ಜಮೀರ್‌ ಒಕ್ಕಲಿಗರನ್ನು, ಹಿಂದೂಗಳನ್ನು ಖರೀದಿಸುತ್ತೇನೆಂದು ಹೇಳುವುದೆ: ಆರ್ ಅಶೋಕ್ ಪ್ರಶ್ನೆ

Date:

ಸಚಿವ ಜಮೀರ್‌ ಅಹ್ಮದ್‌ ಅವರು ಒಕ್ಕಲಿಗರನ್ನು ಅಥವಾ ಹಿಂದೂಗಳನ್ನು ಖರೀದಿಸುತ್ತೇನೆ ಎಂದು ಹೇಳುತ್ತಿರುವುದೇ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್ ಅವರು ಪ್ರಶ್ನಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದಲ್ಲಿ ಮಾತನಾಡಿದ ಆರ್‌ ಅಶೋಕ್ ಅವರು, “ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಚಾಮರಾಜಪೇಟೆಗೆ ಹೋಗಿ ರ‍್ಯಾಲಿ ಮಾಡಿ ಜಮೀರ್‌ ಅಹಮದ್‌ರನ್ನು ಗೆಲ್ಲಿಸಿ ಅವರಿಗೆ ಜೀವನ ನೀಡಿದ್ದರು. ಆದರೆ ಈಗ ಅದೇ ಜಮೀರ್ ಅಹಮದ್ ದೇವೇಗೌಡರ ಕುಟುಂಬವನ್ನು ಖರೀದಿಸುತ್ತೇವೆ ಎನ್ನುತ್ತಿದ್ದಾರೆ” ಎಂದು ಅಶೋಕ್ ಟೀಕಿಸಿದರು.

ಹಾಗೆಯೇ, “ಇದು ಒಕ್ಕಲಿಗರನ್ನು ಖರೀದಿಸುತ್ತೇವೆಂದು ಅರ್ಥವೇ ಅಥವಾ ಹಿಂದೂಗಳನ್ನು ಖರೀದಿಸುತ್ತೇವೆಂದು ಅರ್ಥವೇ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಕ್ಪ್‌ ವಿವಾದ | ಸತ್ಯ ಮರೆಮಾಚಲು ಮುಖ್ಯಮಂತ್ರಿ ಸುಳ್ಳು ಹೇಳಿದ್ದಾರೆ: ಆರ್‌ ಅಶೋಕ್‌ ಆರೋಪ

“ಚುನಾವಣೆ ಬರುವಾಗ ಕಾಂಗ್ರೆಸ್‌ ಸಚಿವರು ಖರೀದಿ ಬಗ್ಗೆ ಮಾತನಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಹಿಂದೆ ಇದ್ದ ರೌಡಿಗಳು ನಾಚುವಂತೆ ಅಬಕಾರಿ ಇಲಾಖೆಯ ಮೂಲಕ ಮದ್ಯ ಮಾರಾಟಗಾರರಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಲೂಟಿ ಮಾಡಿದ ಹಣದಲ್ಲಿ ಕುಟುಂಬ ಖರೀದಿಸುವವರನ್ನು ಚನ್ನಪಟ್ಟಣದ ಜನರು ಕ್ಷಮಿಸುವುದಿಲ್ಲ” ಎಂದು ಹೇಳಿದರು.

“ಸಚಿವ ಜಮೀರ್‌ ಅಹ್ಮದ್‌ ರೈತರ ಜಮೀನು ಕಬಳಿಸುತ್ತಿದ್ದಾರೆ. ಈಗ ದೇವೇಗೌಡರ ಕುಟುಂಬ ಖರೀದಿಸಲು ಇರಾಕ್‌, ಇರಾನ್‌ನಿಂದ ಹಣ ಬಂದಿದೆಯೇ” ಎಂದು ಎಚ್‌ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...