ಡಿ.ಕೆ.ಶಿವಕುಮಾರ್ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳಲ್ಲ, ತಿಹಾರ್ ಜೈಲಿಗೆ ಹೋಗ್ತಾರೆ: ಕೆ ಎಸ್ ಈಶ್ವರಪ್ಪ

Date:

  • ಡಿ.ಕೆ.ಶಿವಕುಮಾರ್ ಪ್ರಕರಣ ವಾಪಸ್, ಸರಕಾರ ಬೀಳುವುದರ ಮೊದಲ ಹೆಜ್ಜೆ ಇದು: ಈಶ್ವರಪ್ಪ
  • ಹಾವೇರಿಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

“ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕರಣ ವಾಪಸ್ ಪಡೆದಿರುವುದು ಸರ್ಕಾರ ಬಿದ್ದು ಹೋಗುವುದರ ಮೊದಲ ಹೆಜ್ಜೆ. ಶಿವಕುಮಾರ್ ಅವರು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ಬದಲಾಗಿ ತಿಹಾರ್ ಜೈಲಿಗೆ ಹೋಗುತ್ತಾರೆ” ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸರಕಾರ ಬೀಳಲು ಎರಡನೆಯ ಹೆಜ್ಜೆ ಅಂದರೆ ಜಾತಿಗಣತಿ. ಒಂಭತ್ತು ವರ್ಷದ ಹಿಂದೆ ಜಾತಿ ಗಣತಿ ಮಾಡಲಾಗಿತ್ತು. ಆದರೆ ಅದನ್ನು ಈವರೆಗೆ ಬಹಿರಂಗಪಡಿಸಿಲ್ಲ. ಸಿಎಂ ಸಿದ್ದರಾಮಯ್ಯನವರಿಗೆ ತಾನು ಹಿಂದುಳಿದ ವರ್ಗದ ಚಾಂಪಿಯನ್ ಅನಿಸಿಕೊಳ್ಳಬೇಕಿತ್ತು. ಅದಕ್ಕಾಗಿ 163 ಕೋಟಿ ರೂಪಾಯಿ ವ್ಯರ್ಥ ಖರ್ಚು ಮಾಡಿದ್ದಾರೆ” ಎಂದು ಕೆಎಸ್‌ ಈಶ್ವರಪ್ಪ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ಹೊರಹಾಕಿದರು.

ಇದನ್ನು ಓದಿದ್ದೀರಾ? ‘ಜೋಡು ಕರೆ’ಯನ್ನು ಉದ್ಘಾಟಿಸಿ ‘ಬೆಂಗಳೂರು ಕಂಬಳ’ಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಮೂರು ತಿಂಗಳ ಹಿಂದೆ ಹಿಂದುಳಿದ ವರ್ಗಗಳ ದಲಿತ ಮಠಾಧೀಶರು ಜಾತಿಗಣತಿ ಬಹಿರಂಗ ಮಾಡುವಂತೆ ಸಿಎಂ ಸಿದ್ದರಾಮಯ್ಯ ಬಳಿ ಹೋಗಿದ್ದರು  ಅಂದು ಸಿಎಂ ಸಿದ್ದರಾಮಯ್ಯ ನವೆಂಬರ್ ತಿಂಗಳಲ್ಲಿ ಬಹಿರಂಗ ಮಾಡುವುದಾಗಿ ತಿಳಿಸಿದ್ದರು. ಆದರೆ ಇನ್ನೂ ಬಹಿರಂಗ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾತಿಗಣತಿ ಬಗ್ಗೆ ಆಸಕ್ತಿ ಇಲ್ಲ’ ಎಂದು ಕೆ ಎಸ್ ಈಶ್ವರಪ್ಪ ಆರೋಪಿಸಿದರು.

ಪ್ರತಿಪಕ್ಷ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಆಯ್ಕೆಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ಮುಖಂಡ, “ಉತ್ತರ ಕರ್ನಾಟಕಕ್ಕೆ ಸ್ಥಾನ ನೀಡಬೇಕಿತ್ತು ಎನ್ನುವ ನೋವಿದೆ. ಅವರು ಹಿರಿಯರು. ಅವರನ್ನು ನಮ್ಮ ಹಿರಿಯ ನಾಯಕರು ಕರೆಸಿ ಮಾತನಾಡುತ್ತಾರೆ. ದೇಶದಲ್ಲಿ ಬಿಜೆಪಿ ಇರುವುದು ಒಂದೇ. ಆದರೆ, ಎಷ್ಟು ಕಾಂಗ್ರೆಸ್ ಇವೆ” ಎಂದು ಈಶ್ವರಪ್ಪ ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...