ಎರಡು ಸೀಟು ಪಡೆಯಲು ನಾನು ಇಷ್ಟೆಲ್ಲ ಪ್ರಯತ್ನ ಪಡಬೇಕಾ?: ಕುಮಾರಸ್ವಾಮಿ ಬೇಸರ

Date:

ಎರಡು ಸೀಟು ಪಡೆಯಲು ನಾನು ಇಷ್ಟೆಲ್ಲ ಪ್ರಯತ್ನ ಪಡಬೇಕಾ? ನಾವೇನು ಆರೇಳು ಸೀಟುಗಳನ್ನು ಕೇಳಿಲ್ಲ. ನಾವು ಕೇಳಿದ್ದೇ ಮೂರರಿಂದ ನಾಲ್ಕು ಸೀಟುಗಳು. ನಮ್ಮ ಶಕ್ತಿ ಅವರಿಗೂ ಗೊತ್ತಿದೆ. ಮೂರು ನಾಲ್ಕು ಸೀಟು ಸಿಗುವ ನಂಬಿಕೆ ಇದೆ ಎಂದು ಬಿಜೆಪಿ ಜೊತೆ ಮೈತ್ರಿಮಾಡಿಕೊಂಡಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಾನು ಅಧಿಕೃತ ಟಿಕೆಟ್ ಘೋಷಣೆ ಆಗುವರೆಗೂ ಮಾತಾಡುವುದಿಲ್ಲ. ಹಾಸನ, ಮಂಡ್ಯದಲ್ಲಿ ಸ್ವತಂತ್ರವಾಗಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ತ್ರಿಕೋನ ಸ್ವರ್ಧೆ ಆದರೂ ಸುಲಭವಾಗಿ ಗೆಲ್ಲುತ್ತೇವೆ” ಎಂದರು.

“18ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಶಕ್ತಿಯನ್ನು ಧಾರೆಯರೆದರೆ ಬಿಜೆಪಿಗೆ ಪ್ಲಸ್ ಪಾಯಿಂಟ್. ಕರ್ನಾಟಕ ರಾಜಕೀಯವೇ ಬೇರೆ ದೇಶದ ರಾಜಕಾರಣವೇ ಬೇರೆ. ನಮ್ಮ ಪಕ್ಷದ ಅಭಿಮಾನಿಗಳು ಮತ್ತು ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರು ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡಬಾರದು. ಎಲ್ಲರು ಒಟ್ಟಾಗಿ ಕೆಲಸ ಮಾಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದಲ್ಲಿ ಎನ್​ಡಿಎ ಸರ್ಕಾರ ಬರುತ್ತದೆ ಎಂಬ ಭಾವನೆ ಇದೆ. ಮೈತ್ರಿಯ ಉದ್ದೇಶ ಅಧಿಕಾರಕ್ಕಿಂತ ಹೆಚ್ಚಾಗಿ ರಾಜ್ಯದ ಅಭಿವೃದ್ಧಿಗೆ ಪ್ರಾಮುಖ್ಯತೆ ಕೊಡುವುದಾಗಿದೆ. ಇದಕ್ಕೆಲ್ಲ ಪರಿಹಾರ ತರಬೇಕು ಅನ್ನೋದೆ ನಮ್ಮ ಪಕ್ಷದ ನಿಲುವು. ಲೋಕಸಭೆ ಸದಸ್ಯರಿಗೆ ಧ್ವನಿ ಇಲ್ಲ ಅಂತಿದ್ದಾರೆ. ಈ ಧ್ವನಿಯನ್ನ ಲೋಕಸಭೆಯಲ್ಲಿ ತರಬೇಕಂತ ನಿರ್ಧಾರ ಮಾಡಲಾಗಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...