ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಇಳಿಸಲು ಡಿ ಕೆ ಶಿವಕುಮಾರ್‌ ಏನು ಬೇಕಾದರೂ ಮಾಡಬಲ್ಲರು: ರಾಜು ಗೌಡ

Date:

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ಕಾರ್ಯಸಾಧನೆಗಾಗಿ ಹಲವಾರು ಅಸ್ತ್ರಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಅವರಿಗೆ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆ ಇದ್ದು, ಅದಕ್ಕಾಗಿ ಅವರು ಏನು ಬೇಕಾದರೂ ಮಾಡಬಲ್ಲರು ಎಂದು ಬಿಜೆಪಿ ನಾಯಕ ನರಸಿಂಹ ನಾಯಕ್ (ರಾಜು ಗೌಡ) ಹೇಳಿದರು.

ಯಾದಗಿರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಜನ ಕಾದು ನೋಡಲಿ, ಮುಂದೊಂದು ದಿನ ಅವರು ಯತೀಂದ್ರ ಸಿದ್ದರಾಮಯ್ಯ ಮೇಲೆ ಯಾವುದಾದರೂ ಆರೋಪ ಹೊರಿಸಿ ಅದಕ್ಕೆ ಸಂಬಂಧಿಸಿದ ವಿಡಿಯೋ ಬಿಡುಗಡೆ ಮಾಡಿ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುತ್ತಾರೆ” ಎಂದರು.

“ಡಿಕೆ ಸಹೋದರರ ಜೊತೆ ಹೆಚ್ಚು ಒಡನಾಟ ಇಟ್ಟುಕೊಳ್ಳುವುದು ಬೇಡ ಅಂತ ಸಿದ್ದರಾಮಯ್ಯವನವರಿಗೆ ಸಲಹೆ ನೀಡಬಯಸುವೆ. ರಾಹುಲ್ ಗಾಂಧಿಯವರ ಮನಸ್ಸಲ್ಲೂ ಅದೇ ಇರುವಂತಿದೆ, ಮಂಬರುವ ದಿನಗಳಲ್ಲಿ ಅವರು ಸಿದ್ದರಾಮಯ್ಯರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಬಹುದು” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...