ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಲಾಗಿದೆ: ಡಿಸಿಎಂ ಡಿಕೆಶಿ

Date:

“ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ವೈಯಾಲಿಕಾವಲ್‌ನ ಐಪಿಪಿ ಕಚೇರಿಯಲ್ಲಿ ಅಧಿಕಾರಿಗಳ ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಮುಖ್ಯಮಂತ್ರಿಗಳು ನಿನ್ನೆ ನಗರ ಪ್ರದಕ್ಷಿಣೆ ಮಾಡಿ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಯಪಡೆ ರಚನೆಗೆ ಸೂಚನೆ ನೀಡಿದ್ದು, ಎಲ್ಲೆಲ್ಲಿ ಯಾವ ಕಾರ್ಯಗಳು ಸಾಗಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲವು ಕಡೆ ಕುಡಿಯುವ ನೀರು ಕಲುಷಿತವಾಗಿ ಕಾಲರಾ ಸಂಭವಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಹೀಗಾಗಿ ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರಿನ ಪರಿಶೀಲನೆ ನಡೆಸಲು ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗಿದೆ” ಎಂದು ತಿಳಿಸಿದರು.

“ಬೆಂಗಳೂರು ಹಾಗೂ ಬೇರೆ ಭಾಗಗಳಲ್ಲಿ ಜನರಿಗೆ ಕುಡಿಯಲು ಗುಣಮಟ್ಟದ ನೀರು ನೀಡಬೇಕು ಎಂದು ಅಧಿಕಾರಿಗಳಿಗೆ ಮುಂಜಾಗ್ರತೆಯಿಂದ ಎಚ್ಚರಿಕೆ ನೀಡಿದ್ದೇವೆ. ಇನ್ನು ಬೆಂಗಳೂರಿನಲ್ಲಿರುವ ಎಲ್ಲ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಲು ಮಾರ್ಗದರ್ಶನ ನೀಡಲಾಗಿದೆ. ಇನ್ನು ಮಳೆ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಮಾಡುತ್ತೇವೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒತ್ತುವರಿ ತೆರವು ವಿಚಾರವಾಗಿ ಬಿಎಂಟಿಎಫ್‌ ಅವರ ಸಹಾಯ ಪಡೆಯುತ್ತೀರಾ ಎಂದು ಕೇಳಿದಾಗ, “ಬಿಎಂಟಿಎಫ್‌ ಜೊತೆ ಚರ್ಚೆ ನಡೆಸಲಾಗಿದ್ದು. ಎಲ್ಲೆಲ್ಲಿ ಬಾಕಿ ಇದೆ ಅವುಗಳನ್ನು ತೆರವುಗೊಳಿಸಲು ಸಿಎಂ ಸೂಚಿಸಿದ್ದಾರೆ” ಎಂದರು.

ಇದನ್ನು ಓದಿದ್ದೀರಾ? ಲೈಂಗಿಕ ದೌರ್ಜನ್ಯ ಹಗರಣ | ಪ್ರಜ್ವಲ್ ರೇವಣ್ಣನಿಗೆ ‘ಎಚ್ಚರಿಕೆ ಪತ್ರ’ ಬರೆದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

“ಕೆರೆ, ಸರ್ಕಾರಿ ಉದ್ಯಾನವನ ಜಾಗ ಸೇರಿದಂತೆ ಅನೇಕ ಕಡೆಗಳಲ್ಲಿ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿಕೊಂಡಿದ್ದಾರೆ. ಇದು ನಮ್ಮ ಗಮನದಲ್ಲಿದ್ದು, ಈ ವಿಚಾರದಲ್ಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಅದಕ್ಕೆ ಕಾನೂನು ಅವಕಾಶಗಳನ್ನು ಕಂಡುಕೊಳ್ಳುತ್ತೇವೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...