ರಾಯಣ್ಣ ಕುರುಬನೆಂದು ಗೌರವಿಸದೆ, ದೇಶಪ್ರೇಮಿಯೆಂದು ಸ್ಮರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

“ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟೀಷರು ಭಾರತವನ್ನು 400 ವರ್ಷ ಆಳಿದರು. ಅಲ್ಲದೇ, ಸ್ವಾತಂತ್ರ್ಯ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿ ರಾಯಣ್ಣನನ್ನು ಕುತಂತ್ರದಿಂದ ನಮ್ಮವರೇ ಬ್ರಿಟೀಷರಿಗೆ ಹಿಡಿದು ಕೊಟ್ಟರು. ಕುರುಬ ಸಮುದಾಯದವ ಎನ್ನುವ ಕಾರಣಕ್ಕೆ ರಾಯಣ್ಣನನ್ನು ಗೌರವಿಸದೆ, ರಾಯಣ್ಣನ ದೇಶಪ್ರೇಮಕ್ಕಾಗಿ ಸ್ಮರಿಸಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಿ” ಎಂದು ಕರೆ ನೀಡಿದರು.

“ಸ್ವಾತಂತ್ರ್ಯ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿ ರಾಯಣ್ಣ ಅವರನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟೀಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತಿ ಮನೆಗಳಲ್ಲೂ ರಾಯಣ್ಣ ಜನಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ ನಾವೆಯೇ. ಕೆಂಪೇಗೌಡ, ರಾಯಣ್ಣ, ಬಸವಣ್ಣ, ಕುವೆಂಪು, ಕನಕದಾಸ, ಮಹಾತ್ಮಗಾಂಧಿ, ವಿವೇಕಾನಂದ ಎಲ್ಲ ಮಹಾತ್ಮರ ಆಶಯಗಳು ಸ್ಪೂರ್ತಿಯಾಗಲಿ ಎನ್ನುವ ಕಾರಣಕ್ಕೆ ಅವರ ಹೆಸರು ಇಡಲಾಗುತ್ತದೆ” ಎಂದರು.

“ಆದರೆ, ಇವರ ಆಶಯಗಳು ನಾಶ ಆಗಬೇಕು, ಸಂವಿಧಾನ ಇರಬಾರದು, ಅಸಮಾನತೆ ಮುಂದುವರೆಯಬೇಕು. ಯಾರೋ ದುಡಿದಿದ್ದನ್ನು ತಾವು ಕುಳಿತು ತಿನ್ನಬೇಕು ಎಂದು ಬಯಸುವವರು ಈಗಲೂ ನಮ್ಮ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಅವರ ಬಗ್ಗೆ ತೀವ್ರ ಎಚ್ಚರದಿಂದ ಇರಬೇಕು” ಎಂದರು.

“ನಮ್ಮಲ್ಲಿ ಒಬ್ಬ ರಾಜನನ್ನು ಕಂಡರೆ ಇನ್ನೊಬ್ಬರಿಗೆ ಆಗುತ್ತಿರಲಿಲ್ಲ. ಈ ಒಡಕನ್ನು ಬಳಸಿಕೊಂಡು ಘಜ್ನಿ ಮಹಮದ್ ಮತ್ತು ಬ್ರಿಟೀಷರು, ಫ್ರೆಂಚರು ಮುಂತಾದವರು ದಾಳಿ ಮಾಡಿದರು. ದೇಶದ ಅವಕಾಶಗಳು ಸಮಾಜದ ಎಲ್ಲ ವರ್ಗದವರಿಗೆ ಹಂಚಿಕೆ ಆಗಬೇಕು. ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿ ಶೇ.25 ರಷ್ಟು ಸೈಬರ್ ಅಪರಾಧ ಪ್ರಕರಣ ದಾಖಲು: ಡಿಜಿ ಐಜಿಪಿ ಅಲೋಕ್ ಮೋಹನ್

ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಮಹಾ ಸಂಸ್ಥಾನದ ಧರ್ಮಗುರು ನಿರ್ಮಲಾನಂದ ಸ್ವಾಮೀಜಿಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...