“ಅರ್ಥಹೀನ ಪ್ರಶ್ನೆಗಳನ್ನು ನನಗೆ ಕೇಳಿ ನಿಮ್ಮ ಸ್ಥಾನದ ಗೌರವವನ್ನು ನೀವೇ ಕಳೆದುಕೊಳ್ಳಬೇಡಿ” ಆರ್‌ ಅಶೋಕ್‌ಗೆ ಸಿಎಂ ತಿರುಗೇಟು

Date:

“ಸನ್ಮಾನ್ಯ ಆರ್. ಅಶೋಕ್ ಅವರೇ, ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ಸಂಬಂಧಿಸಿದ ಹಗರಣದ ಬಗ್ಗೆ ನೀವು ಕೆಲವು ಪ್ರಶ್ನೆಗಳನ್ನು ಕೇಳಿದ್ದೀರಿ, ನಿಮಗೆ ಗೊತ್ತಿರುವಂತೆ ಈ ಪ್ರಕರಣದ ತನಿಖೆಗೆ ನಮ್ಮ ಸರ್ಕಾರ ಎಸ್.ಐ.ಟಿ ಯನ್ನು ರಚಿಸಿದೆ. ಇದಕ್ಕೆ ಸಂಬಂಧಿಸಿದಂತೆ ನಿಮಗೆ ಇಲ್ಲವೇ ನಿಮ್ಮ ಪಕ್ಷಕ್ಕೆ ಏನಾದರೂ ಹೇಳುವುದಿದ್ದರೆ ಇಲ್ಲವೇ ಕೇಳುವುದಿದ್ದರೆ ಎಸ್.ಐ.ಟಿ ಮುಂದೆ ಹೋಗಿ ಕೇಳಿ, ಇಲ್ಲವೇ ಹೇಳಿ. ಇದನ್ನು ಬಿಟ್ಟು ಹಾದಿಬೀದಿಯಲ್ಲಿ ಮಾತನಾಡುವವರಂತೆ, ತಾವೇ ಕತೆ ಕಟ್ಟಿಕೊಂಡು ತಲೆಬುಡ ಇಲ್ಲದ ಅರ್ಥಹೀನ ಪ್ರಶ್ನೆಗಳನ್ನು ನನಗೆ ಕೇಳಿ ನಿಮ್ಮ ಸ್ಥಾನದ ಗೌರವವನ್ನು ನೀವೇ ಕಳೆದುಕೊಳ್ಳಬೇಡಿ” ಎಂದು ಸಿ ಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ‘ಎಕ್ಸ್‌’ ಖಾತೆಯಲ್ಲಿ, ಪ್ರಶ್ನೆ ಮಾಡಿರುವ ಸಿ ಎಂ, “ನಮಗೆ ಪ್ರಶ್ನೆ ಕೇಳುವ ಮೊದಲು ನಿಮ್ಮದೇ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾ‍ಳ್ ಅವರು ನಿರಂತರವಾಗಿ ಪಕ್ಷದ ಅಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ಧೈರ್ಯ ತೋರಿಸಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭ್ರಷ್ಟಾಚಾರ, ವಿದ್ರೋಹ ಮತ್ತು ಸ್ವಜನಪಕ್ಷಪಾತವೂ ಸೇರಿದಂತೆ ಯತ್ನಾಳ್ ಅವರು ಮಾಡುತ್ತಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ. ಇಂತಹ ಆರೋಪಗಳನ್ನು ಮಾಡಿದ ನಂತರವೂ ಅವರ ವಿರುದ್ಧ ಬಿಜೆಪಿ ಹೈಕಮಾಂಡ್ ಯಾವುದೇ ಕ್ರಮಕೈಗೊಳ್ಳದಿರುವುದನ್ನು ನೋಡಿದರೆ ಅವರ ಆರೋಪಗಳಲ್ಲಿ ಸತ್ಯಾಂಶ ಇರುವುದನ್ನು ಪಕ್ಷದ ಹೈಕಮಾಂಡ್ ಕೂಡಾ ಒಪ್ಪಿಕೊಂಡಂತೆ ಕಾಣುತ್ತಿದೆ” ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...