ಡಿಕೆಶಿ ಪ್ರಕರಣ ವಾಪಸ್ | ಎಫ್‌ಐಆರ್ ಇಲ್ಲದೆಯೇ ಸಿಬಿಐಗೆ ವಹಿಸಿದ್ದ ಬಿಜೆಪಿ: ದಾಖಲೆ ತೋರಿದ ಪ್ರಿಯಾಂಕ್ ಖರ್ಗೆ

Date:

‘ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೇವಲ ಮೌಖಿಕ ಸೂಚನೆ ನೀಡಿ ಒಬ್ಬ ಶಾಸಕ(ಡಿಕೆ ಶಿವಕುಮಾರ್)ನ ವಿರುದ್ಧ ಸಿಬಿಐ ತನಿಖೆಗೆ ಆದೇಶ ನೀಡಿದ್ದು ರಾಜಕೀಯ ಪ್ರೇರಿತ. ಎಫ್‌ಐಆರ್ ಇಲ್ಲದೆಯೇ ಸಿಬಿಐಗೆ ವಹಿಸಿದ್ದ ಪ್ರಕರಣವಾಗಿತ್ತು’ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ವಿರುದ್ಧ 2019ರಲ್ಲಿ ಸಿಬಿಐ ತನಿಖೆಗೆ ಬಿಎಸ್ ಯಡಿಯೂರಪ್ಪ ನೇತೃತ್ವದ ಅಂದಿನ ಬಿಜೆಪಿ ಸರ್ಕಾರ ನೀಡಿದ್ದ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿರುವ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ವಿರೋಧ ಪಕ್ಷವನ್ನು ಮುಗಿಸಬೇಕು ಅಂತ ಸಂಚು ರೂಪಿಸುತ್ತಿದೆ. ವಿಪಕ್ಷದವರ ಧ್ವನಿಯನ್ನು ದಮನಿಸಲು ಕೆಲವರನ್ನು ಐಟಿ ಮತ್ತು ಇಡಿ ಮೂಲಕ ಹೆದರಿಸುತ್ತಿದೆ. ಎಐಸಿಸಿ ಅಧ್ಯಕ್ಷರಿಂದ ಹಿಡಿದು ಕೆಪಿಸಿಸಿ ಅಧ್ಯಕ್ಷರ ತನಕವೂ ನಾಯಕರ ವಿರುದ್ದ ಸಂಚು ರೂಪಿಸುತ್ತಿದೆ. ಅನಾವಶ್ಯಕವಾಗಿ ಡಿ ಕೆ ಶಿವಕುಮಾರ್​ ಅವರ ವಿರುದ್ದ ಹಿಂದಿನ ಬಿಜೆಪಿ ಸರ್ಕಾರ ಸಂಚು ರೂಪಿಸುವ ಕೆಲಸ ಮಾಡಿತ್ತು. ಬಿಜೆಪಿಯವರು ಕೊಲೆ ಮಾಡಿದರೂ ಪರವಾಗಿಲ್ಲ ಅಂತವರಿಗೆ ಏನೂ ಆಗಿಲ್ಲ. ಆದರೆ ನಮ್ಮನ್ನು ಮಾತ್ರ ಹೆದರಿಸುತ್ತಾರೆ’ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಯಾವುದಾದರೂ ಒಂದು ಪ್ರಕರಣವನ್ನು ಸಿಬಿಐಗೆ ವಹಿಸಬೇಕಾದರೆ ಪ್ರಮುಖವಾಗಿ ಐದು ಅಂಶಗಳನ್ನು ಒದಗಿಸಬೇಕು. ಅದರಲ್ಲಿ ಒಂದು ಕೇಸಿನ ಮಾಹಿತಿ ಬೇಕು, ಪ್ರಕರಣದ ಎಫ್‌ಐಆರ್ ನೀಡಬೇಕು, ನ್ಯಾಯಾಲಯದಲ್ಲಿ ದೂರಾದರೂ ಇರಬೇಕು, ಸಿಬಿಐಗೆ ಹಸ್ತಾಂತರ ಮಾಡುವ ಉದ್ದೇಶ ಏನು, ಸ್ಥಳೀಯ ಪೊಲೀಸರು ಅಥವಾ ರಾಜ್ಯದ ಪೊಲೀಸ್ ಅವರಿಗೆ ವಿಚಾರಣೆ ಮಾಡಕ್ಕಾಗುತ್ತಿಲ್ಲ ಎಂಬ ವಿವರಣೆ ನೀಡಬೇಕು. ಆದರೆ ಅದ್ಯಾವುದನ್ನೂ ಪಾಲಿಸದ ಬಿಜೆಪಿ ಸರ್ಕಾರ, ಡಿ ಕೆ ಶಿವಕುಮಾರ್ ಅವರ ವಿರುದ್ಧ 13 ತಿಂಗಳ ನಂತರ ಅಂದರೆ ಅಕ್ಟೋಬರ್ 3, 2020ರಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದೆ. ಹಾಗಾಗಿ, ಸಿಬಿಐಗೆ ವಹಿಸಿರುವುದು ಸಂಪೂರ್ಣ ರಾಜಕೀಯ ಪ್ರೇರಿತ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Priyank Kharge 2

‘ಕೇವಲ ಮೌಖಿಕ ಆದೇಶ ನೀಡಿ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐಗೆ ನೀಡಿರುವ ಪ್ರಕರಣ ಕಾನೂನಾತ್ಮಕವೇ ಆಗಿರಲಿಲ್ಲ. ಬಿಜೆಪಿಯವರು ಕಾನೂನಿಗೆ ವಿರುದ್ಧ ಮಾಡಿರುವುದನ್ನು ನಾವು(ಕಾಂಗ್ರೆಸ್) ಕಾನೂನಾತ್ಮಕವಾಗಿ ವಾಪಸ್ ತಗೊಂಡ್ರೆ ಇವರು ಬೆಂಕಿ ಬಿದ್ದಂಗೆ ಆಡುತ್ತಿದ್ದಾರೆ. ಸುಪ್ರೀಂ ಕೋರ್ಟಿನ ಮೂರು ಆದೇಶಗಳ ಅನುಸಾರವಾಗಿಯೇ ನಾವು ಡಿಕೆ ಶಿವಕುಮಾರ್ ವಿರುದ್ಧ 2019ರಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಆದೇಶವನ್ನು ಹಿಂಪಡೆದಿದ್ದೇವೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಂದಿನ ದಾಖಲೆಗಳನ್ನು ತೋರಿಸುತ್ತಾ ಸ್ಪಷ್ಟೀಕರಣ ನೀಡಿದ್ದಾರೆ.

‘ಆದೇಶವನ್ನು ಹಿಂಪಡೆದಿರುವ ಬಗ್ಗೆ ಬಿಜೆಪಿಯವರು ಈಗ ಬೊಬ್ಬೆ ಹೊಡೆಯುತ್ತಿದ್ದಾರೆ. ಆದರೆ, ವಾಸ್ತವ ಏನೆಂದರೆ ಬಿಜೆಪಿ ಸಿಬಿಐಗೆ ನೀಡಿರುವ ಆದೇಶವೇ ಅಕ್ರಮವಾದುದು. ಆಗ ವಿಪಕ್ಷವಾಗಿದ್ದ ನಮ್ಮ ಪಕ್ಷದ ನಾಯಕರನ್ನು ರಾಜಕೀಯವಾಗಿ ಮುಗಿಸಲು ನಡೆಸಿರುವ ಷಡ್ಯಂತ್ರ ಎಂಬುದು ಸ್ಪಷ್ಟ. ಯಾವುದೇ ಸರಿಯಾದ ದಾಖಲೆ ಇಲ್ಲದೆಯೇ ಕೇವಲ ಮೌಖಿಕವಾಗಿ ಸಿಬಿಐಗೆ ವಹಿಸಲಾಗಿತ್ತು ಎಂಬುದು ಸ್ಪಷ್ಟ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಚಿವ ಸಂಪುಟದ ನಿರ್ಧಾರವನ್ನು ಸಮರ್ಥನೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...