‘ಹಿಂದಿಯಿಂದ ಹಣ ಬೇಕು, ಭಾಷೆ ಬೇಡವೇ’ ಎಂದ ಪವನ್‌ಗೆ ಚಾಟಿ ಬೀಸಿದ ಡಿಎಂಕೆ

Date:

ತಮಿಳು ಚಿತ್ರಗಳನ್ನು ಹಿಂದಿ ಭಾಷೆಗೆ ಡಬ್ ಮಾಡಲು ತಮಿಳುನಾಡು ಸರ್ಕಾರ, ರಾಜಕಾರಣಿಗಳು ಅವಕಾಶ ನೀಡಿದ್ದಾರೆ. ಆದರೆ, ಹಿಂದಿ ಹೇರಿಕೆಯನ್ನು ಮಾತ್ರ ವಿರೋಧಿಸುತ್ತಿದ್ದಾರೆ. ಹಿಂದಿಯಿಂದ ಅವರಿಗೆ ಹಣ ಬೇಕು. ಆದರೆ, ಆ ಭಾಷೆ ಬೇಡ. ಇದು ಯಾವ ತರ್ಕ ಎಂದು ನಟ, ರಾಜಕಾರಣಿ, ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಪ್ರಶ್ನಿಸಿದ್ದಾರೆ.

ಅವರ ಪ್ರಶ್ನೆಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪ್ರತಿಕ್ರಿಯಿಸಿದ್ದು, “ತಮಿಳುನಾಡು ಹಿಂದಿ ಅಥವಾ ಯಾವುದೇ ಇತರ ಭಾಷೆಯನ್ನು ಯಾವುದೇ ವ್ಯಕ್ತಿ ಕಲಿಯುವುದನ್ನು ಎಂದಿಗೂ ವಿರೋಧಿಸಿಲ್ಲ. ಆದರೆ, ನಮ್ಮ ರಾಜ್ಯ ಮತ್ತು ಜನರ ಮೇಲೆ ಹಿಂದಿ ಅಥವಾ ಯಾವುದೇ ಭಾಷೆಯನ್ನು ಒತ್ತಾಯಪೂರ್ವಕವಾಗಿ ಹೇರುವುದನ್ನು ಸಹಿಸುವುದಿಲ್ಲ” ಎಂದು ಹೇಳಿದೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ‘ಜನಸೇನಾ ಪಕ್ಷ’ದ ಸಂಸ್ಥಾಪಕ ಪವನ್ ಕಲ್ಯಾಣ್‌ ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ತಮಿಳು ಸಿನಿಮಾಗಳನ್ನು ನಿರಂತರವಾಗಿ ಹಿಂದಿಗೆ ಡಬ್ ಮಾಡಲಾಗುತ್ತಿದೆ. ಆದರೆ, ತಮಿಳುನಾಡು ನಾಯಕರು ಹಿಂದಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ತರ್ಕ ನನಗೆ ಅರ್ಥವಾಗುತ್ತಿಲ್ಲ. ಹಣಕಾಸು ಲಾಭಕ್ಕಾಗಿ ತಮಿಳು ಚಿತ್ರಗಳನ್ನು ಹಿಂದಿಗೆ ಡಬ್ ಮಾಡಲು ಅವಕಾಶ ನೀಡುವ ತಮಿಳುನಾಡಿನ ನಾಯಕರಿಗೆ ಬಾಲಿವುಡ್‌ನಿಂದ ಆರ್ಥಿಕ ಲಾಭ ಬೇಕು. ಆದರೆ, ಹಿಂದಿ ಭಾಷೆ ಬೇಡ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪವನ್ ಕಲ್ಯಾಣ್ ಹೇಳಿಕೆಯನ್ನು ಡಿಎಂಕೆ ವಕ್ತಾರ ಡಾ. ಸೈಯದ್ ಹಫೀಜುಲ್ಲಾ ತೀಕ್ಷ್ಣವಾಗಿ ಅಲ್ಲಗಳೆದಿದ್ದಾರೆ. “ಪವನ್ ಕಲ್ಯಾಣ್ ಅವರಿಗೆ ಭಾಷಾ ನೀತಿಗಳ ಕುರಿತು ಸರಿಯಾದ ತಿಳಿವಳಿಕೆ ಇಲ್ಲ. ಭಾಷೆ ಬಗ್ಗೆ ತಮಿಳುನಾಡಿನ ನಿಲುವು ಅವರಿಗೆ ಗೊತ್ತಿಲ್ಲ. ನಾವು ಯಾವುದೇ ಭಾಷೆಯ ಕಲಿಕೆಯನ್ನು ವಿರೋಧಿಸುವುದಿಲ್ಲ. ಆದರೆ, ನಮ್ಮ ಮೇಲೆ ಒತ್ತಾಯವಾಗಿ ಯಾವುದೇ ಭಾಷೆಯನ್ನು ಹೇರುವುದನ್ನು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಮುಸ್ಲಿಂ ಸಮುದಾಯದ ವಿರುದ್ಧ ಮುಂದುವರೆದ ಬಿಜೆಪಿ ನಾಯಕರ ದ್ವೇಷ: ನಿರ್ಲಕ್ಷ್ಯವೊಂದೆ ಪರಿಹಾರ

“ಭಾಷಾ ನೀತಿಯನ್ನು ವ್ಯಾವಹಾರಿಕ ನಿರ್ಧಾರಗಳೊಂದಿಗೆ (ಸಿನಿಮಾ ಡಬ್ಬಿಂಗ್) ಸಮೀಕರಿಸಲು ಸಾಧ್ಯವಿಲ್ಲ. ಜನರು ಹಿಂದಿ ಕಲಿಯಲು ಬಯಸಿದರೆ, ಅವರು ಕಲಿಯುತ್ತಾರೆ. ಅದನ್ನು ನಾವು ಸ್ವಾಗತಿಸುತ್ತೇವೆ. ಆದಾಗ್ಯೂ, ಕೇಂದ್ರ ಸರ್ಕಾರವು ಎನ್‌ಇಪಿ ಅಥವಾ ಪಿಎಂಶ್ರೀ ಶಾಲೆ ರೀತಿಯ ನೀತಿಗಳ ಮೂಲಕ ಹಿಂದಿ ಕಲಿಕೆಯನ್ನು ಕಡ್ಡಾಯಗೊಳಿಸಿದರೆ, ಅದು ಹೇರಿಕೆಯಾಗುತ್ತದೆ. ಸಮಸ್ಯೆಯನ್ನು ಹುಟ್ಟುಹಾಕುತ್ತದೆ” ಎಂದು ಹಫೀಜುಲ್ಲಾ ಹೇಳಿದ್ದಾರೆ.

ಹಿರಿಯ ಡಿಎಂಕೆ ನಾಯಕ ಟಿಕೆಎಸ್ ಎಳಂಗೋವನ್ ಕೂಡ ಪ್ರತಿಕ್ರಿಯಿಸಿದ್ದು, “ನಾವು 1938ರಿಂದ ಹಿಂದಿಯನ್ನು ವಿರೋಧಿಸುತ್ತಿದ್ದೇವೆ. ಶಿಕ್ಷಣ ತಜ್ಞರ ಸಲಹೆ ಮತ್ತು ಅಭಿಪ್ರಾಯಗಳೊಂದಿಗೆ ತಮಿಳುನಾಡು ಯಾವಾಗಲೂ ದ್ವಿಭಾಷಾ ಸೂತ್ರವನ್ನು ಅನುಸರಿಸುತ್ತದೆ. ಅದನ್ನು ನಾವು ರಾಜ್ಯ ವಿಧಾನಸಭೆಯಲ್ಲಿ ಕಾನೂನು ಅಂಗೀಕರಿಸಿದ್ದೇವೆ. ಪವನ್ ಕಲ್ಯಾಣ್ ಹುಟ್ಟುವ ಮೊದಲೇ 1968ರಲ್ಲಿ ದ್ವಿಭಾಷಾ ಸೂತ್ರದ ಕಾನೂನನ್ನು ತಮಿಳುನಾಡು ಅಂಗೀಕರಿಸಿತ್ತು. ಅವರಿಗೆ ತಮಿಳುನಾಡಿನ ರಾಜಕೀಯ ತಿಳಿದಿಲ್ಲ. ಜನರಿಗೆ ತರಬೇತಿ ನೀಡಲು ಮಾತೃಭಾಷೆಯಲ್ಲಿ ಶಿಕ್ಷಣ ನೀಡುವುದು ಅತ್ಯುತ್ತಮ ಮಾರ್ಗವೆಂದು ಭಾವಿಸಿದ್ದೇವೆ. ಶಿಕ್ಷಣದಲ್ಲಿ ಹಿಂದಿ ಏರಿಕೆಯನ್ನು ವಿರೋಧಿಸುತ್ತೇವೆ. ಪವನ್ ಅವರು ಬಿಜೆಪಿ ಸರ್ಕಾರದಿಂದ ಏನನ್ನೋ ಪಡೆಯುವ ಅಪೇಕ್ಷೆಯಿಂದ ಹೀಗೆ ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...