ಕೆಪಿಸಿಸಿಯ ಮಾಧ್ಯಮ ವಕ್ತಾರರಾಗಿ ಆಯನೂರು ಮಂಜುನಾಥ್ ನೇಮಿಸಿದ ಡಿ ಕೆ ಶಿವಕುಮಾರ್

Date:

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಬಿಟ್ಟು, ಜೆಡಿಎಸ್‌ಗೆ ತೆರಳಿ ಆ ಬಳಿಕ ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ವಿಧಾನಪರಿಷತ್‌ನ ಮಾಜಿ ಸದಸ್ಯ ಆಯನೂರು ಮಂಜುನಾಥ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಆಯನೂರು ಮಂಜುನಾಥ್ ಅವರು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚೆಯಲ್ಲಿ ಹೆಚ್ಚು ಪ್ರಚಾರದಲ್ಲಿರುವುದನ್ನು ಗಮನಿಸಿ, ಕಾಂಗ್ರೆಸ್ ಪಕ್ಷದ ವಿಚಾರಧಾರೆಗಳನ್ನು ಮತ್ತು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಮಾಧ್ಯಮಗಳಲ್ಲಿ ಬಿಂಬಿಸಲು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಆಯನೂರು ಮಂಜುನಾಥ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಜೆಡಿಎಸ್ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡಿತ್ತು. ಆದರೆ, ಮಂಜುನಾಥ್ ಸೋಲನನುಭವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಬಳಿಕ ಕಳೆದ ಆಗಸ್ಟ್ 24ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಆಯನೂರು ಮಂಜುನಾಥ್ ಅವರಿಗೆ ಪಕ್ಷ ಉನ್ನತ ಸ್ಥಾನ ಕೊಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...