ಭಾರತ ಪಾಕಿಸ್ತಾನ ಕದನ ವಿರಾಮ | ಡೊನಾಲ್ಡ್ ಟ್ರಂಪ್ ನಿಜವಾದ ‘ವಾರ್ ರುಕ್ವಾ ದೀ ಪಾಪಾ’ ಎಂದ ನೆಟ್ಟಿಗರು

Date:

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ನಡೆದ ಸಭೆಯ ಬಳಿಕ ಭಾರತ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕದನ ವಿರಾಮವನ್ನು ಖಚಿತಪಡಿಸಿದ್ದಾರೆ. ಈ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ನಿಜವಾದ ‘ವಾರ್ ರುಕ್ವಾ ದೀ ಪಾಪಾ’ (ಅಪ್ಪ ಯುದ್ಧ ನಿಲ್ಲಿಸಿದರು) ಎಂದ ನೆಟ್ಟಿಗರು ಹೇಳಿದ್ದಾರೆ.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರು ಸೇರಿ 26 ಮಂದಿ ಸಾವನ್ನಪ್ಪಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್​-ಎ-ತೊಯ್ಬಾದ ಟಿಆರ್​ಎಫ್ ಹೊತ್ತುಕೊಂಡಿತ್ತು. ಈ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರವನ್ನು ನಡೆಸಿದೆ.

ಇದನ್ನು ಓದಿದ್ದೀರಾ? BREAKING NEWS | ‘ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ’ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಸಭೆ ನಡೆದಿದೆ. “ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ಮಾತುಕತೆ ಬಳಿಕ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಎರಡು ದೇಶಕ್ಕೂ ಧನ್ಯವಾದಗಳು” ಎಂದು ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ. ಈ ಬೆನ್ನಲ್ಲೇ ನೆಟ್ಟಿಗರು ‘ವಾರ್ ರುಕ್ವಾ ದೀ ಪಾಪಾ’ ಎಂಬ ಬಿಜೆಪಿ ಜಾಹೀರಾತನ್ನು ಮತ್ತೆ ಗೇಲಿಮಾಡಿದ್ದಾರೆ.

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ನಿಲ್ಲಿಸಿದರು ಎಂಬ ಬಿಜೆಪಿಯ ಸುಳ್ಳು ಜಾಹೀರಾತು ಭಾರೀ ವೈರಲ್ ಆಗಿತ್ತು. ‘ವಾರ್ ರುಕ್ವಾ ದೀ ಪಾಪಾ’ ಎಂಬ ಸುಳ್ಳು ಜಾಹೀರಾತು ಮೋದಿಯನ್ನು ನಗೆಪಾಟಲಿಗೀಡಾಗಿಸಿತ್ತು. ಇದೀಗ ಅದೇ ಜಾಹೀರಾತು ಮೋದಿಯನ್ನು ಮತ್ತೆ ಕೆದಕಿದೆ. ನಿಜವಾಗಿ ಯುದ್ಧ ನಿಲ್ಲಿಸಿದವರು ಟ್ರಂಪ್ ಎಂದು ನೆಟ್ಟಿಗರು ಹೇಳಿದ್ದಾರೆ.

ವಾರ್ ರುಕ್ವಾ ದೀ ಪಾಪಾ

ನೆಟ್ಟಿಗರು ಹೇಳಿದ್ದು ಏನು?

“ವಾರ್ ರುಕ್ವಾ ದೀ ಪಾಪಾ ಎಂದು ಹೇಳಲು ಇದು ಸರಿಯಾದ ಸಮಯ. ಇದು ಅಮೆರಿಕದ ಶಕ್ತಿ. ಇದಕ್ಕೆ ಶಕ್ತಿ ಎಂದು ಕರೆಯುತ್ತಾರೆ. ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾದಾಗ ಇನ್ಮುಂದೆ ಬ್ರಿಕ್ಸ್‌ (BRICS) ಬೇಡ ಎಂದು ಆದೇಶಿಸಿದರು. ಈಗ ಬ್ರಿಕ್ಸ್ ಇಲ್ಲ. ಇದು ಓರ್ವ ವ್ಯಕ್ತಿಯ ಬಲ” ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ. ಆದರೆ ಬ್ರಿಕ್ಸ್‌ ಅಂತ್ಯವಾಗಿಲ್ಲ. ಇದು ತಪ್ಪು ಮಾಹಿತಿ. 2025ರ ಜನವರಿಯಲ್ಲಿ BRICSಗೆ ಇಂಡೋನೇಷ್ಯಾ ಸೇರ್ಪಡೆಗೊಂಡಿದ್ದು, ಸದ್ಯ ಹತ್ತು ದೇಶಗಳಿವೆ.

ಸದ್ಯ ವಾಟ್ಸಾಪ್‌, ಇನ್‌ಸ್ಟಾಗ್ರಾಂ, ಟ್ವಿಟ್ಟರ್ ಎಲ್ಲೆಡೆ ಟ್ರಂಪ್ ಟ್ರೋಲ್ ಆಗುತ್ತಿದ್ದಾರೆ. ವಾರ್ ರುಕ್ವಾ ದೀ ಪಾಪಾ ಮತ್ತೆ ಮುನ್ನಲೆಗೆ ಬಂದಿದೆ. ಮೋದಿಯನ್ನು ಗೇಲಿ ಮಾಡಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...