ಬರ ಪರಿಹಾರ ವಿತರಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

Date:

ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಸೂಕ್ತ ಪರಿಹಾರ ಕೊಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋತ್ ಅವರಿಗೆ ಮನವಿ ಸಲ್ಲಿಸಿತು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಬೊಮ್ಮಾಯಿ, “ರಾಜ್ಯದಲ್ಲಿ ತೀವ್ರ ಬರಗಾಲವಿದ್ದು ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರ ರೈತರಿಗೆ ಪರಿಹಾರ ನೀಡದೇ ರಾಜಕೀಯ ಮಾಡುತ್ತ ಕಾಲಹರಣ ಮಾಡುತ್ತಿದೆ. ರೈತರಿಗೆ ನ್ಯಾಯ ಕೊಡದಿರುವ ಸರ್ಕಾರ ಬಹಳ ದಿನ ಉಳಿಯುವುದಿಲ್ಲ” ಎಂದು ಕಿಡಿಕಾರಿದರು.

“ಬರ, ಪ್ರವಾಹ ಬಂದರೆ ಜನ ಸಂಕಷ್ಟದಲ್ಲಿ ಇದ್ದಾಗ ಸರ್ಕಾರ ಧಾವಿಸಿ ಸಹಾಯ ಮಾಡಿದರೆ ಅದು ಜೀವಂತ ಇದ್ದಂತೆ. ಸರ್ಕಾರ ರೈತರ ಕಡೆ ನೋಡದಿದ್ದರೆ ಅದು ಸತ್ತಂತೆ. ರಾಜ್ಯ ಸರ್ಕಾರ ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ 18,000 ಕೋಟಿ ರೂ. ನೀಡುವಂತೆ ಮನವಿ ಮಾಡಿದೆ. ಆದರೆ, ನೀವು ಕೇವಲ 105 ಕೋಟಿ ಬಿಡುಗಡೆ ಮಾಡಿದ್ದೀರಿ, ಅದು ಕೇವಲ ಶೇಕಡಾ 1% ಕೂಡ ಆಗುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಳಗಾವಿ ಅಧಿವೇಶನಕ್ಕೂ ಮುಂಚೆಯೇ ಪ್ರತಿ ಹೆಕ್ಟೇರ್ ಗೆ 2,000 ರೂ ಬೆಳೆ ಪರಿಹಾರ ನೀಡುವುದಾಗಿ ಹೇಳಿದ್ದರು. ಆದರೆ, ಅಧಿವೇಶನ ಮುಗಿದು ಒಂದು ತಿಂಗಳು ಕಳೆಯುತ್ತಿದ್ದರೂ, ಹಣ ಬಿಡುಗಡೆ ಮಾಡದೆ ಆಧಾರ್ ಲಿಂಕ್ ಮಾಡುವ ಕಥೆ ಹೇಳುತ್ತಾರೆ. ನಮ್ಮ ಸರ್ಕಾರದ ಅವಧಿಯಲ್ಲಿಯೇ ಫ್ರುಟ್ ಸಾಪ್ಟ್ ವೇರ್ ನಲ್ಲಿ ರೈತರ ಖಾತೆಗಳಿಗೆ ಆಧಾರ್ ಲಿಂಕ್ ಮಾಡಲಾಗಿದೆ. ರೈತರಿಗೆ ನ್ಯಾಯ ಕೊಡದಿರುವ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ನಮ್ಮ ಅವಧಿಯಲ್ಲಿ ಪ್ರವಾಹ ಬಂದಾಗ ನಾವು 14 ಲಕ್ಷ ರೈತರ ಖಾತೆಗೆ ನೇರವಾಗಿ ಪರಿಹಾರದ ಹಣ ವರ್ಗಾವಣೆ ಮಾಡಿದ್ದೆವು‌” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

“ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಕಲ್ಯಾಣ ಕರ್ನಾಟಕ ಭಾಗಕ್ಕೆ ಬಜೆಟ್ ನಲ್ಲಿ ಮೀಸಲಿಟ್ಟ 3,000 ಕೋಟಿ ರೂ.ಗಳಲ್ಲಿ ಇದುವರೆಗೂ ಒಂದು ರೂಪಾಯಿ ಖರ್ಚಾಗಿಲ್ಲ. ಗೃಹ ಲಕ್ಷ್ಮೀ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಗೃಹಜ್ಯೋತಿ, ಯುವ ನಿಧಿ ಯೋಜನೆಗಳಿಂದಲೂ ಜನರಿಗೆ ಪ್ರಯೋಜನವಾಗಿಲ್ಲ. ಯಾವುದೇ ಗ್ಯಾರಂಟಿ ಯೋಜನೆಗಳೂ ಸಮರ್ಪಕವಾಗಿ ತಲುಪುತಿಲ್ಲ” ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದಲೂ ಪರಿಹಾರದ ಹಣ ಬಿಡುಗಡೆಯಾಗದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ಕೇಂದ್ರ ಸರ್ಕಾರ ಮೂರು ತಿಂಗಳಿಗೊಮ್ಮೆ ಇಡೀ ದೇಶಕ್ಕೆ ಎನ್ ಡಿ ಆರ್ ಎಫ್ ಹಣ ಬಿಡುಗಡೆ ಮಾಡುತ್ತದೆ. ರಾಜ್ಯ ಸರ್ಕಾರ ಎನ್ ಡಿ ಆರ್ ಎಫ್, ಎಸ್ ಡಿಆರ್ ಎಫ್ ನಿದಿಯಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಅಕೌಂಟ್ ನಲ್ಲಿ ಎಷ್ಟು ಹಣ ಇದೆ ಎಂದು ಸರ್ಕಾರ ಬಹಿರಂಗ ಪಡೆಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ, ಮಾಜಿ ಸಚಿವ ಕೆ. ಗೋಪಾಲಯ್ಯ, ಶಾಸಕಾರದ ಎಸ್ ರಘು, ರವಿ ಸುಬ್ರಮಣ್ಯ, ಕೆ. ರಾಮಮೂರ್ತಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...