ತಾಯಂದಿರನ್ನು ಮಂಚಕ್ಕೆ ಕರೆಯುವ ಮುನಿರತ್ನ ವಿರುದ್ಧ ಸಿಎಂ ಕ್ರಮಕೈಗೊಳ್ಳಬೇಕು: ಡಿ ಕೆ ಸುರೇಶ್

Date:

ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು ₹30 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಅಡಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು ಬೆನ್ನಲ್ಲೇ ಕಾಂಗ್ರೆಸ್ ಮಾಜಿ ಸಂಸದ ಡಿ ಕೆ ಸುರೇಶ್ ಅವರು ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಕ್ರಮಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿರುವ ಆರೋಪ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೇಳಿಬಂದಿದೆ. ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು” ಎಂದು ಒತ್ತಾಯಿಸಿದರು.

“ಎರಡು ಜಾತಿಗಳ ಮಧ್ಯೆ ಸಂಘರ್ಷ ತರುವ ಕೆಲಸವನ್ನು ಮುನಿರತ್ನ ಮಾಡಿದ್ದಾರೆ. ದಲಿತ ಸಮುದಾಯಕ್ಕೆ ಮುನಿರತ್ನ ಕೀಳುಪದಗಳನ್ನು ಬಳಸಿದ್ದಾರೆ. ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಆಗಬೇಕು. ಹಿಂದೆಯೂ ಅವರು ಒಕ್ಕಲಿಗ ಸಮುದಾಯವನ್ನು ಬಹಳ ಕೀಳಾಗಿ ನೋಡಿದ್ದ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ನಾಯಕರು ಮುನಿರತ್ನ ಪ್ರಕರಣವನ್ನು ಯಾವ ರೀತಿ ಅರಗಿಸಿಕೊಳ್ಳುತ್ತಾರೋ ಗೊತ್ತಿಲ್ಲ. ಮುನಿರತ್ನ ವಿರುದ್ಧದ ಆರೋಪಗಳಿಗೆ ಬಿಜೆಪಿಯ ಒಬ್ಬರೇ ಒಬ್ಬರೂ ಈವರೆಗೂ ಹೇಳಿಕೆ ನೀಡಿಲ್ಲ. ನೈತಿಕತೆ ಇದ್ದರೆ ಇಷ್ಟೊತ್ತಿಗೆ ಪಕ್ಷದಿಂದ ಮುನಿರತ್ನ ಅವರನ್ನು ವಜಾ ಮಾಡಬೇಕಿತ್ತು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಯೋಮಿತಿ ಸಡಿಲಿಕೆ | ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದಕ್ಕೆ ಸುಣ್ಣ: ಪಿಎಸ್ಐ ಅಭ್ಯರ್ಥಿಗಳ ಅಳಲು

ಸಾರ್ವಜನಿಕ ಜವಾಬ್ದಾರಿ ಸ್ಥಾನದಲ್ಲಿ ಇರುವ ಮಾಜಿ ಸಚಿವ, ಆರ್. ಆರ್. ನಗರ ಕ್ಷೇತ್ರದ ಶಾಸಕರಾಗಿರುವ ಮುನಿರತ್ನ ಬಹಳ ಕೀಳು ದರ್ಜೆಯ ಪದಗಳನ್ನು ಆಡಿದ್ದಾರೆ. ಕೀಳರಿಮೆ ಮನಸ್ಥಿತಿ ಇರುವವರೂ ಯಾರೂ ಕೂಡ ಇಂಥ ಪದ ಬಳಸಲ್ಲ. ಒಂದು ಕಡೆ ರಾಮನ ಜಪ, ಒಂದು ಕಡೆ ಸಂಸ್ಕೃತಿ ಜಪ. ಇನ್ನೊಂದು ಕಡೆ ಅದೇ ತಾಯಂದಿರನ್ನು ಮಂಚಕ್ಕೆ ಕರೆಯುವ ಮಾಜಿ ಮಂತ್ರಿ. ಆರ್‌ಎಸ್‌ಎಸ್‌ ಜೊತೆಗೆ ಒಡನಾಟ ಇಟ್ಟುಕೊಂಡವರು ಇವರು” ಎಂದು ಲೇವಡಿ ಮಾಡಿದರು.

“ಬಿಜೆಪಿ ನಾಯಕರು ಈ ರೀತಿ ಮಾಡುವುದು ಎಷ್ಟು ಸರಿ? ಎರಡು ಜಾತಿಗಳನ್ನು ಎತ್ತಿಕಟ್ಟುವ ಕೆಲಸ ಆಗಿದೆ. ಇನ್ನೊಂದು ಕಡೆ ಲಂಚದ ಆರೋಪ. ನೇರವಾಗಿ ದುಡ್ಡು ತಂದುಕೊಟ್ಟರೆ ಬದುಕುತ್ತೀಯಾ ಎಂದು ಮುನಿರತ್ನ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಥರ ಮಾಡಿದ್ದು ಒಬ್ಬ ಸಾಮಾನ್ಯ ವ್ಯಕ್ತಿಯಲ್ಲ, ಬಿಜೆಪಿ ನಾಯಕ, ಸಿನಿಮಾ ನಿರ್ಮಾಪಕ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...