ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ಬಗ್ಗೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

Date:

ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಡಿಕೇರಿಯಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿ, “ರಾಜ್ಯದಲ್ಲಿ 746 ಕೋಟಿ ರೂ.ಮತ್ತು ಮಡಿಕೇರಿ ಜಿಲ್ಲಾ ಪಿಡಿ ಖಾತೆಯಲ್ಲಿ 46 ಕೋಟಿ ರೂ. ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು” ಎಂದು ವಿವರಿಸಿದರು.

“ಮಳೆ ಬೀಳುತ್ತಲೇ ಇರುವುದರಿಂದ ಭೂ ಕುಸಿತದ ಪ್ರದೇಶವನ್ನು ಸರಿ ಪಡಿಸಲು ಕಷ್ಟ ಆಗುತ್ತಿದೆ. 20 ಕಡೆ ಭೂ ಕುಸಿತ ಆಗಿದ್ದರೆ, ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿರುವುದು ಹೆಚ್ಚು ಕಡೆ ಆಗಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ” ಎಂದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ ಪೂರ್ಣ ಮತ್ತು ಭಾಗಶಃ ಹಾನಿ ಆಗಿರುವ ಘಟನೆಗಳೂ ನಡೆದಿವೆ. ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು. ಭಾಗಶಃ ಹಾನಿ ಆಗಿರುವ ಮನೆಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.‌ ಇದರಲ್ಲಿ 43 ಸಾವಿರ ರಾಜ್ಯ ಸರ್ಕಾರದ ಹಣ ಎಂದರು. ಈಗಾಗಲೇ ನೇರ ಸಂತ್ರಸ್ಥರ ಖಾತೆಗೆ ಹಣ ವರ್ಗಾವಣೆ ಆಗಿದೆ” ಎಂದು ಮಾಹಿತಿ ನೀಡಿದರು.

“16 ಜಾನವಾರು ಸತ್ತಿವೆ. ತಲಾ 35 ಸಾವಿರ ಪರಿಹಾರ ನೀಡಿದ್ದೇನೆ. 14 ಪರಿಹಾರ ಕ್ಯಾಂಪ್ ಗಳನ್ನು ತೆರೆಯಲಾಗಿದೆ. 10 ಕ್ಯಾಂಪ್ ಗಳಲ್ಲಿ 186 ಮಂದಿ ಇದ್ದಾರೆ. ತೋರಾ ಕ್ಯಾಂಪ್ ನಲ್ಲಿ ಇರುವವರ ಜೊತೆ ನಾನೇ ನೇರವಾಗಿ ಸಂಪರ್ಕದಲ್ಲಿ ಇದ್ದೇನೆ” ಎಂದರು.

“28 ಹೆಕ್ಟೇರ್ ನಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಕಾಫಿ ಬೋರ್ಡ್ ಮತ್ತು ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. 2,708 ವಿದ್ಯುತ್ ಕಂಬಗಳು ಬಿದ್ದು ಹೋಗಿವೆ. 150 ಬಿಟ್ಟು ಉಳಿದೆಲ್ಲಾವನ್ನೂ ಮತ್ತೆ ಅಳವಡಿಸಲಾಗಿದೆ. ಹಾಳಾಗಿದ್ದ 47 ಟ್ರಾನ್ಸ್ ಫಾರ್ಮರ್ ಗಳನ್ನೂ ಹೊಸದಾಗಿ ಅಳವಡಿಸಲಾಗಿದೆ” ಎಂದು ಹೇಳಿದರು.

“344 ಕಿಮಿ ಉದ್ದದ ಲೋಕೋಪಯೋಗಿ, ಜಿಲ್ಲಾ ಪಂಚಾಯ್ತಿ ರಸ್ತೆಗಳು ಹಾನಿ ಆಗಿವೆ. ಇವೆಲ್ಲವನ್ನೂ ಆಧ್ಯತೆ ಮೇಲೆ ಸರಿ ಪಡಿಸಲು ಸೂಚಿಸಲಾಗಿದೆ. ಈ ಬಾರಿ ವಾಡಿಕೆಗಿಂತ ಶೇ.50 ರಷ್ಟು ಹೆಚ್ಚು ಮಳೆಯಾಗಿದೆ.‌ ನಾವು ಮುಂಜಾಗ್ರತಾ ಕ್ರಮಗಳ ಜೊತೆಗೆ ಅನಾಹುತ ಬಳಿಕ ಪರಿಹಾರ ಕಾರ್ಯಗಳನ್ನು ತುರ್ತಾಗಿ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

“ಜಿಲ್ಲಾಧಿಕಾರಿಗಳ ಕಚೇರಿಯ ಭೂ ಕುಸಿತದ ದುರಸ್ತಿ ಕಾರ್ಯವನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ. ಶಿರಾಡಿ ಘಾಟಿಗೆ ಭೇಟಿ ನೀಡಿ ಅನಾಹುತಗಳನ್ನು ಪರಿಶೀಲನೆ ನಡೆಸುವೆ” ಎಂದು ಇದೇ ಸಂದರ್ಭದಲ್ಲಿ ಸಿಎಂ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...