ಬಿಜೆಪಿಯ ಲೋಕಸಭೆ ಟಿಕೆಟ್ ತಿರಸ್ಕರಿಸಿದ್ದಕ್ಕೆ ಇಡಿ ದಾಳಿ; ಕಾಂಗ್ರೆಸ್‌ ಶಾಸಕಿ ಆರೋಪ

Date:

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ನೀಡುವುದಾಗಿ ಬಿಜೆಪಿ ಪ್ರಸ್ತಾಪ ಇಟ್ಟಿತ್ತು. ಅದನ್ನು ತಿರಸ್ಕರಿಸಿದ ಕಾರಣಕ್ಕೆ ತಮ್ಮ ವಿರುದ್ಧ ಜಾರಿ ನಿರ್ದೇಶನಾಯ (ಇಡಿ) ದಾಳಿ ನಡೆಸಿದೆ ಎಂದು ಜಾರ್ಖಂಡ್‌ನ ಕಾಂಗ್ರೆಸ್‌ ಶಾಸಕಿ ಅಂಬಾ ಪ್ರಸಾದ್ ಆರೋಪಿಸಿದ್ದಾರೆ.

“ಅವರು (ಇಡಿ) ಮುಂಜಾನೆ ಬಂದರು, ಇಡೀ ದಿನ ಚಿತ್ರಹಿಂಸೆ ಕೊಟ್ಟರು. ನನ್ನನ್ನು ಗಂಟೆಗಟ್ಟಲೆ ಒಂದೇ ಕಡೆ ನಿಲ್ಲುವಂತೆ ಮಾಡಿದರು. ನನಗೆ ಬಿಜೆಪಿಯಿಂದ ಹಜಾರಿಬಾಗ್ ಲೋಕಸಭಾ ಟಿಕೆಟ್ ನೀಡುವುದಾಗಿ ಹೇಳಲಾಗಿತ್ತು. ಅದನ್ನು ನಾನು ನಿರ್ಲಕ್ಷಿಸಿದ್ದೇನೆ. ನಂತರ, ನನ್ನ ಮೇಲೆ ಒತ್ತಡ ಹೇರಲಾಯಿತು” ಎಂದು ಹೇಳಿದ್ದಾರೆ.

“ಆರ್‌ಎಸ್‌ಎಸ್‌ನ ಅನೇಕರು ಬಿಜೆಪಿಯಿಂದ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡ ಹೇರಿದ್ದರು. ನಾನು ಅದನ್ನೂ ಕಡೆಗಣಿಸಿದೆ. ಅವರು ನನ್ನನ್ನು ಹಜಾರಿಬಾಗ್‌ನಲ್ಲಿ ಪ್ರಬಲ ಅಭ್ಯರ್ಥಿ ಎಂದು ನೋಡುತ್ತಿದ್ದಾರೆ. ಏಕೆಂದರೆ, ನಾವು ನಿರಂತರವಾಗಿ ಬಾರ್ಕಗಾಂವ್ ಸ್ಥಾನಗಳನ್ನು ಗೆಲ್ಲುತ್ತೇವೆ. ನಾವು ಕಾಂಗ್ರೆಸ್‌ನವರು, ಬಿಜೆಪಿಯವರಲ್ಲ. ಆದ್ದರಿಂದ ನಾವು ಸುಲಭವಾಗಿ ದಾಳಿಗೆ ಗುರಿಯಾಗಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ದೇಶ ವಿಭಜಿಸಲು, ಸೌಹಾರ್ದತೆ ಕದಡಲು ಸಿಎಎ ಜಾರಿ: ನಟ ಕಮಲ್ ಹಾಸನ್

ಮಂಗಳವಾರ ಮುಂಜಾನೆ, ಭೂ ಮತ್ತು ವರ್ಗಾವಣೆ-ಪೋಸ್ಟಿಂಗ್ ಹಗರಣಗಳಿಗೆ ಸಂಬಂಧಿಸ ಪ್ರಕರಣಗಳಲ್ಲಿ ಕಾಂಗ್ರೆಸ್ ಶಾಸಕಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ದಾಳಿ ನಡೆಸಿದೆ. ಶಾಸಕಿಯ ರಾಂಚಿಯ ಮನೆ ಮತ್ತು ಹಜಾರಿಬಾಗ್‌ನಲ್ಲಿರುವ ಅವರ ಮನೆಗಳ ಮೇಲೆ ದಾಳಿ ನಡೆದಿದೆ. ಏಜೆನ್ಸಿ ಮೂಲಗಳ ಪ್ರಕಾರ, ಬೆಳಿಗ್ಗೆ ಪ್ರಾರಂಭವಾದ ದಾಳಿ ತಡರಾತ್ರಿಯವರೆಗೂ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...