ಡಿಕೆ ಶಿವಕುಮಾರ್‌ಗೆ ಸಿಎಂ ಹುದ್ದೆ ವಿಚಾರ; ಚಂದ್ರಶೇಖರ ಸ್ವಾಮೀಜಿ ಸ್ಪಷ್ಟನೆ

Date:

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ಹೇಳಿದ್ದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ, ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಪತ್ರ ಬರೆದಿರುವ ಸ್ವಾಮೀಜಿ, “2023ರಲ್ಲಿ ಸರ್ಕಾರ ರಚಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ದಿನಗಳಲ್ಲಿ ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿತೆಂಬ ವಿಷಯವನ್ನು ಮಾಧ್ಯಮಗಳಿಂದ ತಿಳಿದುಕೊಂಡಿದ್ದೆ. ಹಾಗಾಗಿ, ಕಾರ್ಯಕ್ರಮದಲ್ಲಿ ಆ ವಿಚಾರವನ್ನು ಪ್ರಸ್ತಾಪಿಸಿದೆ” ಎಂದು ಹೇಳಿದ್ದಾರೆ.

“ಕರ್ನಾಟಕದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್‌ಗೆ 135 ಸ್ಥಾನಗಳನ್ನು ನೀಡಿ ಆಶೀರ್ವದಿಸಿದ್ದರು. ಈ ಯಶಸ್ಸಿನ ಹಿಂದೆ ಸಿದ್ದರಾಮಯ್ಯನವರ ಪಾತ್ರ ಎಷ್ಟಿದೆಯೋ, ಅಷ್ಟೇ ಮಟ್ಟದ ಪಾಲುದಾರಿಕೆ ಡಿ.ಕೆ ಶಿವಕುಮಾರ್ ಅವರದ್ದೂ ಇದೆ. ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿದಾಗೆಲ್ಲ, ಶಿವಕುಮಾರ್ ಟ್ರಬಲ್ ಶೂಟರ್ ಆಗಿ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಬಂದ ತೊಂದರೆಗಳನ್ನೆಲ್ಲ ನಿವಾರಿಸಲು ಮುಖ್ಯ ಪಾತ್ರ ವಹಿಸಿದ್ದಾರೆ” ಎಂದು ಸ್ವಾಮೀಜಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಠ 1 ಮಠ2

“ಡಿ.ಕೆ ಶಿವಕುಮಾರ್ ಅವರಿಗೆ ಆಡಳಿತದಲ್ಲಿ ಸಾಕಷ್ಟು ಅನುಭವ ಇರುವುದರಿಂದ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆತರೆ, ಕನ್ನಡ ನಾಡಿಗೆ ಅವರಿಂದ ಹೆಚ್ಚಿನ ಸೇವೆ ದೊರೆಯತ್ತದೆ. ರಾಜ್ಯಕ್ಕೆ ಒಳಿತಾಗುತ್ತದೆ ಎಂಬ ಆಶಯ ನಮ್ಮದು” ಎಂದಿದ್ದಾರೆ.

“ಅವರ ಸೇವೆಗಳ ಕಾರಣದಿಂದ ಅವರು ಮುಖ್ಯಮಂತ್ರಿಯಾಗುವ ಹಾದಿಯನ್ನು ಸುಗಮಗೊಳಿಸಿಕೊಡಬೇಕೆಂದು ನಾವು ವೈಯಕ್ತಿಕವಾಗಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದೇವೆ. ಈ ವಿಷಯ ಕಳೆದ 2-3 ದಿನಗಳಿಂದ ಚರ್ಚೆಯಾಗುತ್ತಿದೆ. ಡಿ.ಕೆ ಶಿವಕುಮಾರ್ ರವರು ನಮ್ಮ ಮೂಲಕ ವೇದಿಕೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದಾರೆ ಎಂಬುದು ಸತ್ಯಕ್ಕೆ ದೂರವಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...