ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಿಂತು ಡಿಕೆಶಿ-ಸಿದ್ದರಾಮಯ್ಯ ನಾಡಿನ ಜನತೆಗೆ ವಾಗ್ದಾನ

Date:

  • ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿದ ಡಿಕೆಶಿ ಸಿದ್ದರಾಮಯ್ಯ
  • ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಬೇಡಿಕೊಂಡ ನಾಯಕದ್ವಯರು

ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ದಿನ ಮೊದಲೇ ಕಾಂಗ್ರೆಸ್ ಭರವಸೆಯ ʼಹಸ್ತʼ ಮೇಲೆತ್ತಿದೆ.

ಅಧಿಕಾರಕ್ಕೇರಿದ ಮರುಕ್ಷಣದಲ್ಲೇ ಪಕ್ಷ ಘೋಷಿತ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಮತ್ತೊಮ್ಮೆ ಮಾತು ನೀಡಿದೆ.

ಹೌದು, ರಾಜ್ಯ ಕಾಂಗ್ರೆಸ್‌ನ ಜೋಡೆತ್ತುಗಳೆಂದೇ ಕರೆಯಿಸಿಕೊಳ್ಳುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ನಿಂತು ನಾಡಿನ ಜನರಿಗೆ ವಾಗ್ದಾನ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು (ಮೇ9)ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿದ ಸಿದ್ದರಾಮಯ್ಯ, ಹಾಗೂ ಡಿ ಕೆ ಶಿವಕುಮಾರ್ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಿ ಅರ್ಚನೆಯ ತಟ್ಟೆಯಲ್ಲಿ ಪಕ್ಷದ ಪ್ರಣಾಳಿಕೆ ಪ್ರತಿಯನ್ನಿಟ್ಟು ಪೂಜೆ ಮಾಡಿಸಿದ ನಾಯಕದ್ವಯರು, ಅದನ್ನು ಜಾರಿ ತರುವ ಶಕ್ತಿ ನೀಡಿ ಜನಸೇವೆಗೆ ಅವಕಾಶ ಮಾಡಿಕೊಡುವಂತೆ ಕೇಳಿಕೊಂಡಿದ್ದಾರೆ.

ಪೂಜೆ ಬಳಿಕ ದೇಗುಲದ ಆವರಣದಲ್ಲಿ ನಿಂತು ಪರಸ್ಪರ ಕೈ ಎತ್ತಿ ಹಿಡಿದ ನಾಯಕರಿಬ್ಬರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಪಕ್ಷ ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಪ್ರಮಾಣ ಮಾಡಿದರು.

ಈ ಸುದ್ದಿ ಓದಿದ್ದೀರಾ?:ಬಹಿರಂಗ ಪ್ರಚಾರಕ್ಕೆ ತೆರೆ | ದೇವ‍ಸ್ಥಾನ ಭೇಟಿ ಆರಂಭಿಸಿದ ರಾಜಕೀಯ ನಾಯಕರು

ಕೆಪಿಸಿಸಿ ಅಧ್ಯಕ್ಷ ಹಾಗೂ ವಿಪಕ್ಷ ನಾಯಕರ ವಿಶೇಷ ಪೂಜೆ ಸಂದರ್ಭದಲ್ಲಿ ಮಾಜಿ ಸಚಿವ ಕೆ ಜೆ ಜಾರ್ಜ್, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಉಪಸ್ಥಿತರಿದ್ದರು.

ಇಬ್ಬರೂ ನಾಯಕರ ಈ ಆಣೆ ಪ್ರಮಾಣವೀಗ ಬದಲಾಗುವ ರಾಜಕೀಯ ಸನ್ನಿವೇಶ ಭರವಸೆಯ ಗುರುತಿನ ಸಂಕೇತ ಎಂದು ರಾಜಕೀಯ ವಲಯ ವಿಶ್ಲೇಷಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...