ಡಿ ಕೆ ಶಿವಕುಮಾರ್ ಸಿಬಿಐ ತನಿಖೆ ವಾಪಸ್ | ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಹೈಕೋರ್ಟ್‌

Date:

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವ ಕಾಂಗ್ರೆಸ್‌ ಸರ್ಕಾರದ ಆದೇಶಕ್ಕೆ ಆಕ್ಷೇಪಿಸಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಸಲ್ಲಿಸಿರುವ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹೈಕೋರ್ಟ್‌, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠವು, “ಉಭಯ ಪಕ್ಷಕಾರರ ವಾದ ಆಲಿಸಿದ್ದು, ಅಡ್ವೊಕೇಟ್‌ ಜನರಲ್‌ ವಾದವನ್ನು ಆಲಿಸಲಾಗಿದೆ. ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಅವರ ಮುಂದೆ ಮಂಡಿಸಬೇಕು. ಅವರು ತಮ್ಮ ಇಚ್ಛೆಯಂತೆ ಪೀಠ ರಚಿಸಬಹುದು. ಪ್ರತಿವಾದಿಗಳಿಗೆ ನೋಟಿಸ್‌ಗೆ ಆದೇಶಿಸಲಾಗಿದೆ” ಎಂದು ತಿಳಿಸಿದರು.

ಅಲ್ಲದೇ ಇದೇ ವೇಳೆ, “ಪ್ರಕರಣದ ಬಗ್ಗೆ ವಿಸ್ತೃತ ಪೀಠ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವವರೆಗೆ ಲೋಕಾಯುಕ್ತ ಪೊಲೀಸರು ಅಥವಾ ಸಿಬಿಐ ಯಾವುದೇ ಕ್ರಮಕ್ಕೆ ಮುಂದಾಗುವಂತಿಲ್ಲ” ಎಂದು ನಿರ್ದೇಶನ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ದ್ವೇಷ ಭಾಷಣ | ಕಲ್ಕಡ್ಕ ಪ್ರಭಾಕರ್ ಭಟ್ ವಿರುದ್ದ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ: ಜ.10ಕ್ಕೆ ವಿಚಾರಣೆ ಮುಂದೂಡಿಕೆ

ಸಿಬಿಐ ವಕೀಲ ಪ್ರಸನ್ನಕುಮಾರ್ ಅವರು, “ಡಿಕೆಶಿ ಪ್ರಕರಣವನ್ನು ಲೋಕಾಯುಕ್ತ ಪೊಲೀಸರು ತನಿಖೆ ನಡೆಸುವುದಕ್ಕೆ ತಡೆಯೊಡ್ಡಬೇಕು” ಎಂದು ಕೋರಿದರು. ಆದರೆ ನ್ಯಾಯಾಲಯವು ಇದನ್ನು ಪರಿಗಣಿಸಿಲ್ಲ. ಬದಲಾಗಿ, “ವಿಸ್ತೃತ ಪೀಠಕ್ಕೆ ಪ್ರಕರಣವನ್ನು ರೆಫರ್‌ ಮಾಡುತ್ತೇನೆ” ಎಂದು ತಿಳಿಸಿದ ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದರು. ಯತ್ನಾಳ್‌ ಪರವಾಗಿ ವಕೀಲ ವೆಂಕಟೇಶ ದಳವಾಯಿ ವಾದಿಸಿದ್ದರು.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.22 ರಂದು ಲೋಕಾಯುಕ್ತ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದೇಶ ಪ್ರತಿ ಪಡೆದು ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...