ಸೋನಿಯಾ, ರಾಹುಲ್‌ ವಿರುದ್ಧ ಇ.ಡಿ ದೋಷಾರೋಪ ಪಟ್ಟಿ ಸಲ್ಲಿಕೆ: ಮೋದಿ-ಅಮಿ‌ತ್‌ ಶಾ ವಿರುದ್ಧ ಸಿಎಂ ಕಿಡಿ

Date:

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯ (ಇ.ಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

“ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ. ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ” ಎಂದು ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದ್ದಾರೆ.

“ಸ್ವಾಯತ್ತ ತನಿಖಾ ಸಂಸ್ಥೆಯಾದ ಇ.ಡಿಯನ್ನು ವಿರೋಧ ಪಕ್ಷದ ನಾಯಕರ ವಿರುದ್ಧ ದ್ವೇಷ ಸಾಧಿಸಲು ಆಯುಧವನ್ನಾಗಿ ಬಳಸುತ್ತಾ ಬಂದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಾಗಿರುವ ಸುಳ್ಳು ಆರೋಪವನ್ನು ಬಳಸಿಕೊಂಡಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದಂತೆಯೇ ಈ ದ್ವೇಷದ ರಾಜಕಾರಣ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಚಾರಣೆಯ ನೆಪದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖ ನಾಯಕರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಪೀಡಿಸಿದ ಇ.ಡಿ ಯು ಅದರಿಂದ ಯಾವುದೇ ಫಲ ಸಿಗದೆ ಇದ್ದಾಗ ಕಲ್ಪಿತ ಕತೆಗಳನ್ನು ಕಟ್ಟಿ ಆರೋಪ ಪಟ್ಟಿ ಸಲ್ಲಿಸಿದೆ” ಎಂದಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ದ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬೀದಿಗೆ ಇಳಿದು ಇದನ್ನು ಪ್ರತಿಭಟಿಸಲಿದ್ದಾರೆ. ಈ ಪ್ರತಿರೋಧಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕಾಗಿದೆ” ಎಂದು ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...