ಮೂರು ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಡಿಎಂಕೆ

Date:

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕೆಂದು ಡಿಎಂಕೆ ಮದ್ರಾಸ್ ಹೈಕೋರ್ಟ್‌ ಮೊರೆ ಹೋಗಿದೆ.

ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಪುರಾವೆ ಕಾಯ್ದೆಗಳ ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, ಭಾರತೀಯ ನ್ಯಾಯ ಸಂಹಿತಾ ಹಾಗೂ ಭಾರತೀಯ ಸಾಕ್ಷಿ ಅಧಿನಿಯಮಗಳನ್ನು ಜುಲೈ 1ರಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿದೆ.

ಕಾನೂನುಗಳ ವಿರುದ್ಧ ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್ ಭಾರತಿ ಅವರು ಮದ್ರಾಸ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್.ಎಸ್ ಸುಂದರ್ ಮತ್ತು ಎನ್ ಸೆಂಥಿಲ್ ಕುಮಾರ್ ಅವರಿದ್ದ ವಿಭಾಗೀಯ ಪೀಠವು ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ನೋಟಿಸ್‌ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರವು ಮೂರು ಮಸೂದೆಗಳನ್ನು ಯಾವುದೇ ಅರ್ಥಪೂರ್ಣ ಚರ್ಚೆಯಿಲ್ಲದೆ ಸಂಸತ್ತಿನಲ್ಲಿ ಅಂಗೀಕರಿಸಿದೆ” ಎಂದು ಅರ್ಜಿದಾರರು ವಾದಿಸಿದ್ದಾರೆ.

“ಯಾವುದೇ ಮಹತ್ವದ ಬದಲಾವಣೆಗಳಿಲ್ಲದೆ, ಕೇವಲ ವಿಭಾಗಗಳನ್ನು ಜಾರಿಗೆ ತರಲಾಗಿದೆ. ಹೊಸ ನಿಬಂಧನೆಗಳ ವ್ಯಾಖ್ಯಾನದಲ್ಲಿ ಬಹಳಷ್ಟು ಗೊಂದಲಗಳಿವೆ” ಎಂದು ಅವರು ಹೇಳಿದ್ದಾರೆ.

“ಸೆಕ್ಷನ್‌ಗಳನ್ನು ಬದಲಾಯಿಸುವುದರಿಂದ ನ್ಯಾಯಾಧೀಶರು, ವಕೀಲರು, ಕಾನೂನು ಜಾರಿಗೊಳಿಸುವ ಅಧಿಕಾರಿಗಳು ಮತ್ತು ಸಾರ್ವಜನಿಕರು ಪೂರ್ವನಿದರ್ಶನಗಳನ್ನು ಹುಡುಕಲು ಹಳೆಯ ಪ್ರಕರಣಗಳೊಂದಿಗೆ ಹೊಸ ನಿಬಂಧನೆಗಳನ್ನು ಹೋಲಿಕೆ ಮಾಡಲು ತುಂಬಾ ಕಷ್ಟವಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಕಾನೂನುಗಳನ್ನು ಮರುಪರಿಶೀಲಿಸುವ ಯಾವುದೇ ಉದ್ದೇಶವಿಲ್ಲದೆ, ಕಾಯಿದೆಗಳ ಶೀರ್ಷಿಕೆಗಳನ್ನು ‘ಸಂಸ್ಕೃತೀಕರಣ’ಗೊಳಿಸಲು ಮಾತ್ರವೇ ಈ ಕಸರತ್ತು ಮಾಡಲಾಗುತ್ತಿದೆ” ಎಂದು ಭಾರತಿ ಪ್ರತಿಪಾದಿಸಿದ್ದಾರೆ.

“ಸಂಸತ್ತಿನಲ್ಲಿ ಆಡಳಿತ ಪಕ್ಷವು ತನ್ನ ಮಿತ್ರಪಕ್ಷಗಳು ಹಾಗೂ ವಿರೋಧ ಪಕ್ಷಗಳನ್ನು ದೂರವಿಟ್ಟು ಈ ಕಾಯ್ದೆಗಳನ್ನು ಅಂಗೀಕರಿಸಿ, ಜಾರಿಗೊಳಿಸಿದೆ” ಎಂದು ಅವರು ಆರೋಪಿಸಿದ್ದಾರೆ.

“ಕಾಯಿದೆಗಳನ್ನು ಹಿಂದಿ/ಸಂಸ್ಕೃತದಲ್ಲಿ ಹೆಸರಿಸುವುದು ಸಂವಿಧಾನದ 348ನೇ ವಿಧಿಯ ಉಲ್ಲಂಘನೆಯಾಗಿದೆ. ಸಂಸತ್ತಿನ ಎರಡೂ ಸದನಗಳಲ್ಲಿ ಪರಿಚಯಿಸುವ ಎಲ್ಲ ಮಸೂದೆಗಳ ಅಧಿಕೃತ ಪಠ್ಯಗಳು ಇಂಗ್ಲಿಷ್‌ನಲ್ಲಿರಬೇಕು ಎಂದು ವಿಧಿಯು ಸೂಚಿಸಿದೆ” ಎಂದು ಭಾರತಿ ವಾದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...