ಡಿ ಕೆ ಸುರೇಶ್‌ಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಇಲ್ಲ: ಡಿ ಕೆ ಶಿವಕುಮಾರ್‌

Date:

ಸಹೋದರ ಡಿ ಕೆ ಸುರೇಶ್‌ಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಇಲ್ಲ. ಜನ ನಮಗೆ ಸ್ವಲ್ಪ ವಿಶ್ರಾಂತಿ ಕೊಟ್ಟಿದ್ದಾರೆ. ಆದರೆ, ಪಕ್ಷದ ಕೆಲಸ ಮಾಡಬೇಕೆಂಬ ಆಸೆ ಇದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡುವ ಸಲುವಾಗಿ ಮಂಗಳೂರಿಗೆ ಆಗಮಿಸಿದ ವೇಳೆ ಸುದ್ದಿಗಾರರ ಜೊತೆ ಮಾತನಾಡಿ, ” ಚನ್ನಪಟ್ಟಣ ಜನಕ್ಕೆ ‌ಏನೂ ಆಗಿಲ್ಲ ಎಂಬ ಭಾವನೆ ಇದೆ. ನಾವು ಒಂದಷ್ಟು ಅಳಿಲು ಸೇವೆ ಮಾಡಬೇಕೆಂದು ಇದ್ದೇವೆ. ನಾವು ಅಧಿಕಾರ ಇದ್ದಾಗ ಮಾಡಿದ್ದೇವೆ. ಇದೀಗ ಸರಿಯಾದ ಸಮಯ. ಏನೋ ಒಂದು‌ ಸಹಾಯ ಮಾಡಬೇಕೆಂದು ಇದ್ದೇವೆ” ಎಂದರು.

“ಚನ್ನಪಟ್ಟಣ ಜನತೆ ನಮಗೆ 85 ಸಾವಿರ ಮತ ಕೊಟ್ಟಿದ್ದಾರೆ. ಎಂದಿಗೂ ಆ ಜನರನ್ನು ಬಿಡಲಾಗದು. ದೇವರು ನಮಗೆ ಈಗ ಅಧಿಕಾರ ಕೊಟ್ಟಿದ್ದಾರೆ. 136 ಸೀಟ್ ಕೊಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಮಾರಸ್ವಾಮಿ‌ ಚನ್ನಪಟ್ಟಣ ನೋಡುವ ಮೊದಲು ನಾನು‌ ನೋಡಿದ್ದೇನೆ. ಕುಮಾರಸ್ವಾಮಿ ಬಹಳ‌ ಲೇಟಾಗಿ ರಾಜಕಾರಣಕ್ಕೆ‌ ಬಂದವರು‌. ನಾನು 1985ರಲ್ಲೇ ವಿಧಾನಸಭಾ ಚುನಾವಣೆಗೆ ನಿಂತೆ. ಅವರು 1995ರ ನಂತರ ರಾಜಕಾರಣಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು” ಎಂದರು.

ಬಳ್ಳಾರಿಯಲ್ಲಿ ಗಣಿಗಾರಿಕೆಗೆ ಕುಮಾರಸ್ವಾಮಿ‌ ಅನುಮತಿ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿ, “ಕುಮಾರಸ್ವಾಮಿಗೆ ಎಷ್ಟು‌ ಜ್ಞಾನ ಇದೆ ಅಥವಾ ಇಲ್ಲವಾ ಗೊತ್ತಿಲ್ಲ. ನನಗಂತು‌ ಆ ಬಗ್ಗೆ ಮಾಹಿತಿ ಏನೂ ಗೊತ್ತಿಲ್ಲ” ಎಂದು ಹೇಳಿದರು.

ಡಿಸಿಎಂ ಸ್ಥಾನಗಳಿಗೆ ಬೇಡಿಕೆ ಸೃಷ್ಟಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, “ನೀವು ಪ್ರತಿ ದಿನ ಸುದ್ದಿ ಪ್ರಕಟ ಮಾಡುತ್ತಿದ್ದೀರಲ್ಲ, ಇದರಿಂದ ಖುಷಿಯಾಗುವವರಿಗೆ ಆಗಲಿ. ಯಾರು ಏನು ಬೇಕಿದ್ದರೂ ಬೇಡಿಕೆ ಇಡಲಿ. ಪಕ್ಷ ಯಾರಿಗೆ ಏನು ಉತ್ತರ ಕೊಡಬೇಕು ಕೊಡುತ್ತದೆ” ಎಂದು ಮಾರ್ಮಿಕವಾಗಿ ನುಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...