ಕೆ ಹೆಚ್‌ ಮುನಿಯಪ್ಪರನ್ನು ಸಚಿವ ಸಂಪುಟದಿಂದ ಕೈಬಿಡಿ: ರಾಜ್ಯ ಮೀಸಲಾತಿ ಸಂರಕ್ಷಣಾ ಒಕ್ಕೂಟ ಆಗ್ರಹ

Date:

  • ಎ ಜೆ ಸದಾಶಿವ ಆಯೋಗದ ವರದಿ ಜಾರಿಗೆ ಮುನಿಯಪ್ಪ ಪ್ರಯತ್ನ
  • ಪರಿಶಿಷ್ಟ ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುತ್ತಿರುವ ವರದಿ

ಎ ಜೆ ಸದಾಶಿವ ಆಯೋಗದ ವರದಿಯನ್ನು ಅಧಿವೇಶನದಲ್ಲಿ ಮಂಡಿಸುವಂತೆ ಶಾಸಕರಿಗೆ ಒತ್ತಡ ಹೇರಲು ಕರೆ ನೀಡಿರುವ ಆಹಾರ ಸಚಿವ ಕೆ ಹೆಚ್‌ ಮುನಿಯಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಆಗ್ರಹಿಸಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ರಾಜ್ಯ ಸಮಿತಿಯ ಅಧ್ಯಕ್ಷ ರವಿ ಮಾಕಳಿ ಪತ್ರಿಕಾಗೋಷ್ಠಿ ಕರೆದು ಮಾತನಾಡಿ, “ಕೆ ಎಚ್ ಮುನಿಯಪ್ಪ ಅವರ ಸಂವಿಧಾನ ವಿರೋಧಿ ಧೋರಣೆಯನ್ನು ಖಂಡಿಸಿ ಅವರನ್ನು ಸಚಿವ ಸಂಪುಟದಿಂದ ಮುಖ್ಯಮಂತ್ರಿಗಳು ವಜಾಗೊಳಿಸಬೇಕು” ಎಂದು ಒತ್ತಾಯಿಸಿದರು.

“ಹಲವು ದಿನಗಳಿಂದ ಪರಿಶಿಷ್ಟ ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುತ್ತಿರುವ ಅವೈಜ್ಞಾನಿಕ, ಅಸಂವಿಧಾನಿಕ ಎ ಜೆ ಸದಾಶಿವ ಆಯೋಗದ ವರದಿಯನ್ನು ಅಧಿವೇಶನದಲ್ಲಿ ಮಂಡಿಸುವಂತೆ ಶಾಸಕರಿಗೆ ಒತ್ತಡ ಹೇರಲು ಕರೆ ನೀಡಿದ್ದಾರೆ. ಈ ಮೂಲಕ ರಾಜಧರ್ಮವನ್ನು ಧಿಕ್ಕರಿಸಿ ಸ್ವಜನಪಕ್ಷಪಾತವನ್ನು ಸಚಿವರು ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜಾತಿ ಗಣತಿ | ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಾಮನೂರು

ಸುದ್ದಿಗೋಷ್ಠಿಯಲ್ಲಿ ಒಕ್ಕೂಟ ಕಾರ್ಯಾಧ್ಯಕ್ಷ ರಾಘವೇಂದ್ರನಾಯ್ಕ ಪ್ರಧಾನ ಕಾರ್ಯದರ್ಶಿ ಗಂಗಾನಾಯ್ಕ ಗೊಂದಿ, ರಾಜ್ಯ ಜಂಟಿ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ, ರಾಜ್ಯ ಸಹ ಕಾರ್ಯದರ್ಶಿ ರವಿಪೂಜಾರ್, ರಾಜ್ಯ ಕಾರ್ಯದರ್ಶಿ, ರಾಜ್ಯ ಖಜಾಂಚಿ ಅರುಣ್ ಕುಮಾರ್, ಶ್ರೀಧರ್,ರಾಜ್ಯ ಮುಖಂಡರಾದ ರುದ್ರುಪುನೀತ್, ಗೀರಿಶ್ ಮೂಡ್ ನಾನ್ಯಾನಾಯಕ್ ಚಿಕ್ಕಂದವಾಡಿ ತಿಪ್ಪೇಸ್ವಾಮಿ ಮತ್ತಿತ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...