ಬಿಜೆಪಿ ಸೇರದಿದ್ದರೆ ಒಂದು ತಿಂಗಳಲ್ಲೇ ನಮ್ಮ ಬಂಧನ: ಎಎಪಿ ನಾಯಕಿ ಅತಿಶಿ

Date:

“ಬಿಜೆಪಿ ಸೇರುವಂತೆ ನಮ್ಮ ಮೇಲೆ ಒತ್ತಡ ಹಾಕಲಾಗುತ್ತಿದೆ. ಬಿಜೆಪಿ ಸೇರದಿದ್ದರೆ ಒಂದು ತಿಂಗಳ ಒಳಗಾಗಿ ನಮ್ಮ ಬಂಧನ ಮಾಡಲಾಗುವುದು ಎಂದು ಬೆದರಿಕೆ ಹಾಕಲಾಗುತ್ತಿದೆ” ಎಂದು ದೆಹಲಿ ಹಣಕಾಸು ಸಚಿವೆ, ಎಎಪಿ ನಾಯಕಿ ಅತಿಶಿ ಮರ್ಲೆನಾ ಆರೋಪಿಸಿದರು.

ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಸಚಿವೆ ಅತಿಶಿ, “ನೀವು ಬಿಜೆಪಿ ಸೇರ್ಪಡೆಯಾಗಿ ನಿಮ್ಮ ರಾಜಕೀಯ ಜೀವನ ಕಾಪಾಡಿಕೊಳ್ಳಿ. ಬಿಜೆಪಿ ಸೇರ್ಪಡೆಯಾಗದಿದ್ದರೆ, ಇಡಿ ನಿಮ್ಮನ್ನು ಬಂಧಿಸಲಿದೆ ಎಂದು ನನ್ನ ಆತ್ಮೀಯರ ಮೂಲಕ ನನಗೆ ತಿಳಿಸಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಆಮ್‌ ಆದ್ಮಿ ಪಕ್ಷವನ್ನು ಮತ್ತು ಅದರ ಎಲ್ಲ ನಾಯಕರನ್ನು ಸೋಲಿಸಲು, ನಾಶ ಮಾಡಲು ನಿರ್ಧಾರ ಮಾಡಿದ್ದಾರೆ. ಈ ಹಿಂದೆ ಪ್ರಮುಖ ನಾಯಕರನ್ನು ಬಂಧಿಸಿ ಜೈಲಿಗಟ್ಟಿದೆ. ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಅವರನ್ನು ಬಂಧಿಸಲಾಗಿದೆ. ಈಗ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ” ಎಂದರು.

“ಈಗ ಲೋಕಸಭೆ ಚುನಾವಣೆಗೂ ಮುನ್ನ ಎಎಪಿಯ ನಾಲ್ವರು ನಾಯಕರನ್ನು ಬಂಧಿಸಲು ಬಿಜೆಪಿ ಮುಂದಾಗಿದೆ. ಒಂದು ತಿಂಗಳೊಳಗೆ ನನ್ನನ್ನು, ಸೌರಬ್ ಭಾರದ್ವಾಜ್, ದುರ್ಗೇಶ್ ಪಾಟಕ್, ರಾಘವ್ ಚಡ್ಡಾ ಅವರನ್ನು ಬಂಧಿಸಲಿದೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?  ಕೇಜ್ರಿವಾಲ್ ಫೋನ್‌ನಿಂದ ಲೋಕಸಭಾ ಚುನಾವಣೆಗೆ ಎಎಪಿ ತಂತ್ರದ ವಿವರ ಪಡೆಯಲು ಇಡಿ ಯತ್ನಿಸುತ್ತಿದೆ: ಅತಿಶಿ 

“ಬಿಜೆಪಿಯು ಅರವಿಂದ್ ಕೇಜ್ರಿವಾಲ್‌ ಅವರನ್ನು ಬಂಧಿಸಿದರೆ ಎಎಪಿ ಸಂಪೂರ್ಣವಾಗಿ ನಾಶವಾಗಲಿದೆ ಎಂದುಕೊಂಡಿತ್ತು. ಆದರೆ ಭಾನುವಾರದ ರ್‍ಯಾಲಿಯಿಂದಾಗಿ, ಪ್ರತಿ ದಿನ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ನಾಲ್ವರು ನಾಯಕರನ್ನು ಬಂಧಿಸಿದರೆ ಸಾಲದು ಎಂದು ಬಿಜೆಪಿಗೆ ತಿಳಿದಿದೆ. ಆದ್ದರಿಂದಾಗಿ ಈಗ ಮತ್ತೆ ನಾಲ್ವರು ನಾಯಕರನ್ನು ಬಂಧಿಸಲು ಮುಂದಾಗಿದೆ” ಎಂದು ಹೇಳಿದರು.

“ನಾವು ಬಿಜೆಪಿಯ ಬೆದರಿಕೆಯಿಂದ ಆತಂಕಕ್ಕೆ ಒಳಗಾಗುವವರಲ್ಲ. ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ನಾವು ಈ ದೇಶವನ್ನು ಉಳಿಸಲು, ದೇಶದ ಸಂವಿಧಾನ ಉಳಿಸಲು ಕೆಲಸ ಮಾಡುತ್ತಿರುತ್ತೇವೆ. ನೀವು ಒಬ್ಬರನ್ನು ಬಂಧಿಸಿ ಜೈಲಿಗೆ ಹಾಕಿದರೆ, ಮತ್ತೆ ಹತ್ತು ಜನರು ಅರವಿಂದ್ ಕೇಜ್ರಿವಾಲ್ ಪರವಾಗಿ ಹೋರಾಡಲಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಇನ್ನು ಭಾನುವಾರ ಟ್ವೀಟ್ ಮಾಡಿ ಎಎಪಿ ನಾಯಕಿ ಅತಿಶಿ ಮರ್ಲೆನಾ ಸ್ಫೋಟಕ ಮಾಹಿತಿ ನೀಡುವುದಾಗಿ ತಿಳಿಸಿದ್ದರು. ಈ ನಡುವೆ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದಾಗ ಅತಿಶಿ ಹೆಸರು ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...