ಡಬಲ್ ಇಂಜಿನ್ ಸರ್ಕಾರದಿಂದ ‘ಡಬಲ್ ಅನ್ಯಾಯ’ – ರಾಹುಲ್ ಗಾಂಧಿ

Date:

ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ನಡೆದಿರುವ ಆತ್ಮಹತ್ಯೆ ಪ್ರಕರಣಗಳನ್ನು ಉಲ್ಲೇಖಿಸಿ ಬಿಜೆಪಿಯ ಡಬಲ್ ಇಂಜಿನ್ ಆಡಳಿತದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಎಲ್ಲಿ ಡಬಲ್ ಇಂಜಿನ್ ಸರ್ಕಾರ ಇದೆಯೋ, ಅಲ್ಲಿ ಜನರಿಗೆ ‘ಡಬಲ್ ಅನ್ಯಾಯ’ ಆಗಿದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ (ಟ್ವಿಟ್ಟರ್‌) ರಾಹುಲ್ ಗಾಂಧಿ ಬರೆದುಕೊಂಡಿದ್ದು, “ನ್ಯಾಯಕ್ಕಾಗಿ ಕಾದು ನ್ಯಾಯ ದೊರೆಯದೆ ಆತ್ಮಹತ್ಯೆ ಮಾಡಿಕೊಂಡ ಎರಡು ನಿದರ್ಶನಗಳನ್ನು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇರುವಲ್ಲಿ ನ್ಯಾಯ ಕೇಳುವುದು ಅಪರಾಧ” ಎಂದಿದ್ದಾರೆ.


“ನರೇಂದ್ರ ಮೋದಿಯ ಡಬಲ್ ಇಂಜಿನ್ ಸರ್ಕಾರದಲ್ಲಿ ಆಗುತ್ತಿರುವ ಡಬಲ್ ಅನ್ಯಾಯದ ಬಗ್ಗೆ ಈ ಕೆಳಗಿರುವ ಎರಡು ನಿದರ್ಶನಗಳಿಂದ ಅರ್ಥಮಾಡಿಕೊಳ್ಳಬಹುದು,” ಎಂದು ಹೇಳಿದರು ರಾಹುಲ್ ಗಾಂಧಿ ಎರಡು ಘಟನೆಗಳನ್ನು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯುಪಿಯಲ್ಲಿ, ಅತ್ಯಾಚಾರಕ್ಕೊಳಗಾದ ಇಬ್ಬರು ಸಹೋದರಿಯರು ನೇಣು ಬಿಗಿದುಕೊಂಡಿದ್ದಾರೆ. ಈಗ ನ್ಯಾಯ ಸಿಗದ ಕಾರಣ ಮತ್ತು ಪ್ರಕರಣವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಿದ ಕಾರಣ ಈ ಇಬ್ಬರು ಹೆಣ್ಣು ಮಕ್ಕಳ ತಂದೆಯೂ ನೇಣು ಹಾಕಿಕೊಂಡಿದ್ದಾರೆ,” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಮಧ್ಯಪ್ರದೇಶದಲ್ಲಿ ಮಹಿಳೆಯ ಮಾನಭಂಗವಾಗಿದೆ. ಆ ಮಹಿಳೆಯ ಬಡ ಪತಿಯು ನ್ಯಾಯಕ್ಕಾಗಿ ಮನವಿ ಮಾಡಿದಾಗ, ವಿಚಾರಣೆಯೇ ಮಾಡಲಾಗಿಲ್ಲ. ಇದರಿಂದಾಗಿ ನಿರಾಶೆಗೊಂಡು ಈ ವ್ಯಕ್ತಿ ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡಿದ್ದಾರೆ,” ಎಂದು ಟ್ವೀಟ್ ಮಾಡಿದ್ದಾರೆ.

“ಡಬಲ್ ಇಂಜಿನ್ ಸರ್ಕಾರದಲ್ಲಿ ನ್ಯಾಯ ಕೇಳುವುದು ಅಪರಾಧವಾಗಿದೆ. ಮಿತ್ರ ಮಾಧ್ಯಮಗಳು ಭಾರೀ ಕಷ್ಟಪಟ್ಟು ಸೃಷ್ಟಿಸಿದ ಸುಳ್ಳು ಚಿತ್ರಣವನ್ನು ರಕ್ಷಿಸಲು, ಸಂತ್ರಸ್ತರನ್ನು ಮಾತ್ರವಲ್ಲದೆ ಅವರ ಸಂಪೂರ್ಣ ಕುಟುಂಬವನ್ನೇ ಶತ್ರುಗಳಂತೆ ನೋಡುವುದು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಒಂದು ಸಂಪ್ರದಾಯವಾಗಿದೆ,” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಹತ್ರಾಸ್‌ನಿಂದ ಉನ್ನಾವ್‌ವರೆಗೆ ಮತ್ತು ಮಂದಸೌರ್‌ನಿಂದ ಪೌರಿವರೆಗಿನ ಮಹಿಳೆಯರ ಮೇಲಿನ ದೌರ್ಜನ್ಯ ನಡೆದಿದೆ. ಈ ದೌರ್ಜನ್ಯದ ನಂತರ, ಅವರ ಕುಟುಂಬಗಳು ನ್ಯಾಯಕ್ಕಾಗಿ ಹಂಬಲಿಸುತ್ತಿದ್ದವು. ಈ ಘೋರ ಅನ್ಯಾಯದ ವಿರುದ್ಧ ದನಿ ಎತ್ತಿ, ಇಲ್ಲವಾದರೆ ಇದ್ದಲ್ಲ ನಾಳೆ ಈ ದೌರ್ಜನ್ಯದ ಬೆಂಕಿ ನಿಮ್ಮನ್ನೂ ತಲುಪುತ್ತದೆ,” ಎಂದು ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...