ಜಾರ್ಖಂಡ್: ಅಕ್ರಮ ಆಸ್ತಿ ಸಂಬಂಧ ಬಿಜೆಪಿಯ ಐವರು ಮಾಜಿ ಸಚಿವರ ವಿರುದ್ಧ ತನಿಖೆಗೆ ಒಪ್ಪಿಗೆ

Date:

ಅಕ್ರಮ ಅಸ್ತಿ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಐವರು ಮಾಜಿ ಸಚಿವರ ವಿರುದ್ಧ ಪ್ರಾಥಮಿಕ ತನಿಖೆಗೆ ಜಾರ್ಖಂಡ್ ಸರ್ಕಾರ ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿ ಹೇಮಂತ್ ಸೊರೇನ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಾಥಮಿಕ ತನಿಖೆಯ ಉದ್ದೇಶವು ಸಾಕಷ್ಟು ಸಾಕ್ಷ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು, ಇಲಾಖಾ ವಿಚಾರಣೆ ಅಥವಾ ನಿಯಮಿತ ಪ್ರಕರಣಗಳ ನೋಂದಣಿಯನ್ನು ಒಳಗೊಂಡಿರುತ್ತದೆ.

2014 ಮತ್ತು 2019ರ ನಡುವೆ ಮುಖ್ಯಮಂತ್ರಿ ರಘುಬರ್ ದಾಸ್ ಅವರ ಸಂಪುಟದ ಭಾಗವಾಗಿದ್ದ ಐವರಲ್ಲಿ ನಾಲ್ವರು ಪ್ರಸ್ತುತ ವಿಧಾನಸಭೆಯ ಸದಸ್ಯರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಲ್ಲಿ ಮಾಜಿ ಸಚಿವರಾದ ಅಮರ್ ಕುಮಾರ್ ಬೌರಿ, ರಣಧೀರ್ ಕುಮಾರ್ ಸಿಂಗ್, ನೀರಾ ಯಾದವ್, ಲೂಯಿಸ್ ಮರಾಂಡಿ ಮತ್ತು ನೀಲಕಂಠ ಸಿಂಗ್ ಮುಂಡಾ ವಿರುದ್ಧ ಪ್ರಾಥಮಿಕ ತನಿಖೆಗೆ ಸಂಪುಟದಿಂದ ಅನುಮತಿ ನೀಡಲಾಗಿದೆ ಎಂದು ಸರ್ಕಾರದ ವಕ್ತಾರರು ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಇಡಿ, ಸಿಬಿಐ, ಐಟಿ ಇಲಾಖೆಗಳೇ ಎನ್‌ಡಿಎ ನಿಜವಾದ ಶಕ್ತಿ: ಉದ್ಧವ್ ಠಾಕ್ರೆ ವಾಗ್ದಾಳಿ

2020 ರಲ್ಲಿ ಜಾರ್ಖಂಡ್ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ಹಿನ್ನೆಲೆಯಲ್ಲಿ ಐವರು ಮಾಜಿ ಸಚಿವರ ಅಕ್ರಮ ಆಸ್ತಿಗಳ ಕುರಿತು ತನಿಖೆ ನಡೆಸುವಂತೆ ರಾಜ್ಯ ಸರ್ಕಾರವು ಈ ಹಿಂದೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಆದೇಶಿಸಿತ್ತು.

ಕಳೆದ ವರ್ಷ ನವೆಂಬರ್‌ನಲ್ಲಿ ಸೊರೇನ್ ಐವರು ಬಿಜೆಪಿ ನಾಯಕರ ಅಕ್ರಮ ಆಸ್ತಿಗಳ ಬಗ್ಗೆ ಪ್ರಾಥಮಿಕ ತನಿಖೆಯನ್ನು ದಾಖಲಿಸಲು ಎಸಿಬಿಗೆ ಅನುಮತಿ ನೀಡಿದ್ದರು. ಆದಾಗ್ಯೂ, ಎಸಿಬಿ ಐವರು ಮಾಜಿ ಸಚಿವರ ವಿರುದ್ಧ ಪ್ರತ್ಯೇಕ ಪ್ರಾಥಮಿಕ ತನಿಖೆಗೆ ಕೋರಿದೆ.

ಮಾಜಿ ಸಚಿವರ ವಿರುದ್ಧ ಪ್ರಾಥಮಿಕ ತನಿಖೆಗೆ ಸಂಪುಟದ ಒಪ್ಪಿಗೆ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿ, ಇದೊಂದು ರಾಜಕೀಯ ತಂತ್ರ ಎಂದಿದ್ದಾರೆ.

“ಸ್ವತಃ ಮುಖ್ಯಮಂತ್ರಿಯೆ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಕಾರಣ, ಬಿಜೆಪಿಗೆ ಕಳಂಕ ತರಲು ಬಯಸುತ್ತಿದ್ದಾರೆ. ನಾನು ಯಾವುದೇ ತನಿಖೆಗೆ ಹೆದರುವುದಿಲ್ಲ” ಎಂದು ತನಿಖೆ ಎದುರಿಸುತ್ತಿರುವ ಮಾಜಿ ಕೃಷಿ ಸಚಿವ ರಣಧೀರ್ ಕುಮಾರ್ ಸಿಂಗ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...