SIR |ಆರು ಕೋಟಿ ಮತದಾರರ ಹೆಸರು ಮಾಯ; ಮೋದಿ ಆಡಳಿತದ 12 ವರ್ಷದಲ್ಲಿ 6 ಕೋಟಿ ವಿದೇಶೀಯರು ಭಾರತಕ್ಕೆ ನುಸುಳಿದರೇ?

Date:

ಇತ್ತೀಚೆಗೆ ನಡೆದ ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಚುನಾವಣಾ ಆಯೋಗ ಪರೋಕ್ಷವಾಗಿ ಎಸ್‌ಐಆರ್‌ನ ಉದ್ದೇಶ ಏನು ಎಂಬುದನ್ನು ಬಹಿರಂಗಪಡಿಸಿದೆ. ದೇಶದಲ್ಲಿ ಪರೋಕ್ಷವಾಗಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ) ಕಾರ್ಯವನ್ನು ಚುನಾವಣಾ ಆಯೋಗವು ಎಸ್‌ಐಆರ್ ಮೂಲಕ ಜಾರಿ ಮಾಡುತ್ತಿರುವಂತಿದೆ.

ಬಿಹಾರದಲ್ಲಿ ಚುನಾವಣೆಗೂ ಮುನ್ನ ತರಾತುರಿಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಲಾಗಿದ್ದು, ಬರೋಬ್ಬರಿ 65 ಲಕ್ಷ ಮಂದಿಯ ಹೆಸರನ್ನು ಚುನಾವಣಾ ಆಯೋಗ ಮತದಾರರ ಪಟ್ಟಿಯಿಂದ ತೆಗೆದುಹಾಕಿದೆ. ಇದಾದ ಬಳಿಕ ನಡೆದ ವಿಧಾನಸಭೆ ಚುನಾವಣೆಯಲ್ಲಿ ನಡೆದಿದ್ದೇನು ಎಂಬುದು ಎಲ್ಲರಿಗೂ ತಿಳಿದಿರುವುದು. ಬಿಹಾರದ ಬಳಿಕ ಇಸಿಐ ಮತ್ತೆ ಬಿಎಲ್‌ಒಗಳಿಗೆ ಒತ್ತಡ ಹೇರಿ, ವಿರೋಧಗಳ ನಡುವೆಯೂ 12 ರಾಜ್ಯಗಳಲ್ಲಿ ಎಸ್‌ಐಆರ್‌ ಪ್ರಕ್ರಿಯೆ ನಡೆಸುತ್ತಿದೆ. ಅಷ್ಟು ಮಾತ್ರವಲ್ಲದೆ ವಿದೇಶಿಯರನ್ನು ಹೊರ ಹಾಕುವುದೇ ಎಸ್‌ಐಆರ್‌ನ ಉದ್ದೇಶ ಎಂದು ಹೇಳಿಕೊಳ್ಳುವ ಮೂಲಕವೇ ಪರೋಕ್ಷವಾಗಿ NRC, CAA ಜಾರಿ ಮಾಡಲಾಗುತ್ತಿದೆ ಎಂಬುದನ್ನು ಒಪ್ಪಿಕೊಂಡಂತಿದೆ!

ಬಿಹಾರದಲ್ಲಿ ಜೂನ್-ಜುಲೈ ಅವಧಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗಿದೆ. ಈ ಪ್ರಕ್ರಿಯೆ ಆರಂಭದಲ್ಲೇ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಆರಂಭದಲ್ಲಿ ಚುನಾವಣೆಗೂ ಮುನ್ನ ತರಾತುರಿಯಲ್ಲಿ ಈ ಪ್ರಕ್ರಿಯೆ ನಡೆಸುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಅಷ್ಟು ಮಾತ್ರವಲ್ಲದೆ ಸಾಮಾನ್ಯವಾಗಿ ಗ್ರಾಮೀಣ ಭಾಗದ ಜನರಲ್ಲಿ ಇರದ ದಾಖಲೆಗಳನ್ನೇ ಪ್ರಕ್ರಿಯೆಗೆ ಅಗತ್ಯವಾದ ದಾಖಲೆಗಳನ್ನಾಗಿಸಿದ್ದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಆದರೆ ಉಳಿದೆಲ್ಲೆಡೆ ಆಧಾರ್ ಲಿಂಕ್ ಮಾಡಲು ಹೇಳುವಾಗ ಆಧಾರ್ ಅನ್ನು ಪೌರತ್ವ ದಾಖಲೆಯನ್ನಾಗಿ ಪರಿಗಣಿಸದೆ ಇರುವುದೂ ಗೊಂದಲಕ್ಕೆ ಕಾರಣವಾಗಿದೆ.

ಇದನ್ನು ಓದಿದ್ದೀರಾ? SIR – ಬೃಹತ್ ಹಗರಣ; ನೈಜ ಮತದಾರರನ್ನು ಕೈಬಿಟ್ಟರೆ ಚು.ಆ. ಕಚೇರಿಗೆ ಘೇರಾವ್: ಸಿಎಂ ಮಮತಾ ಎಚ್ಚರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವೆಲ್ಲವುದರ ನಡುವೆ ಈ ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆಯೂ ನಡೆಯುತ್ತಿದೆ. ಇತ್ತೀಚೆಗೆ ನಡೆದ ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಚುನಾವಣಾ ಆಯೋಗ ಪರೋಕ್ಷವಾಗಿ ಎಸ್‌ಐಆರ್‌ನ ಉದ್ದೇಶ ಏನು ಎಂಬುದನ್ನು ಬಹಿರಂಗಪಡಿಸಿದೆ. ದೇಶದಲ್ಲಿ ಪರೋಕ್ಷವಾಗಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ) ಕಾರ್ಯವನ್ನು ಚುನಾವಣಾ ಆಯೋಗವು ಎಸ್‌ಐಆರ್ ಮೂಲಕ ಜಾರಿ ಮಾಡುತ್ತಿರುವಂತಿದೆ. ಇದಕ್ಕೆ ಪುಷ್ಠಿ ನೀಡುವಂತಿದೆ ಸುಪ್ರೀಂ ಕೋರ್ಟ್‌ನಲ್ಲಿ ಆಯೋಗದ ವಕೀಲರು ನೀಡಿರುವ ಹೇಳಿಕೆ!

ಇತ್ತೀಚೆಗೆ ನಡೆದ ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ಚುನಾವಣಾ ಆಯೋಗದ ಪರ ವಕೀಲರು, ಮತದಾರರ ಪಟ್ಟಿಯಲ್ಲಿ ಒಬ್ಬನೇ ಒಬ್ಬ ವಿದೇಶಿ ಪ್ರಜೆ ಇರದಂತೆ ನೋಡಿಕೊಳ್ಳುವುದು ಸಂವಿಧಾನದ ಅಡಿಯಲ್ಲಿ ಆಯೋಗದ ಹೊಣೆಗಾರಿಕೆಯಾಗಿದೆ ಎಂದು ವಾದಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಮತದಾರರ ಪಟ್ಟಿಗೆ ಸೇರಿಸುವ ಮೊದಲು ಆ ವ್ಯಕ್ತಿಯ ಪೌರತ್ವವನ್ನು ಪರಿಶೀಲಿಸುವ ಅಧಿಕಾರ ಆಯೋಗಕ್ಕಿದೆ ಎಂದು ಸ್ಪಷ್ಟಪಡಿಸಿದೆ. ವಿದೇಶಿಗರು ಮತದಾನ ಮಾಡಬಾರದು ಎಂಬುದು ಸರಿ. ಆದರೆ, ಸರಿಯಾದ ದಾಖಲೆ ಹೊಂದಿರದ ಬಡ ಅರ್ಹ ಮತದಾರರ ಹಕ್ಕನ್ನು ಕಸಿಯಲಾಗುತ್ತಿರುವ ಬಗ್ಗೆ ಚುನಾವಣಾ ಆಯೋಗ ಹೇಳುವುದೇನು? ಜತೆಗೆ ವಿಪಕ್ಷಗಳು ಸಾಕ್ಷಿ ಸಮೇತವಾಗಿ ಮಾಡುತ್ತಿರುವ ಮತಗಳ್ಳತನ ಆರೋಪವನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸುವುದು ಯಾವಾಗ?

ಈವರೆಗೆ ಎಷ್ಟು ಮಂದಿಯ ಹೆಸರು ಡಿಲೀಟ್?

ಬಿಹಾರದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ಈಗಾಗಲೇ ನಡೆಸಲಾಗಿದ್ದು 65 ಲಕ್ಷ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಬಿಹಾರದ ಬಳಿಕ ಒಟ್ಟು 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಪೂರ್ವಸಿದ್ಧತಾ ಕಾರ್ಯಗಳು ಈಗಾಗಲೇ ಆರಂಭವಾಗಿವೆ. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಪುದುಚೇರಿಯಲ್ಲಿ ಮೊದಲ ಹಂತದ ಪ್ರಕ್ರಿಯೆ ಚಾಲನೆಯಲ್ಲಿದೆ. ಉತ್ತರ ಪ್ರದೇಶ, ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಗೋವಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪದಲ್ಲಿ ಎರಡು ಹಂತದ ಪ್ರಕ್ರಿಯೆ ನಡೆಯುತ್ತಿದೆ.

ತಮಿಳುನಾಡಿನಲ್ಲಿ 97.37 ಲಕ್ಷ, ಕೇರಳದಲ್ಲಿ 24.08 ಲಕ್ಷ, 58.20 ಲಕ್ಷ, ಪುದುಚೇರಿಯಲ್ಲಿ 1.03 ಲಕ್ಷ, ಉತ್ತರ ಪ್ರದೇಶದಲ್ಲಿ 2.89 ಕೋಟಿ, ಗುಜರಾತ್‌ನಲ್ಲಿ 73.73 ಲಕ್ಷ, ರಾಜಸ್ಥಾನದಲ್ಲಿ 41.85 ಲಕ್ಷ, ಮಧ್ಯಪ್ರದೇಶದಲ್ಲಿ 42.74 ಲಕ್ಷ, ಛತ್ತೀಸ್‌ಗಢದಲ್ಲಿ 27.34 ಲಕ್ಷ, ಗೋವಾದಲ್ಲಿ 1 ಲಕ್ಷ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 64 ಸಾವಿರ, ಲಕ್ಷದ್ವೀಪದಲ್ಲಿ 1,429 ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. ಒಟ್ಟಾರೆಯಾಗಿ 6.5 ಕೋಟಿ ಮತದಾರರ ಹೆಸರನ್ನು ಕೈಬಿಡಲಾಗಿದೆ.

ಮತದಾರರ ಪಟ್ಟಿಯಿಂದ ವಿದೇಶಿಯರನ್ನು ಹೊರಹಾಕುವುದೇ ಎಸ್‌ಐಆರ್ ನಡೆಸುತ್ತಿರುವುದರ ಹಿಂದಿನ ಉದ್ದೇಶ ಎಂದು ಚುನಾವಣಾ ಆಯೋಗ ಹೇಳುವುದಾದರೆ 6.5 ಕೋಟಿ ಮಂದಿ ವಿದೇಶಿಗರು ಎಂದು ಆಯೋಗ ಹೇಳುವುದೇ? ಅಷ್ಟಕ್ಕೂ ಪೌರತ್ವ ಪರೀಕ್ಷೆ ಮಾಡುವುದು ಚುನಾವಣಾ ಆಯೋಗದ ಕರ್ತವ್ಯವೇ? ಮತದಾನ ಮಾಡಲು ಅರ್ಹರೇ ಎಂದು ನೋಡುವುದು, ನಕಲಿ ಮತದಾರರನ್ನು ತೆಗೆದುಹಾಕುವುದಷ್ಟೇ ಚುನಾವಣಾ ಆಯೋಗದ ಕರ್ತವ್ಯವಲ್ಲವೇ? ಕೋಟ್ಯಾಂತರ ಮಂದಿಯ ಮತಾಧಿಕಾರವನ್ನು ಕಿತ್ತುಕೊಂಡು ಸಂವಿಧಾನ ಚುನಾವಣಾ ಆಯೋಗಕ್ಕೆ ನೀಡುವ ಹಕ್ಕಿನ ಬಗ್ಗೆ ಮಾತನಾಡುವುದು ಎಷ್ಟು ಸರಿ?

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

84.56 ಲಕ್ಷ ಕೋಟಿ ರೂ. ನಷ್ಟದ ಅಮೆರಿಕ – ಇರಾನ್ ಸಂಘರ್ಷದಲ್ಲಿ ನಿಜಕ್ಕೂ ಗೆದ್ದವರಾರು?

ಅಮೆರಿಕದ ಬಹುಕೋಟಿ ಡಾಲರ್ ವೆಚ್ಚದ 'ಪೇಟ್ರಿಯಾಟ್' ಮತ್ತು 'ಥಾಡ್' ಕ್ಷಿಪಣಿ ನಿರೋಧಕ...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...