ನನ್ನ ರಾಜಕೀಯ ನಿವೃತ್ತಿ ಬಗ್ಗೆ ಯಡಿಯೂರಪ್ಪನವರ ಹೇಳಿಕೆ ಅಪ್ಪಟ ಸುಳ್ಳು: ಡಿ ವಿ ಸದಾನಂದ ಗೌಡ

Date:

ಹೈಕಮಾಂಡ್ ಸೂಚನೆಯ ಮೇರೆಗೆ ಸದಾನಂದ ಗೌಡ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಿದ್ದಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ ವಿ ಸದಾನಂದ ಗೌಡ, ‘ಯಡಿಯೂರಪ್ಪನವರ ಹೇಳಿಕೆ ಬೇಸರ ಉಂಟು ಮಾಡಿದೆ, ಅದು ಅಪ್ಪಟ ಸುಳ್ಳು’ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ.

ಡಿ ವಿ ಸದಾನಂದ ಗೌಡ ರಾಜಕೀಯ ನಿವೃತ್ತಿ ಘೋಷಿಸಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಗುರುವಾರ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ, ‘ಸದಾನಂದ ಗೌಡರು ಚುನಾವಣಾ ರಾಜಕೀಯ ಮಾತ್ರ ತೊರೆಯಲಿದ್ದಾರೆ. ಅದು ಹೈಕಮಾಂಡ್ ಕೂಡ ಸೂಚಿಸಿತ್ತು. ಆದರೆ, ಪಕ್ಷದ ಚಟುವಟಿಕೆಗಳಲ್ಲಿ ಅವರು ಇನ್ನು ಮುಂದೆ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ’ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಯ ಬಗ್ಗೆ ಖಾಸಗಿ ಮಾಧ್ಯಮವೊಂದರ ಪ್ರತಿನಿಧಿಯ ಜೊತೆಗೆ ಮಾತನಾಡಿದ ಡಿ ವಿ ಸದಾನಂದ ಗೌಡ, ನಮ್ಮ ಪಕ್ಷದವರೇ ಆದ ಬಿ ಎಸ್ ಯಡಿಯೂರಪ್ಪ ದೊಡ್ಡ ರಾಜಕಾರಣಿ. ಅವರು ಈ ರೀತಿಯ ಸುಳ್ಳುಗಳನ್ನು ಹೇಳುವಂಥದ್ದು ಅದು ಒಳ್ಳೆಯದಲ್ಲ. ನನಗೆ ಬಹಳ ಬೇಸರವಾಗಿದೆ’ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

Sadaananda gowda

‘ನನ್ನ ನಿವೃತ್ತಿ ಬಗ್ಗೆ ಎಲ್ಲಿ ಬೇಕಾದರೂ ಪ್ರಮಾಣ ಮಾಡಿ ಹೇಳ್ತೀನಿ. ಯಡಿಯೂರಪ್ಪ ಏಕಾಏಕಿಯಾಗಿ ಈ ರೀತಿ ಹೇಳಬಾರದಿತ್ತು. ಪ್ರಾಯಶಃ ಅವರಿಗೆ ಈ ಹಿಂದೆ ಹೈಕಮಾಂಡ್‌ನವರು ಈ ಹಿಂದೆ ಅವರಿಗೆ ಈ ರೀತಿಯ ಎಚ್ಚರಿಕೆ ನೀಡಿ, ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವಂತೆ ಹೇಳಿರಬಹುದು.ಅದೇ ರೀತಿ ನನಗೂ ಹೇಳಿರಬಹುದೆಂದು ಭಾವಿಸಿ, ಹೇಳಿಕೆ ನೀಡಿರಲೂಬಹುದು. ಆದರೆ, ಅವರ ಈ ಹೇಳಿಕೆ ನನಗೆ ಬಹಳ ಬೇಸರ ಉಂಟು ಮಾಡಿದೆ.

‘ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ನನಗೆ ತಿಳಿಸಿದಾಗ ನೇರವಾಗಿ ರಾಜೀನಾಮೆ ಕೊಡಲು ಒಪ್ಪಿಕೊಂಡಿದ್ದೆ. ನಾನು ರಾಜೀನಾಮೆ ನೀಡಬಾರದು ಅಂತ ಸುಮಾರು 65 ಶಾಸಕರು ನನ್ನ ಕಾರಿಗೆ ಅಡ್ಡ ಮಲಗಿದ್ದರು. ಮನೆಯಲ್ಲಿ ಸಭೆ ಕೂಡ ಸೇರಿದ್ದರು. ನಾನು ಮುಖ್ಯಮಂತ್ರಿ ಸ್ಥಾನ ಬಿಡುವಾಗ ಕಣ್ಣೀರು ಹಾಕಿರಲಿಲ್ಲ. ನಾನು ಯಾವುದೇ ಭ್ರಷ್ಟಾಚಾರದಲ್ಲೂ ತೊಡಗಲಿಲ್ಲ. ನಾನು ಯಾವತ್ತಿಗೂ ಸ್ವಾಭಿಮಾನದ ರಾಜಕೀಯ ನಡೆಸಿದ್ದೇನೆಯೇ ಹೊರತು ಇನ್ನೊಬ್ಬನ ಕೈಗೊಂಬೆಯಾಗಿ ಕೆಲಸ ಮಾಡಲಿಲ್ಲ. ನನ್ನ ರಾಜಕೀಯ ನಿವೃತ್ತಿಗೆ ಹೈಕಮಾಂಡ್ ಸೂಚಿಸಿತ್ತು ಎನ್ನುವುದು ಅಪ್ಪಟ ಸುಳ್ಳು. ಯಡಿಯೂರಪ್ಪನವರು ಈ ರೀತಿಯ ಹೇಳಿಕೆ ನೀಡುವುದು ಸೂಕ್ತವಲ್ಲ ಎಂಬುದು ನನ್ನ ಅಭಿಪ್ರಾಯ’ ಎಂದು ಬೆಂಗಳೂರು ಉತ್ತರ ಕ್ಷೇತ್ರದ ಸಂಸದ, ಮಾಜಿ ಸಿಎಂ ಸದಾನಂದ ಗೌಡ ಹೇಳಿಕೆ ನೀಡಿದ್ದಾರೆ.

ಕಳೆದ ವಿಧಾನಸಭೆಯ ಫಲಿತಾಂಶದ ಬಳಿಕ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಜಗಜ್ಜಾಹೀರಾಗಿದೆ. ರಾಜ್ಯದಲ್ಲಿ ವಿಪಕ್ಷವಾಗಿರುವ ಬಿಜೆಪಿ ಇನ್ನೂ ಕೂಡ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಯಾರನ್ನೂ ಆಯ್ಕೆ ಮಾಡಿಲ್ಲ. ಈ ನಡುವೆ ಮುಂಬರುವ 2024ರ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭವಾಗುತ್ತಿದ್ದರೂ ಪಕ್ಷದ ಹಿರಿಯ ನಾಯಕರೊಳಗಡೆಯೇ ಈ ರೀತಿಯ ಬೆಳವಣಿಗೆ ನಡೆದಿರುವುದು ವಿವಾದ ಸೃಷ್ಟಿಸಿದೆ. ಮುಂದಿನ ದಿನಗಳಲ್ಲಿ ಏನೆಲ್ಲ ಬೆಳವಣಿಗೆ ನಡೆಯಲಿದೆ ಎಂದು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...