ಕುಮಾರಸ್ವಾಮಿಗೆ ನನ್ನ ಮೇಲೆ ಪ್ರೀತಿಯೋ, ದ್ವೇಷವೋ ಗೊತ್ತಿಲ್ಲ: ಸಚಿವ ಚಲುವರಾಯಸ್ವಾಮಿ

Date:

ಕಾಂಗ್ರೆಸ್‌ ನೇತೃತ್ವದ ಸರ್ಕಾರ ವರ್ಗಾವಣೆ ದಂಧೆ ನಡೆಸುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ಅಧಿವೇಶನದಲ್ಲಿ ಕಮಿಷನ್‌ ದರಪಟ್ಟಿ ಬಿಡುಗಡೆ ಮಾಡಿದ್ದರು. ಈ ವಿಚಾರವಾಗಿ ಕೃಷಿ ಇಲಾಖೆ ಸಚಿವ ಎನ್‌ ಚಲುವರಾಯಸ್ವಾಮಿ ಮತ್ತು ಎಚ್‌ ಡಿ ಕುಮಾರಸ್ವಾಮಿ ನಡುವೆ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವ ಚಲುವರಾಯಸ್ವಾಮಿ, “ಎಚ್‌ ಡಿ ಕುಮಾರಸ್ವಾಮಿ ಅವರಿಗೆ ನನ್ನ ಮೇಲೆ ಪ್ರೀತಿಯೋ, ದ್ವೇಷವೋ ಗೊತ್ತಿಲ್ಲ. ಪ್ರೀತಿ ಇದ್ದರೂ ಸಂತೋಷ, ದ್ವೇಷವಿದ್ದರೂ ಸಂತೋಷ” ಎಂದು ಹೇಳಿದರು.

ಕೃಷಿ ಇಲಾಖೆಯನ್ನೇ ಗುರಿಯಾಗಿಸಿಕೊಂಡು ಎಚ್‌ ಡಿ ಕುಮಾರಸ್ವಾಮಿ ಅವರು ವರ್ಗಾವಣೆ ದಂಧೆಯ ದರ ಪಟ್ಟಿ ಬಿಡುಗಡೆ ಮಾಡಿದ್ದಾರೆ, ಇದಕ್ಕೆ ಕಾರಣವೇನು? ಎಂಬ ಪತ್ರಕರ್ತರ ಪ್ರಶ್ನೆಗೆ ಅವರು ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2018-19ರಲ್ಲಿ ಎಚ್‌ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ವರ್ಗಾವಣೆ ದಂಧೆಗೆ ಸಂಬಂಧಿಸಿದಂತೆ ಪ್ರಜಾವಾಣಿ ಪತ್ರಿಕೆಯಲ್ಲಿ ಇದೇ ರೀತಿಯ ರೇಟ್‌ ಕಾರ್ಡ್‌ ಪ್ರಕಟವಾಗಿತ್ತು. ಮೊನ್ನೆ ಅಧಿವೇಶನದಲ್ಲಿಯೂ ಪತ್ರಿಕೆಯನ್ನು ಪ್ರದರ್ಶಿಸಿದ್ದೇನೆ. ನೀವು ಮುಖ್ಯಮಂತ್ರಿ ಆಗಿದ್ದಾಗಲೂ ಇದೇ ರೀತಿ ರೇಟ್‌ ಕಾರ್ಡ್‌ ಪ್ರಕಟವಾಗಿತ್ತು. ಅದನ್ನೇ ಇಟ್ಟುಕೊಂಡು ಈಗ ನಮ್ಮ ಇಲಾಖೆ ವಿರುದ್ಧ ಆರೋಪ ಮಾಡುತ್ತಿದ್ದೀರ ಎಂದು ಕೇಳಿದ್ದೇನೆ” ಎಂದರು.

“ಕುಮಾರಸ್ವಾಮಿ ಅವರ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಧಿವೇಶನದ ಒಳಗೆ ಚರ್ಚೆ ಆಗಿರುವುದರಿಂದ ಮತ್ತೆ ಅದನ್ನು ಹೊರಗಡೆ ಚರ್ಚೆ ಮಾಡಲು ಹೋಗುವುದಿಲ್ಲ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಜಕೀಯ ಭಿನ್ನಮತ ಮರೆತು ಮೋದಿಗೆ ಜೆಡಿಎಸ್ ಬೆಂಬಲಿಸಲಿದೆ: ಶೋಭ ಕರಂದ್ಲಾಜೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...