ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹೆಚ್ಚು ಸಮಾಜಮುಖಿಯಾಗಿ ಕೆಲಸ ಮಾಡಬೇಕು : ಸಿಎಂ ಸಿದ್ದರಾಮಯ್ಯ

Date:

“ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ‘ರಾಷ್ಟ್ರೀಯ ವೈದ್ಯರ ದಿನಾಚರಣೆ’ಯನ್ನು ಉದ್ಘಾಟಿಸಿ ಮಾತನಾಡಿದರು.

“ವೈದ್ಯರು ತಮ್ಮ ವೃತ್ತಿ ಧರ್ಮವನ್ನು ಪಾಲಿಸುವುದು ಅತ್ಯಂತ ಅವಶ್ಯಕ. ರೋಗಿಯ ಪ್ರಾಣ ಉಳಿಸಿದರೆ ವೈದ್ಯರೇ ದೇವರಾಗುತ್ತಾರೆ. ತಮ್ಮ ವೃತ್ತಿಯಲ್ಲಿ ಯಾವುದೇ ಕಾರಣಕ್ಕೂ ವೈದ್ಯರು ನಿರ್ಲಕ್ಷ್ಯ ತೋರಬಾರದು. ಸ್ವಲ್ಪ ನಿರ್ಲಕ್ಷ್ಯ ತೋರಿದರೂ ಅನಾಹುತವಾಗುತ್ತದೆ ಎಂಬ ಎಚ್ಚರವಿರಬೇಕು. ಇದು ದೇವರ ಕೆಲಸ ಎಂದು ಮಾಡಿದರೆ ಸಮಾಜದಲ್ಲಿ ರೋಗಗಳನ್ನು ತಡೆಗಟ್ಟುವ , ರೋಗಿಗಳ ಸಂಖ್ಯೆಯನ್ನು ಕಡಿಮೆಮಾಡಬಹುದು. ರೋಗಗಳನ್ನು ತಡೆಗಟ್ಟುವುದನ್ನು ಕೂಡ ಆರೋಗ್ಯ ಇಲಾಖೆ ಗಮನದಲ್ಲಿರಿಸಿಕೊಂಡು ಕಾರ್ಯನಿರ್ವಹಿಸಬೇಕು” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೈದ್ಯ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿ. ವೈದ್ಯೋ ನಾರಾಯಣೋ ಹರಿಃ ಎಂದು ಭಾವಿಸಲಾಗುತ್ತದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವವರು ಹಾಗೂ ಆರೋಗ್ಯ ರಕ್ಷಣೆ ಮಾಡುವವರು ವೈದ್ಯರು ಎಂದರು. ಕೊರೋನಾ ಸಂದರ್ಭದಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ಸೇವೆಯನ್ನು ಮರೆಯಲಿಕ್ಕೆ ಸಾಧ್ಯವಿಲ್ಲ. ತಮ್ಮ ಜೀವದ ಹಂಗನ್ನು ತೊರೆದು ವೈದ್ಯರು ದುಡಿದಿದ್ದಾರೆ” ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದರು.

“ಸಮಾಜದ ಆರೋಗ್ಯ ಕಾಪಾಡಲು ಸರ್ಕಾರವೂ ಪ್ರಯತ್ನ ಪಡುತ್ತಿದೆ. ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿ ಮಾಡುತ್ತಿವೆ” ಎಂದ ಮುಖ್ಯಮಂತ್ರಿಗಳು,”ಸರ್ಕಾರಿ ಆಸ್ಪತ್ರೆಗಳಿಗೆ ಬಡವರೇ ಹೆಚ್ಚು ಬರುತ್ತಾರೆ. ವೈದ್ಯರು ಹಸನ್ಮುಖಿಗಳಾಗಿ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಪ್ರತಿ ವೈದ್ಯರೂ ಮಾಡಬೇಕು” ಎಂದರು.

“ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದೆ. ಇದರ ನಿರ್ಮೂಲನೆ ಮಾಡಬೇಕು. ಈ ಬಗ್ಗೆ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಬಗ್ಗೆ ಸಾರ್ವಜನಿಕರೂ ಸಹ ಸರ್ಕಾರದೊಂದಿಗೆ ಕೈಜೋಡಿಸಬೇಕು. ಆಗ ಮಾತ್ರ ಇದರ ನಿವಾರಣೆ ಸಾಧ್ಯ” ಎಂದರು.

ವೈದ್ಯರ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಸನ್ಮಾನ

ಜೀವನ ಸಾಧನೆ ಹಾಗೂ ಇತರೆ ಪ್ರಶಸ್ತಿಗಳಿಗೆ ಭಾಜನರಾದ ವೈದ್ಯರನ್ನು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸನ್ಮಾನಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಶಾಸಕ ಡಾ : ಎಂ.ಟಿ.ಶ್ರೀನಿವಾಸ್, ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ವೈದ್ಯರ ಸಂಘದ ಅಧ್ಯಕ್ಷರು ಮೊದಲಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...