ರಾಜಕಾರಣಿಗಳ ಕಾಮವಾಂಛೆಗೆ ಯುವತಿಯರ ಸರಬರಾಜು; ಭಾರೀ ವಿವಾದ ಸೃಷ್ಟಿಸಿದ ಡಿಎಂಕೆ ಕಾರ್ಯಕರ್ತನ ಪತ್ನಿ ಆರೋಪ

Date:

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಕಾರ್ಯಕರ್ತನ ವಿರುದ್ಧ ಆತನ ಪತ್ನಿ ಚಿತ್ರಹಿಂಸೆ ಮತ್ತು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. “ನನ್ನ ಪತಿ ಆತನ ಕೆಲಸಗಳಿಗಾಗಿ ನನ್ನನ್ನು ರಾಜಕಾರಣಿಗಳ ಜೊತೆ ಮಲಗುವಂತೆ ಒತ್ತಾಯಿಸುತ್ತಾನೆ. ರಾಜಕಾರಣಿಗಳ ಕಾಮವಾಂಛೆ ತಣಿಸಲು ಯುವತಿಯರನ್ನು ಸರಬರಾಜು ಮಾಡುತ್ತಾನೆ. ಅಲ್ಲದೆ, ನನ್ನನ್ನು ಹುಚ್ಚು ನಾಯಿಯಂತೆ ವಿಕೃತವಾಗಿ ಕಚ್ಚುತ್ತಾನೆ” ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

ಅರಕ್ಕೋಣಂ ಜಲ್ಲೆ ಕಾಲೇಜು ವಿದ್ಯಾರ್ಥಿನಿಯಾಗಿರುವ ದೂರುದಾರ ಯುವತಿ ತನ್ನ ಪತಿ, ಡಿಎಂಕೆ ಯುವ ಘಟಕದ ಉಪ ಕಾರ್ಯಕರ್ಶಿ ದೇವಸೇಯಲ್ ಎಂಬಾತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. “ಆತನ ಕೃತ್ಯಗಳನ್ನು ಯಾರಿಗಾದರೂ ಹೇಳಿದರೆ, ಪೊಲೀಸರಿಗೆ ದೂರು ನೀಡಿದರೆ ನನ್ನ ಕುಟುಂಬವನ್ನು ಸುಟ್ಟು ಹಾಕುವುದಾಗಿ ಬದರಿಕೆ ಹಾಕಿದ್ದ” ಎಂದೂ ಆರೋಪಿಸಿದ್ದಾರೆ.

“20 ವರ್ಷದ ಹುಡುಗಿಯರನ್ನು ರಾಜಕಾರಣಿಗಳೊಂದಿಗೆ ಮಲಗುವಂತೆ ಚಿತ್ರಹಿಂಸೆ ನೀಡುವುದೇ ಅವನ ಕೆಲಸ. ಅವನು ನನ್ನನ್ನು ಕಾರಿನಲ್ಲಿ ಹಿಂಸಿಸಿ, ತಾನು ಹೇಳಿದ ಪುರುಷರೊಂದಿಗೆ ಮಲಗಬೇಕೆಂದು ಒತ್ತಾಯಿಸಿದ್ದಾನೆ. ಆತನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ನಾನು ದೂರು ನೀಡಿದರೆ, ನನ್ನನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದಾನೆ. ‘ನೀನು ದೂರು ನೀಡಿದರೆ ಏನೂ ಆಗುವುದಿಲ್ಲ. ಯಾಕೆಂದರೆ, ಪೊಲೀಸರು ನನಗೆ ಸಪೋರ್ಟ್‌ ಮಾಡುತ್ತಾರೆ’ ಎಂದು ಹೇಳಿದ. ಆತನ ನಿರಂತರ ಹಿಂಸೆಯಿಂದಾಗಿ ನಾನು ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದೆ” ಎಂದು ದೂರಿನಲ್ಲಿ ಸಂತ್ರಸ್ತೆ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಘಾತುಕ, ನನ್ನ ವಿಕೃತ ಪತಿ ವಿರುದ್ಧ ಡಿಎಂಕೆ ನಾಯಕ, ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ತಕ್ಷಣವೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಸಂತ್ರಸ್ತ ಯುವತಿ ದೂರು ದಾಖಲಿಸಿದ ಬಳಿಕ, ಆಡಳಿತಾರೂಢ ಡಿಎಂಕೆ ಸರ್ಕಾರದ ವಿರುದ್ಧ ವಿಪಕ್ಷ ಎಐಎಡಿಎಂಕೆ ವಾಗ್ದಾಳಿ ನಡೆಸಿದೆ.

“ಆರಂಭದಲ್ಲಿ ಸಂತ್ರಸ್ತೆ ನೀಡಿದ ದೂರನ್ನು ದಾಖಲಿಸಿಕೊಳ್ಳಲು ಪೊಲೀಸರು ನಿರಾಕರಿಸಿದ್ದರು. ಅಂತಿಮವಾಗಿ ದೂರು ದಾಖಲಿಸಿಕೊಂಡಿದ್ದಾರೆ. ದೂರು ದಾಖಲಿಸಿಕೊಂಡ ಸಮಯದಲ್ಲಿ, ತನ್ನ ಪತಿಗೆ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೋಳಿ ಅವರೊಂದಿಗೆ ಸಂಪರ್ಕವಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ, ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯವನ್ನು ಸೂಚಿಸುವ ಯಾವುದೇ ಪುರಾವೆಗಳಿಲ್ಲವೆಂದು ಪೊಲೀಸರು ಹೇಳುತ್ತಿದ್ದಾರೆ” ಎಂದು ಎಐಎಡಿಎಂಕೆ ಅಸಮಾಧಾನ ವ್ಯಕ್ತಪಡಿಸಿದೆ.

ತಪ್ಪಿತಸ್ಥರ ವಿರುದ್ಧ ಸರ್ಕಾರವು ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತದೆ. ಪೊಲೀಸರು ತನಿಖೆಯನ್ನು ಆಧಿರಿಸಿ, ಪಕ್ಷವು ಆಂತರಿಕ ಕ್ರಮ ಕೈಗೊಳ್ಳುತ್ತದೆ ಎಂದು ಆಡಳಿತಾರೂಢ ಡಿಎಂಕೆ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...