ರಾಜ್ಯದಲ್ಲಿ ಬರ ಹಿನ್ನೆಲೆ: ವಿಶ್ವವಿಖ್ಯಾತ ‘ಹಂಪಿ ಉತ್ಸವ’ ಫೆಬ್ರವರಿಯಲ್ಲಿ ನಡೆಸಲು ನಿರ್ಧಾರ

Date:

  • ಪರಿಸ್ಥಿತಿ ನೋಡಿಕೊಂಡು ಉತ್ಸವ ಮಾಡುವುದು ಸೂಕ್ತ ಎಂದು ಸರ್ಕಾರದ ನಿರ್ಧಾರ
  • ನವೆಂಬರ್‌ನಲ್ಲಿ ಹಂಪಿ ಉತ್ಸವ ನಡೆಸಲು ನಿರ್ಧಾರ ಮಾಡಲಾಗಿತ್ತು

ರಾಜ್ಯದಲ್ಲಿ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಹಂಪಿ ಉತ್ಸವ ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹಮದ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ರಾಜ್ಯದಲ್ಲಿ ವಿಜಯನಗರ- ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆಗಳ ಹೆಚ್ಚಿನ ಸಂಖ್ಯೆಯ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಸ್ಥಿತಿಯಲ್ಲಿ ಉತ್ಸವ ನಡೆಸುವುದು ಕಷ್ಟ. ಫೆಬ್ರವರಿ ವೇಳೆಗೆ ಪರಿಸ್ಥಿತಿ ನೋಡಿಕೊಂಡು ಉತ್ಸವ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
hampi 1

ಈ ಮುಂಚೆ ನವೆಂಬರ್‌ನಲ್ಲಿ ಉತ್ಸವ ನಡೆಸಲು ನಿರ್ಧಾರ ಮಾಡಲಾಗಿತ್ತು. ಆದರೆ ಬರ ಪರಿಸ್ಥಿತಿಯಿಂದಾಗಿ ಮುಖ್ಯಮಂತ್ರಿ ಅವರು ಫೆಬ್ರವರಿಯಲ್ಲಿ ನಡೆಸಿ ಎಂದು ಸಲಹೆ ನೀಡಿದ್ದು, ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ಗೋವಿಂದರಾಜು, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಳಾ, ಮುಖ್ಯಮಂತ್ರಿ ಅವರ ಜಂಟಿ ಕಾರ್ಯದರ್ಶಿ ಜಯರಾಮ್, ಜಿಲ್ಲಾಧಿಕಾರಿ ದಿವಾಕರ್ ಸಭೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...