‘ಉತ್ತರ ಭಾರತದ ಮಹಿಳೆಯರಿಗೆ ಮನೆಯಲ್ಲಿಯೇ ಇದ್ದು, ಮಕ್ಕಳನ್ನು ಹೆರಲು ಹೇಳಲಾಗುತ್ತೆ: ವಿವಾದ ಸೃಷ್ಟಿಸಿದ ಡಿಎಂಕೆ ಸಂಸದರ ಹೇಳಿಕೆ

Date:

ಉತ್ತರ ಭಾರತದ ಮಹಿಳೆಯರು ಮತ್ತು ತಮಿಳುನಾಡಿನ ಮಹಿಳೆಯರನ್ನು ಹೋಲಿಸುವ ಮೂಲಕ ಡಿಎಂಕೆ ಸಂಸದ ದಯಾನಿಧಿ ಮಾರನ್ ಭಾರಿ ರಾಜಕೀಯ ವಿವಾದ ಸೃಷ್ಟಿಸಿದ್ದಾರೆ. “ತಮಿಳುನಾಡಿನಲ್ಲಿ ಮಹಿಳೆಯರಿಗೆ ಓದುವಂತೆ, ಅಧ್ಯಯನ ಮಾಡಲು ಹೇಳಲಾಗುತ್ತದೆ. ಆದರೆ ಉತ್ತರ ಭಾರತದಲ್ಲಿ ಮಹಿಳೆಯರಿಗೆ ಅಡುಗೆ ಮನೆಯಲ್ಲಿ ಕೆಲಸ ಮಾಡಲು, ಮಕ್ಕಳನ್ನು ಹೆರಲು ಹೇಳಲಾಗುತ್ತದೆ” ಎಂದಿದ್ದಾರೆ.

ಕ್ವಾಯ್ದ್-ಇ-ಮಿಲ್ಲತ್ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮಾರನ್, “ನಮ್ಮ ಹೆಣ್ಣುಮಕ್ಕಳು ಸಂದರ್ಶನಕ್ಕೆ ಹಾಜರಾಗಲಿ ಅಥವಾ ಸ್ನಾತಕೋತ್ತರ ಪದವಿ ಪಡೆಯಲಿ ಲ್ಯಾಪ್‌ಟಾಪ್‌ ಹಿಡಿದು ಆತ್ಮವಿಶ್ವಾಸ ಮತ್ತು ಹೆಮ್ಮೆಯಿಂದ ಇರಬೇಕು. ಆ ವಿಶ್ವಾಸ ತಮಿಳುನಾಡಿನಲ್ಲಿದೆ. ಇಲ್ಲಿ ನಾವು ಹೆಣ್ಣು ಮಕ್ಕಳು ಓದಲು, ಅಧ್ಯಯನ ಮಾಡಲು ಹೇಳುತ್ತೇವೆ. ಆದರೆ ಉತ್ತರ ಭಾರತದಲ್ಲಿ ಹೆಣ್ಣು ಮಕ್ಕಳಿಗೆ ಏನು ಹೇಳುತ್ತಾರೆ? ಕೆಲಸಕ್ಕೆ ಹೋಗಬೇಡಿ, ಮನೆಯಲ್ಲಿರಿ, ಅಡುಗೆಮನೆಯಲ್ಲಿರಿ, ಮಗುವನ್ನು ಹೆರಿ, ಅದು ನಿಮ್ಮ ಕೆಲಸ ಎಂದು ಹೇಳಲಾಗುತ್ತದೆ” ಎಂದು ಅಭಿಪ್ರಾಯಿಸಿದರು.

ಇದನ್ನು ಓದಿದ್ದೀರಾ? ತಮಿಳುನಾಡಿನಲ್ಲಿ ಯೋಜನೆಗಳನ್ನು ತಡೆ ಹಿಡಿದಿದ್ದ ಚು. ಆಯೋಗ ಬಿಹಾರದಲ್ಲಿ ಮಾಡಿದ್ದೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ತಮಿಳುನಾಡು, ದ್ರಾವಿಡ ರಾಜ್ಯ. ಕಲೈನಾರ್ (ಮಾಜಿ ಮುಖ್ಯಮಂತ್ರಿ ದಿವಂಗತ ಎಂ ಕರುಣಾನಿಧಿ), ಅಣ್ಣಾ (ಮಾಜಿ ಮುಖ್ಯಮಂತ್ರಿ ಸಿ ಎನ್ ಅಣ್ಣಾದೊರೈ ಮತ್ತು (ಮುಖ್ಯಮಂತ್ರಿ) ಎಂ ಕೆ ಸ್ಟಾಲಿನ್ ಅವರ ನಾಡು. ಇಲ್ಲಿ ನಿಮ್ಮ ಪ್ರಗತಿ ತಮಿಳುನಾಡಿನ ಪ್ರಗತಿಯಾಗಿದೆ. ಅದಕ್ಕಾಗಿಯೇ ಜಾಗತಿಕ ಕಂಪನಿಗಳು ಚೆನ್ನೈಗೆ ಬರುತ್ತವೆ. ಏಕೆಂದರೆ ಇಲ್ಲಿರುವ ಎಲ್ಲರೂ ತಮಿಳಿನಲ್ಲಿ ಮಾತ್ರವಲ್ಲ, ಇಂಗ್ಲಿಷ್‌ನಲ್ಲೂ ಶಿಕ್ಷಣ ಪಡೆದಿದ್ದಾರೆ” ಎಂದು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇನ್ನು ಈ ಕಾರ್ಯಕ್ರಮದಲ್ಲಿ, ಉಪಮುಖ್ಯಮಂತ್ರಿ ಮತ್ತು ಎಂ ಕೆ ಸ್ಟಾಲಿನ್ ಅವರ ಮಗ ಉದಯನಿಧಿ ಸ್ಟಾಲಿನ್ ಉಲಗಂ ಉಂಗಲ್ ಕೈಯಿಲ್ ಯೋಜನೆಯಡಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಿದರು.

ವಿಪಕ್ಷ ಬಿಜೆಪಿ ಡಿಎಂಕೆ ಸಂಸದರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದೆ. ತಮಿಳುನಾಡಿನಲ್ಲಿ ಬಿಜೆಪಿ ವಕ್ತಾರ ನಾರಾಯಣನ್ ತಿರುಪತಿ, “ಮತ್ತೊಮ್ಮೆ, ದಯಾನಿಧಿ ಮಾರನ್ ಉತ್ತರ ಭಾರತೀಯರನ್ನು ನಿಂದಿಸಿದ್ದಾರೆ. ಡಿಎಂಕೆ ಪದೇ ಪದೇ ಈ ರೀತಿ ನಿಂದಿಸುತ್ತಿದೆ. ದಯಾನಿಧಿ ಮಾರನ್ ಅವರಿಗೆ ಸಾಮಾನ್ಯ ಜ್ಞಾನವಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಮಹಿಳೆಯ ಮೇಲೆ ಅತ್ಯಾಚಾರ; ಬಜರಂಗದಳ ನಾಯಕ ಬಂಧನ

ಇನ್ನು ಬಿಜೆಪಿ ನಾಯಕಿ ಅನಿಲಾ ಸಿಂಗ್, “ಭಾರತವು ಶಕ್ತಿಯನ್ನು ಪೂಜಿಸುತ್ತದೆ ಎಂಬುದನ್ನು ಅವರು ಮರೆತಿದ್ದಾರೆ. ಶಕ್ತಿಯನ್ನು ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮ ಎಂದು ವಿಂಗಡಿಸಬಹುದು ಎಂದು ಅವರು ಭಾವಿಸಿದರೆ, ಅವರಿಗೆ ನಮ್ಮ ಸಂಸ್ಕೃತಿ ಅರ್ಥವಾಗಿಲ್ಲ ಎಂದರ್ಥ. ಸೋನಿಯಾ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ವಾದ್ರಾ ಅಥವಾ ನಮ್ಮ ಅಧ್ಯಕ್ಷೆ ದ್ರೌಪದಿ ಮುರ್ಮು ಎಲ್ಲಿಯವರು ಎಂದು ನಾನು ಕೇಳಲು ಬಯಸುತ್ತೇನೆ. ಈ ವಿಭಜನಕಾರಿ ರಾಜಕೀಯ ಕೆಲಸ ಮಾಡುವುದಿಲ್ಲ” ಎಂದರು.

ಆದರೆ ಡಿಎಂಕೆ ನಾಯಕರು ಮಾರನ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. “ಇದು ರಾಜ್ಯವನ್ನು ಆಳುವ ಪಕ್ಷದ ಮೇಲೆ ಅವಲಂಬಿತ. ಈಗ ಕಾಂಗ್ರೆಸ್ ಮಹಿಳೆಯನ್ನು ಸಬಲೀಕರಿಸುತ್ತಿದೆ. ಕಾಂಗ್ರೆಸ್ ಎಲ್ಲೆಲ್ಲಿ ಆಡಳಿತ ನಡೆಸುತ್ತಿದೆಯೋ ಅಲ್ಲೆಲ್ಲಾ ಮಹಿಳೆಯರ ಶಿಕ್ಷಣಕ್ಕಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂಬುದರಲ್ಲಿ ಸಂದೇಹವಿಲ್ಲ. ಇಲ್ಲಿ ತಮಿಳುನಾಡಿನಲ್ಲಿ, ನಾವು ಮಹಿಳೆಯರಿಗಾಗಿ ಹೋರಾಡಿದ್ದೇವೆ, ಅವರನ್ನು ಸಬಲೀಕರಣಗೊಳಿಸಿದ್ದೇವೆ. ಶಿಕ್ಷಣ ನೀಡಿದ್ದೇವೆ. ಉದ್ಯೋಗ ನೀಡಿದ್ದೇವೆ. ಉತ್ತರದಲ್ಲಿ, ಮಹಿಳೆಯರಿಗಾಗಿ ಹೋರಾಡಲು ಯಾರೂ ಇಲ್ಲ” ಎಂದು ಡಿಎಂಕೆಯ ಟಿಕೆಎಸ್ ಇಳಂಗೋವನ್ ಹೇಳಿದ್ದಾರೆ.

ಆದರೆ ರಾಜಕೀಯಕ್ಕೆ ಮಹಿಳೆಯರನ್ನು ಬಳಸಿಕೊಳ್ಳುವುದನ್ನು ನೆಟ್ಟಿಗರು ಪ್ರಶ್ನಿಸಿದ್ದಾರೆ. ಮಹಿಳೆಯರು ರಾಜಕೀಯದ ವಿಷಯವಸ್ತುವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...