‘ನನಗೆ ಏನೂ ಅರ್ಥ ಆಗಲಿಲ್ಲ’: ಕೇಂದ್ರ ಸಚಿವರ ಹಿಂದಿ ಪತ್ರಕ್ಕೆ ತಮಿಳಿನಲ್ಲಿ ಪ್ರತಿಪತ್ರ ಬರೆದ ಡಿಎಂಕೆ ಸಂಸದ

Date:

ರೈಲುಗಳಲ್ಲಿನ ಆಹಾರ ಗುಣಮಟ್ಟ ಹಾಗೂ ಶುಚಿತ್ವದ ಕುರಿತು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಅವರು ತಮಿಳುನಾಡು ಡಿಎಂಕೆ ಸಂಸದ ಎಂ.ಎಂ ಅಬ್ದುಲ್ಲಾ ಅವರಿಗೆ ಹಿಂದಿಯಲ್ಲಿ ಪತ್ರ ಬರೆದಿದ್ದಾರೆ. ಆ ಪತ್ರಕ್ಕೆ ತಮಿಳಿನಲ್ಲಿ ಪ್ರತಿಪತ್ರ ಬರೆದಿರುವ ಅಬ್ಬುಲ್ಲಾ, ‘ನನಗೆ ಏನೂ ಅರ್ಥವೇ ಆಗಿಲ್ಲ’ ಎಂದು ಉತ್ತರಿಸಿದ್ದಾರೆ.

ರೈಲುಗಳಲ್ಲಿ ಸೌಲಭ್ಯಗಳ ಬಗ್ಗೆ ಡಿಎಂಕೆ ನಾಯಕ, ರಾಜ್ಯಸಭಾ ಸಂಸದ ಪುದುಕೋಟ್ಟೈ ಎಂ.ಎಂ ಅಬ್ದುಲ್ಲಾ ಅವರು ಪ್ರಶ್ನಿಸಿದ್ದರು. ಅವರ ಪ್ರಶ್ನೆಗೆ ಉತ್ತರಿಸಿ ಕೇಂದ್ರ ಸಚಿವ ರವನೀತ್ ಸಿಂಗ್ ಅವರು ಹಿಂದಿಯಲ್ಲಿ ಪತ್ರ ಬರೆದಿದ್ದರು. ಆದರೆ, ಆ ಪತ್ರದಲ್ಲಿದ್ದ ಒಂದೇ ಒಂದು ಪದವೂ ತಮಗೆ ಅಥವಾಗಿಲ್ಲ ಎಂದು ಅಬ್ದುಲ್ಲಾ ಅವರು ಪ್ರತಿಪತ್ರ ಬರೆದಿದ್ದಾಎರ. ತಮಗೆ ಇಂಗ್ಲಿಷ್‌ನಲ್ಲಿ ಉತ್ತರ ಕಳಿಸುವಂತೆ ಕೇಳಿದ್ದಾರೆ.

ತಮಗೆ ಬಂದ ಪತ್ರ ಮತ್ತು ತಾವು ಪ್ರತಿಕ್ರಿಯಿಸಿರುವ ಪತ್ರಗಳನ್ನು ಅಬ್ದುಲ್ಲಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ನನಗೆ ಹಿಂದಿ ಅರ್ಥವಾಗುವುದಿಲ್ಲ ಎಂದು ಹಲವು ಬಾರಿ ಒತ್ತಿ ಹೇಳಿದ್ದೇನೆ. ಆದರೂ, ಕೇಂದ್ರ ಸಚಿವರ ಕಚೇರಿಯಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳು ನನಗೆ ಹಿಂದಿ ಭಾಷೆಯಲ್ಲಿ ಪತ್ರಗಳನ್ನು ಕಳಿಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನಗೆ ಹಿಂದಿ ಬರುವುದಿಲ್ಲ. ದಯವಿಟ್ಟು ಇಂಗ್ಲಿಷ್‌ನಲ್ಲಿ ಪತ್ರ ಕಳುಹಿಸಿ ಎಂದು ಹಲವು ಬಾರಿ ಸಚಿವರ ಕಚೇರಿಯಲ್ಲಿರುವ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ. ಆದರೂ, ಪತ್ರಗಳು ಮಾತ್ರ ಹಿಂದಿಯಲ್ಲೇ ಬರುತ್ತಿವೆ. ಈಗ, ಅವರಿಗೆ ಅರ್ಥವಾಗುವ ರೀತಿಯಲ್ಲಿ ನಾನು ಪ್ರತ್ಯುತ್ತರ ನೀಡಿದ್ದೇನೆ. ಇನ್ನು ಮುಂದೆ ನನಗೆ ಇಂಗ್ಲಿಷ್ ಭಾಷೆಯಲ್ಲೇ ಪತ್ರ ಕಳಿಸಬೇಕು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...