ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ವಿತರಣೆ; ಸರ್ಕಾರ ನಿಮ್ಮೊಂದಿಗಿದೆ ಎಂದ ಮುಖ್ಯಮಂತ್ರಿ

Date:

ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿ ಶುಕ್ರವಾರ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಅಂಗಾಂಗ ದಾನಿಗಳ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಸಾಂತ್ವನ ಹಾಗೂ ಧೈರ್ಯ ಹೇಳಿದರು.

ಅಪಘಾತಕ್ಕೀಡಾದ ಶರವಣ ಅವರ ಪತ್ನಿ, ಪ್ರಶಂಸಾ ಪತ್ರ ಸ್ವೀಕರಿಸುವಾಗ ಅಗಲಿದ ತಮ್ಮ ಪತಿಯನ್ನು ನೆನೆದು ಕಣ್ಣೀರಾದರು. ಕೊಲೆಗೀಡಾದ ರಾಮನಗರದ ಕೆ.ಜಿ. ನವೀನ್‌ ಕುಟುಂಬದವರಿಗೆ ಅವರ ಸಾವಿಗೆ ನ್ಯಾಯ ಒದಗಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

“ನೀವು ಕೈಗೊಂಡ ನಿರ್ಧಾರ ಸುಲಭವಲ್ಲ. ಆದರೆ ಇತರರ ಜೀವ ಉಳಿಸುವ ಕೆಲಸ ನೀವು ಮಾಡಿದ್ದೀರಿ ಎಂದು ಮೆಚ್ಚುಗೆಯ ನುಡಿಗಳನ್ನಾಡಿದರು. ನಿಮಗೆ ಯಾವುದೇ ಸಂಕಷ್ಟ ಎದುರಾದರೂ ನಿಮ್ಮೊಂದಿಗೆ ನಾವಿದ್ದೇವೆ” ಎಂದು ಸ್ಥೈರ್ಯ ತುಂಬಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮ್ಮ ಹಿಂದಿನ ಅವಧಿಯಲ್ಲಿ ಅಂಗಾಂಗ ದಾನಕ್ಕೆ ಸೊಸೈಟಿ ಸ್ಥಾಪಿಸಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಯವರು ಇನ್ನಷ್ಟು ಜನರು ಅಂಗಾಂಗ ದಾನಕ್ಕೆ ಮುಂದಾಗಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, “ಅಂಗಾಂಗ ದಾನ ಕೋರಿ, ನೋಂದಾಯಿಸಿಕೊಂಡವರ ಸಂಖ್ಯೆ 8000 ಕ್ಕೂ ಹೆಚ್ಚಿದ್ದು, ಕಳೆದ ಒಂದು ವರ್ಷದಲ್ಲಿ ಕೇವಲ 178 ಅಂಗಾಂಗ ದಾನ ನಡೆದಿದೆ. ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಇದು ಇನ್ನಷ್ಟು ಹೆಚ್ಚಾಗಬೇಕಾಗಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಲು, ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ವಿವರಿಸಿದರು.

“ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ಜಿಲ್ಲಾಧಿಕಾರಿಗಳು ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡಲಾಗುವುದು. ಒಬ್ಬ ವ್ಯಕ್ತಿ ಅಂಗಾಂಗ ದಾನದ ಮೂಲಕ ಎಂಟು ಜನರಿಗೆ ಜೀವದಾನ ಮಾಡಬಹುದು” ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್‌ ಹಾಗೂ ಆಯುಕ್ತ ಡಿ.ರಂದೀಪ್‌ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...