ನಾನು ರಾಜ್ಯಕ್ಕೆ ಭೇಟಿ ನೀಡುವುದು ಡಿ ಕೆ ಶಿವಕುಮಾರ್‌ಗೆ ಸಹಿಸಲು ಆಗುತ್ತಿಲ್ಲ: ಎಚ್‌ ಡಿ ಕುಮಾರಸ್ವಾಮಿ

Date:

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿಕೆಗಳಲ್ಲಿ ತಾಳಮೇಳವಿಲ್ಲ, ಸ್ಥಿರತೆ ಇಲ್ಲ. ಅವರೊಬ್ಬ ಗೊಂದಲಮಯ ವ್ಯಕ್ತಿತ್ವದ ವ್ಯಕ್ತಿ. ನಾನು ರಾಜ್ಯಕ್ಕೆ ಭೇಟಿ ನೀಡುವುದನ್ನು ಶಿವಕುಮಾರ್‌ಗೆ ಸಹಿಸಲು ಆಗುತ್ತಿಲ್ಲ ಎಂದು ಕೇಂದ್ರ ಕೈಗಾರಿಕೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ನವೆಹಲಿಗೆ ಆಗಮಿಸಿದ ಸಚಿವರು ಮಾಧ್ಯಮಗಳ ಜೊತೆ ಮಾತನಾಡಿ, “ನಾನು ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡಕ್ಕೆ ಭೇಟಿ ನೀಡಿದಾಗ, ಈ ಮನುಷ್ಯ ಏತಕ್ಕೆ ಬಂದಿದ್ದಾರೆ. ಮಿಲಿಟರಿಯನ್ನು ಕರೆದುಕೊಂಡು ಬರಬೇಕಿತ್ತು. ಒಬ್ಬರೇ ಬಂದು ಏನು ಮಾಡುತ್ತಾರೆ?” ಎಂದೆಲ್ಲಾ ಲಘುವಾಗಿ ಹೇಳಿಕೆ ನೀಡಿದ್ದರು” ಎಂದರು.

“ಕೇಂದ್ರ ಸರಕಾರದ ನಿರ್ದೇಶನ ಹಾಗೂ ರಾಜ್ಯ ಸರಕಾರದ ಅಪೇಕ್ಷೆಯಂತೆ ನಲವತ್ತಕ್ಕೂ ಹೆಚ್ಚು ಯೋಧರು ಬೆಳಗಾವಿಯಿಂದ ತೆರಳಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಅವರ ಹೇಳಿಕೆಗಳನ್ನು ಗಮನಿಸಿದರೆ ಅವರೊಬ್ಬ ಗೊಂದಲದ ವ್ಯಕ್ತಿ ಎನ್ನುವುದು ತಿಳಿಯುತ್ತದೆ” ಎಂದು ಕುಮಾರಸ್ವಾಮಿ ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ ಸರಕಾರಕ್ಕೆ ದೊಡ್ಡ ಮಟ್ಟದ ಮುಜುಗರ ತಪ್ಪಿದಂತಾಗಿದೆ. ಈಗ ಅವರು ತಾಯಿ ಚಾಮುಂಡೇಶ್ವರಿಯನ್ನು ನೆನಪು ಮಾಡಿಕೊಂಡಿದ್ದಾರೆ. ಸರ್ವಪಕ್ಷ ಸಭೆಗೆ ನಾನು ಹೋಗಲಿಲ್ಲ ಎಂದು ಟೀಕೆ ಮಾಡಿದ್ದರು. ನಮ್ಮನ್ನು ಸರ್ವಪಕ್ಷ ಸಭೆಗೆ ಕರೆಯುವುದಕ್ಕೆ ಮೊದಲೇ ನೆರೆ ರಾಜ್ಯಕ್ಕೆ ನೀರು ಹರಿಸಿ ಆಗಿತ್ತು. ನೀರು ಬಿಟ್ಟಾದ ಮೇಲೆ ಅವರು ನಮ್ಮನ್ನು ಕರೆಸಿ ಮಾತನಾಡುವುದು ಏನಿದೆ” ಎಂದು ಪ್ರಶ್ನಿಸಿದರು.

ತಮಿಳುನಾಡು ಸಿಎಂಗೆ ಕಿವಿಮಾತು

“ನಾನು ತಮಿಳುನಾಡು ಮುಖ್ಯಮಂತ್ರಿ ಅವರಿಗೆ ಹಾಗೂ ಅಲ್ಲಿನ ರಾಜಕಾರಣಿಗಳಿಗೆ ಹೇಳುವುದಿಷ್ಟೇ. ಈ ಮಾತನ್ನು ನಾನು ಕೇಂದ್ರ ಸಚಿವನಾಗಿ ಹೇಳುತ್ತಿಲ್ಲ. ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ ಐದಾರು ದಿನಗಳಿಂದ ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಂದ ಪ್ರತೀದಿನ ಎಂಟರಿಂದ ಹತ್ತು ಟಿಎಂಸಿ ನೀರು ನೆರೆರಾಜ್ಯಕ್ಕೆ ಹರಿದುಹೋಗಿದೆ. ಜೂನ್‌ ಮತ್ತು ಜುಲೈ ತಿಂಗಳಿನಲ್ಲಿ ಎಷ್ಟೆಲ್ಲಾ ನೀರು ಹರಿಸಬೇಕಾಗಿತ್ತೋ ಅಷ್ಟೂ ನೀರನ್ನು ಈ ತಿಂಗಳಲ್ಲಿ ಸಂಪೂರ್ಣವಾಗಿ ಹರಿಸಲಾಗಿದೆ. ಕಾವೇರಿ ಜಲ ನಿರ್ವಹಣಾ ಸಮಿತಿ ಮತ್ತು ಪ್ರಾಧಿಕಾರ ಹೇಳಿದ್ದಕ್ಕಿಂತ ಹೆಚ್ಚಿನ ಪ್ರಮಾಣದ ನೀರು ತಮಿಳುನಾಡಿಗೆ ಹೋಗಿದೆ. ಈ ಹಿನ್ನೆಲೆಯಲ್ಲಿ ನಾನು ತಮಿಳುನಾಡು ಮುಖ್ಯಮಂತ್ರಿಗಳಿಗೆ ಹೇಳುವುದು ಇಷ್ಟೇ. ಸುಖಾಸುಮ್ಮನೆ ಕಾಲು ಕೆರೆದು ಜಗಳಕ್ಕೆ ಬರಬೇಡಿ” ಎಂದರು.

“ವ್ಯರ್ಥವಾಗಿ ಸಮುದ್ರಕ್ಕೆ ಸೇರುವ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ, ಎರಡೂ ರಾಜ್ಯಗಳ ರೈತರಿಗೆ ಹಾಗೂ ಕುಡಿಯುವ ನೀರಿಗೆ ಅನುಕೂಲವಾಗುವಂತೆ ಮೇಕೆದಾಟು ಯೋಜನೆ ನಿರ್ಮಾಣ ಆಗಬೇಕಿದೆ. ಅನೇಕ ವರ್ಷಗಳಿಂದ ಈ ಬಗ್ಗೆ ತಮಿಳುನಾಡು ಆಕ್ಷೇಪ ತೆಗೆಯುತ್ತಿದೆ. ಇದರ ಬಗ್ಗೆ ತಮಿಳುನಾಡು ಸರಕಾರ ಅರ್ಥ ಮಾಡಿಕೊಳ್ಳಬೇಕಿದೆ” ಎಂದು ಕುಮಾರಸ್ವಾಮಿ ಕಿವಿಮಾತು ಹೇಳಿದರು.

ರಾಜ್ಯ ಸರಕಾರದಿಂದ ಚಿಲ್ಲರೆ ರಾಜಕಾರಣ

“ನೀರಿನ ವಿಷಯದಲ್ಲಿಯೂ ರಾಜ್ಯ ಕಾಂಗ್ರೆಸ್‌ ಸರಕಾರ ಚಿಲ್ಲರೆ ರಾಜಕಾರಣ ಮಾಡುತ್ತಿದೆ. ನಾವೆಂದೂ ಚಿಲ್ಲರೆ ರಾಜಕಾರಣ ಮಾಡಿಲ್ಲ. ಅತ್ಯಂತ ಕೆಟ್ಟ ರೀತಿಯಲ್ಲಿ ಕೇಂದ್ರದ ಸಚಿವರನ್ನು ನಡೆಸಿಕೊಳ್ಳುವುದು, ಲಘುವಾಗಿ ಮಾತನಾಡುವುದು ಶೋಭೆಯಲ್ಲ. ಇಂಥ ನಡವಳಿಕೆಯನ್ನು ಪ್ರತಿದಿನವೂ ನಾನು ಕಾಣುತ್ತಿದ್ದೇನೆ. ಮೊದಲು ಇಂಥ ರಾಜಕಾರಣವನ್ನು ನಿಲ್ಲಿಸಿ. ರಾಜ್ಯದ ಅಭಿವೃದ್ಧಿಗೆ ಪೂರಕವಾದ ನಡವಳಿಕೆ ಅಳವಡಿಸಿಕೊಳ್ಳಿ” ಎಂದು ಕುಮಾರಸ್ವಾಮಿ ಡಿಕೆಶಿಗೆ ತಿರುಗೇಟು ಕೊಟ್ಟರು.

ಕಾವೇರಿ ಆರತಿಗೆ ಸ್ವಾಗತ

ಗಂಗಾ ಆರತಿ ಮಾದರಿಯಲ್ಲಿಯೇ ಕಾವೇರಿ ಆರತಿ ನೆರೆವೇರಿಸಲಾಗುವುದು ಎಂದು ಡಿಸಿಎಂ ಡಿಕೆಶಿ ಹೇಳಿರುವುದನ್ನು ಸ್ವಾಗತಿಸಿ ಮಾತನಾಡಿ, “ಒಳ್ಳೆಯದೇ. ಬೇಡ ಎಂದವರು ಯಾರು? ಗಂಗಾ ಆರತಿ ಎನ್ನುವುದು ಒಂದು ಪವಿತ್ರವಾದ ಕಾರ್ಯಕ್ರಮ. ಆ ಕಾರ್ಯಕ್ರಮವನ್ನು ಅಳವಳಡಿಸಿಕೊಂಡರಷ್ಟೇ ಸಾಲದು, ಪ್ರತೀ ಕುಟುಂಬಕ್ಕೆ ಬೆಳಕು ನೀಡುವ ರೀತಿಯಲ್ಲಿ ಗಂಗಾ ಆರತಿ ಮಾಡುವುದು ಸೂಕ್ತ. ಅದಕ್ಕೆ ನನ್ನ ಬೆಂಬಲವೂ ಇದೆ. ಇಲ್ಲಿ ಗಂಗಾ ಆರತಿ ಅಂತ ಹೇಳಿ, ಇನ್ನೊಂದೆಡೆ ಭಯಭಕ್ತಿ ಇಲ್ಲದೆ ಜನಗಳ ಜತೆ ಚಲ್ಲಾಟ ಆಡುವುದು ಬೇಡ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...