ಬೀಗರಿಗೆ ಸರಿಯಾದ ಅಂತ್ಯ ಸಂಸ್ಕಾರ ಮಾಡಲಿಲ್ಲ, ಇದು ಶೆಟ್ಟರ್ ಸಾಧನೆ: ಡಿ ಕೆ ಶಿವಕುಮಾರ್‌ ಲೇವಡಿ

Date:

ಕೋವಿಡ್ ಸಂದರ್ಭದಲ್ಲಿ ನಾವು 3 ವರ್ಷಗಳ ಕಾಲ ನರಳಾಡಿದೆವು. ಬೆಳಗಾವಿ ಜಿಲ್ಲೆಯಿಂದ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಕೋವಿಡ್ ಗೆ ಬಲಿಯಾದರು. ಆಗ ಅವರ ಪಾರ್ಥೀವ ಶರೀರವನ್ನು ಈ ಊರಿಗೆ ಕಳುಹಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಜೆಸಿಬಿಯಲ್ಲಿ ಅವರ ದೇಹವನ್ನು ಗುಂಡಿಗೆ ಹಾಕಿ ಮುಚ್ಚಿದರು. ತಮ್ಮ ಬೀಗರಿಗೆ ಸರಿಯಾದ ಅಂತ್ಯ ಸಂಸ್ಕಾರ ಮಾಡಲು ಜಗದೀಶ್ ಶೆಟ್ಟರ್ ಅವರಿಂದ ಸಾಧ್ಯವಾಗಲಿಲ್ಲ. ಇದು ಶೆಟ್ಟರ್ ಅವರ ಸಾಧನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಟೀಕಿಸಿದರು.

ಬೆಳಗಾವಿಯ ಯರಗಟ್ಟಿತಾಲೂಕಿನ ಉಗಾರಖುರ್ದದಲ್ಲಿ ನಡೆದ ಪ್ರಜಾಧ್ವನಿ 2 ಯಾತ್ರೆಯಲ್ಲಿ ಅವರು ಮಾತನಾಡಿ, “ನಿಮಗೆ ಸ್ಥಳೀಯ ಸಂಸದರು ಬೇಕಾ ಅಥವಾ ಹೊರಗಿನ ಸಂಸದರು ಬೇಕಾ? ಮನೆಯ ಮಗ ಬೇಕಾ ಅಥವಾ ಬೀಗರು ಬೇಕಾ? ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೇಳಿದ್ದಾರೆ. ಆಯ್ಕೆ ಮತ್ತು ತೀರ್ಮಾನ ನಿಮ್ಮದು. ನಿಮ್ಮ ಜವಾಬ್ದಾರಿ ನಿಮ್ಮ ಹಸ್ತದಲ್ಲಿದೆ ಎಂದು ಹೇಳಿದರು.

“ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಪಕ್ಷ ಸೇರಿ, ಟಿಕೆಟ್ ಪಡೆದು ಸ್ಪರ್ಧೆ ಮಾಡಿ ಸೋತು, ನಂತರ ವಿಧಾನ ಪರಿಷತ್ ಸದಸ್ಯರಾದ ಮೂರೇ ತಿಂಗಳಲ್ಲಿ ರಾಜೀನಾಮೆ ನೀಡಿ ಬಿಜೆಪಿಗೆ ವಾಪಸ್ ಹೋಗಿದ್ದು ಶೆಟ್ಟರ್ ಅವರ ಮತ್ತೊಂದು ಸಾಧನೆ. ಹೀಗಾಗಿ ಅವರು ಈ ಭಾಗದಿಂದ ಅವರು ಸಂಸದರಾಗಲು ಅರ್ಹರಲ್ಲ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಬಿಜೆಪಿ ಸರ್ಕಾರ ಮಹಾದಾಯಿ ಯೋಜನೆಗೆ ನಮಗೆ ಅನುಮತಿ ನೀಡಲಿಲ್ಲ. ಜನರ ಸಂಕಷ್ಟಕ್ಕೆ ಸ್ಪಂದಿಸಲಿಲ್ಲ. ರೈತರ ಆದಾಯ ಡಬಲ್ ಮಾಡಲಿಲ್ಲ. ನಿಮ್ಮ ಖಾತೆಗೆ 15 ಲಕ್ಷ ಬಂದಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡಲಿಲ್ಲ” ಎಂದು ವಾಗ್ದಾಳಿ ನಡೆಸಿದರು.

“ದೇಶದ ಪ್ರಧಾನಮಂತ್ರಿಗಳು ಜಾತಿ, ಧರ್ಮ ವ್ಯವಸ್ಥೆ ಹಾಗು ಮೀಸಲಾತಿ ಬಗ್ಗೆ ಮಾತನಾಡುತ್ತಿದ್ದಾರೆ. ನಾವು ಎಲ್ಲಾ ವರ್ಗ, ಸಮುದಾಯದ ಜನರಿಗೂ ಮೀಸಲಾತಿ ನೀಡುತ್ತಾ ಬಂದಿದ್ದೇವೆ. ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಜನಸಂಖ್ಯೆ ಅನುಗುಣವಾಗಿ ಅವರಿಗೆ ಬಜೆಟ್ ನಲ್ಲಿ ಅನುದಾನ ಮೀಸಲಿಡುವ ಕಾನೂನು ತರಲಾಯಿತು. ದೇಶದಲ್ಲೇ ಮೊದಲ ಬಾರಿಗೆ ಇಂತಹ ಕ್ರಾಂತಿಕಾರಿ ಹೆಜ್ಜೆ ಇಟ್ಟ ರಾಜ್ಯ ಕರ್ನಾಟಕ ಹಾಗೂ ಕಾಂಗ್ರೆಸ್ ಸರ್ಕಾರ” ಎಂದರು.

“ಕುಮಾರಣ್ಣ ಈ ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಹೇಳಿದರು. ಇದಕ್ಕೆಲ್ಲ ನೀವೇ ಮೇ 7ರಂದು ನಡೆಯುವ ಮತದಾನದ ದಿನ ನೀವು ಉತ್ತರ ನೀಡಬೇಕು” ಎಂದು ಹೇಳಿದರು.

“ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹಾಗು ರಾಹುಲ್ ಗಾಂಧಿ ಅವರು ಐದು ನ್ಯಾಯ ಯೋಜನೆಯಲ್ಲಿ 25 ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ಮಹಾಲಕ್ಷ್ಮಿ ಯೋಜನೆ ಮೂಲಕ ಬಡ ಕುಟುಂಬದ ಮಹಿಳೆಗೆ ವಾರ್ಷಿಕ 1 ಲಕ್ಷ, ನಿರುದ್ಯೋಗಿ ಯುವಕರಿಗೆ ವಾರ್ಷಿಕ 1 ಲಕ್ಷ ಹಾಗು ತರಬೇತಿ, 25 ಲಕ್ಷದ ವರೆಗೆ ಆರೋಗ್ಯ ವಿಮೆ, ರೈತರ ಸಾಲಮನ್ನಾ ಹಾಗೂ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡುವ ಗ್ಯಾರಂಟಿ ನೀಡಿದ್ದೇವೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...