ಇಂದಿನ ರಾಜಕಾರಣಿಗಳ ಪಾದ ಮುಟ್ಟಿ ನಮಸ್ಕರಿಸಬೇಡಿ, ಅವರು ಅದಕ್ಕೆ ಅರ್ಹರಲ್ಲ: ಅಜಿತ್ ಪವಾರ್

Date:

ತಮ್ಮ ಪೋಷಕರು ಮತ್ತು ಚಿಕ್ಕಪ್ಪನ ಆಶೀರ್ವಾದದಿಂದ ಚೆನ್ನಾಗಿದ್ದೇನೆ ಎಂದು ಹೇಳಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು, “ಇಂದಿನ ರಾಜಕಾರಣಿಗಳ ಪಾದ ಮುಟ್ಟಿ ನಮಸ್ಕರಿಸಬೇಡಿ, ಅವರು ಅದಕ್ಕೆ ಅರ್ಹರಲ್ಲ” ಎಂದು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಕಾರ್ಯಕರ್ತರಿಗೆ ತಿಳಿಸಿದ್ದಾರೆ.

ಮಹಾರಾಷ್ಟ್ರದ ಬೀಡ್‌ನಲ್ಲಿ ನಡೆದ ಎನ್‌ಸಿಪಿ ಯುವ ಘಟಕದ ರ್‍ಯಾಲಿಯಲ್ಲಿ ಅಜಿತ್ ಪವಾರ್ ಕಾರ್ಯಕರ್ತರಿಗೆ ಈ ಸಲಹೆ ನೀಡಿದ್ದಾರೆ. ಹಾಗೆಯೇ ತಮ್ಮ ಭೇಟಿ ವೇಳೆ ಹೂಮಾಲೆ, ಸ್ಮರಣಿಕೆ ಮತ್ತು ಶಾಲುಗಳನ್ನು ನೀಡಿದ ಕಾರಣಕ್ಕೆ ಕಾರ್ಯಕರ್ತರನ್ನು ಗದರಿಸಿದರು.

ಇದನ್ನು ಓದಿದ್ದೀರಾ? ತಮ್ಮ ಬಣದ ನಾಯಕರ ಜೊತೆ ಶರದ್ ಪವಾರ್ ಭೇಟಿಯಾದ ಅಜಿತ್ ಪವಾರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನಗೆ ಏನನ್ನೂ ಕೊಡಬೇಡಿ. ನಾನು ಪ್ರೀತಿ ಮತ್ತು ಗೌರವವನ್ನು ಮಾತ್ರ ಬಯಸುತ್ತೇನೆ. ನನ್ನ ಪಾದಗಳಿಗೆ ಬೀಳಬೇಡಿ. ಇಂದಿನ ರಾಜಕಾರಣಿಗಳು ಅವರ ಪಾದ ಮುಟ್ಟಲು ಯೋಗ್ಯರಲ್ಲ” ಎಂದು ತಿಳಿಸಿದರು.

“ನನ್ನ ಪೋಷಕರು ಮತ್ತು ಚಿಕ್ಕಪ್ಪನ ಆಶೀರ್ವಾದದಿಂದ, ನಾನು ಚೆನ್ನಾಗಿದ್ದೇನೆ. ನನಗೆ ಬೇಕಾಗಿರುವುದು ನಿಮ್ಮ ಪ್ರೀತಿ ಮತ್ತು ಪರಸ್ಪರ ಗೌರವ ಮಾತ್ರ” ಎಂದೂ ಹೇಳಿದರು.

1999ರಲ್ಲಿ ಅಜಿತ್ ಪವಾರ್ ಚಿಕ್ಕಪ್ಪ ಶರದ್ ಪವಾರ್ ಅವರು ಸ್ಥಾಪಿಸಿದ ಎನ್‌ಸಿಪಿ ಪಕ್ಷವು ಒಂದು ವರ್ಷದ ಹಿಂದೆ ಇಬ್ಭಾಗವಾಗಿದೆ. ಅಜಿತ್ ಪವಾರ್ ಎನ್‌ಸಿಪಿಯಿಂದ ಹೊರ ನಡೆದು ಪ್ರತ್ಯೇಕ ಪಕ್ಷ ಸ್ಥಾಪಿಸಿದರು. 2023ರ ಜುಲೈನಲ್ಲಿ ಬಿಜೆಪಿ-ಶಿವಸೇನೆ (ಶಿಂದೆ ಬಣ) ಮೈತ್ರಿಕೂಟ ಸೇರಿ ಉಪಮುಖ್ಯಮಂತ್ರಿಯಾದರು.

ಇದನ್ನು ಓದಿದ್ದೀರಾ? ದಣಿವೂ ಇಲ್ಲ, ನಿವೃತ್ತಿಯೂ ಆಗಿಲ್ಲ: ಅಜಿತ್‌ ಪವಾರ್‌ಗೆ ಶರದ್‌ ಪವಾರ್‌ ತಿರುಗೇಟು

ಶಾಸಕಾಂಗ ಬಲದ ಆಧಾರದ ಮೇಲೆ ಅಜಿತ್ ಪವಾರ್ ನೇತೃತ್ವದ ಪಕ್ಷ ಎನ್‌ಸಿಪಿ ಹೆಸರು ಮತ್ತು ಗಡಿಯಾರದ ಚಿಹ್ನೆಯನ್ನು ಪಡೆದುಕೊಂಡಿತು. 2024ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಸಿಪಿ, ಶಿವಸೇನೆ, ಬಿಜೆಪಿ ಜೊತೆಯಾಗಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿ 57 ಸ್ಥಾನಗಳಲ್ಲಿ 41 ಸ್ಥಾನಗಳನ್ನು ಗೆದ್ದಿದೆ. ಶರದ್ ಪವಾರ್ ಅವರ ಎನ್‌ಸಿಪಿ ಕೇವಲ 10 ಸ್ಥಾನಗಳನ್ನು ಮಾತ್ರ ಪಡೆಯಲು ಸಾಧ್ಯವಾಯಿತು. ಅದಕ್ಕೂ ಮುನ್ನ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಸ್ಥಾನವನ್ನೂ ಅಜಿತ್ ಪವಾರ್ ಪಕ್ಷ ಪಡೆದಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...