿದಿದ್ದ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಹಠವನ್ನು ಬದಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಧಾರವಾಡದ ಗೋಕುಲ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಸಭೆ ಕರೆದು, ಅವರ ಜೊತೆ ಜೊತೆ ಸಭೆ ನಡೆಸಿ ತಮ್ಮ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ.

ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕಾರದ ಸಚ್ಚಿನ್​ ಪಾಟೀಲ್​ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ನಾಮಪತ್ರ ಚುನಾವಣಾ ಆಯೋಗದಿಂದ ತರೆಸಿದ್ದಾರೆ.

ಶಿರಹಟ್ಟಿ ಫಕೀರೇಶ್ವರ ಮಠದ ಹಿರಿಯ ಪೀಠಾಧಿಪತಿ ಶಿವಯೋಗಿ ಸಿದ್ಧರಾಮ ಮಹಾಸ್ವಾಮಿಗಳು ದಿಂಗಾಲೇಶ್ವರ ಸ್ವಾಮೀಜಿಗೆ ಚುನಾವಣಾ ಕಣದಿಂದ ಹಿಂದೆ ಸರಿಯಿರಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ದಿಂಗಾಲೇಶ್ವರ ಸ್ವಾಮೀಜಿ ಸೋಮವಾರ ನಾಮಪತ್ರ ವಾಪಸ್‌ ಪಡೆಯುವುದು ಬಹುತೇಕ ಖಚಿತವಾಗಿದೆ.

ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್‌ ಪಡೆದರೆ ಪ್ರಲ್ಹಾದ್‌ ಜೋಶಿ ಹಾಗೂ ವಿನೋದ್‌ ಅಸೂಟಿ ನಡುವೆ ನೇರ ಹಣಾಹಣಿ ನಡೆಯಲಿದೆ. ಜೊತೆಗೆ ಜೋಶಿಗೂ ರಿಲೀಫ್‌ ಸಿಕ್ಕಂತಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...